30ರವರೆಗೆ ಕಂಟೇನ್ಮೆಂಟ್ ವಲಯ ಲಾಕ್‌ಡೌನ್
Team Udayavani, Jun 29, 2020, 9:19 AM IST
ವಿಜಯಪುರ: ಕೇಂದ್ರ ಸರ್ಕಾರದ ಆದೇಶದಂತೆ ಮೇ 30 ರಂದು ಕಂಟೇನ್ಮೆಂಟ್ ವಲಯಗಳಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‌ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಸರ್ಕಾರದ ಆದೇಶದಂತೆ ಕಂಟೇನ್ಮೆಂಟ್ ವಲಯ ಹೊರತುಪಡಿಸಿದ ಪ್ರದೇಶಗಳಲ್ಲಿ ಹಂತಹಂತವಾಗಿ ನಿಷೇಧಿತ ಚಟುವಟಿಕೆ ತೆರೆಯಲು ಲಾಕ್‌ಡೌನ್ ಸಡಿಲಿಕೆಗಾಗಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಾರಣ ರಾಜ್ಯ ಸರ್ಕಾರ 30-5-2020ರಲ್ಲಿ ಜಾರಿಗೊಳಿಸಿರುವ ಕಂಟೇನ್ಮೆಂಟ್ ವಲಯಗಳಲ್ಲಿನ ಲಾಕ್‌ಡೌನ್ ಅವಧಿ ಯನ್ನು 30-6-2020ರವರೆಗೆ ವಿಸ್ತರಿಸಲಾಗಿದೆ ಎಂದು ವಿವರಿಸಿದ್ದಾರೆ.
5-7-2020 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳು ಅಂದರೆ ದಿ.2-8-2020ರವರೆಗಿನ ಎಲ್ಲ ಭಾನುವಾರದ ದಿನಗಳಂದು ಪೂರ್ಣ ದಿನದ ಲಾಕ್‌ಡೌನ್ ಇರಲಿದೆ. ಆದರೆ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡ್‌ಗಳು ಮತ್ತು ಕಾರ್ಪೋರೇಷನ್‌ಗಳು ತುರ್ತು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವಂತಹ ಇಲಾಖೆಗಳು, ಕಚೇರಿಗಳು, ಬೋರ್ಡ್ ಗಳು ಮತ್ತು ಕಾಪೋìರೇಶನ್ ಗಳನ್ನು ಹೊರತುಪಡಿಸಿ ಈಗಿರುವ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10ರಿಂದ ಎಲ್ಲ ಶನಿವಾರ ದಿನಗಳಂದು 8-8-2020ರವರೆಗೆ ಮುಚ್ಚಲ್ಪಡುತ್ತವೆ. ರಾಜ್ಯಾದ್ಯಂತ ನಿತ್ಯ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.