![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2022, 6:22 PM IST
ಲಿಂಗಸುಗೂರು: ಐದನಾಳ ಗ್ರಾಮದಲ್ಲಿ ಚರಂಡಿಗೆ ಕೆಲವು ವ್ಯಕ್ತಿಗಳು ಅಡ್ಡಲಾಗಿ ಒಡ್ಡು ನಿರ್ಮಿಸಿದ್ದರಿಂದ ಚರಂಡಿ ನೀರು ಹರಿದು ಹೋಗಲು ಆಗದೇ ರಸ್ತೆಯಲ್ಲಿ ನಿಲ್ಲುತ್ತಿದ್ದರಿಂದ ಪರದಾಡುವಂತಾಗಿದೆ.
ಕೂಡಲೇ ಈ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿ ಗ್ರಾಮದ ನಿವಾಸಿಗಳು ತಾಪಂ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಚರಂಡಿ ನೀರಿನ ಹರಿಗೆ ಕೆಲವರು ಉದ್ದೇಶ ಪೂರ್ವಕವಾಗಿ ಒಡ್ಡು ಹಾಕಿದ್ದರಿಂದ ಚರಂಡಿ ನೀರು ಸರಾಗವಾಗಿ ಮುಂದೆ ಹರಿಯದೇ ಪಕ್ಕದಲ್ಲಿರುವ ದಲಿತ ಕಾಲೋನಿ ರಸ್ತೆಯಲ್ಲಿ ನಿಲ್ಲುತ್ತಿದೆ. ಇದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಬೇಕಾಗಿದೆ. ಅಲ್ಲದೇ ಮಲೇರಿಯಾ, ಡೆಂಘ್ಯೂದಂತಹ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿವೆ. ಈ ಬಗ್ಗೆ ಗ್ರಾಪಂಗೆ ಸಾಕಷ್ಟು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ, ಚರಂಡಿ ನೀರು ಹರಿವಿಗೆ ಅಡ್ಡಲಾಗಿರುವ ಒಡ್ಡು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಶಿವು, ದುರಗಮ್ಮ, ಹನುಮಂತ, ವೀರಭದ್ರ, ಬಸಲಿಂಗಪ್ಪ, ಶರಣಮ್ಮ, ಮಲ್ಲಮ್ಮ, ದೇವಮ್ಮ, ಹುಲಗಮ್ಮ ಸೇರಿದಂತೆ ಇತರರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.