ಪಂಚಪೀಠಗಳ ಕೊಡುಗೆ ಅಪಾರ: ರಂಭಾಪುರಿ ಜಗದ್ಗುರು
ಕೆಲವರು ಮೂಲ ಗುರುಪೀಠ ಕೊಟ್ಟ ಕೊಡುಗೆಯನ್ನು ಮರೆಯುತ್ತಿದ್ದಾರೆ
Team Udayavani, May 23, 2022, 6:08 PM IST
ಬಸವನಬಾಗೇವಾಡಿ: ವೀರಶೈವ ಲಿಂಗಾಯತ ಧರ್ಮಕ್ಕೆ ಬಸವಣ್ಣನವರು ಹಾಗೂ ಪಂಚಪೀಠಗಳ ಕೊಡುಗೆ ಅಪಾರವಾಗಿದೆ. ಬಸವಣ್ಣ ಪಂಚಪೀಠಗಳು ಧರ್ಮದ ಎರಡು ಮುಖಗಳಿದ್ದಂತೆ ಎಂದು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪಪೂ ಕಾಲೇಜ್ ಆವರಣದಲ್ಲಿ ಪಟ್ಟಣದ ಪದ್ಮರಾಜ ಒಡೆಯರ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಬಸವ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಪಂಚಪೀಠಗಳು ಬಸವಣ್ಣನವರನ್ನು ಗೌರವದಿಂದ ಕಾಣುತ್ತವೆ. ಬಸವಣ್ಣನವರ ಗುರುಭಕ್ತಿ ವರ್ಣನೆ ಮಾಡಲು ಶಬ್ದಗಳಿಂದ ಸಾಧ್ಯವಿಲ್ಲ. ಗುರುಶಿಷ್ಯರ ಸಂಬಂಧಕ್ಕೆ ಅವರು ಹೊಸ ಭಾಷೆ ಬರೆದಿದ್ದಾರೆ. ಅವರು ಘನವಾದ ವ್ಯಕ್ತಿತ್ವ ಹೊಂದಿದ್ದರು. ಬಸವಣ್ಣನವರನ್ನು ಬೆಳಸುವ ಭರಾಟೆಯಲ್ಲಿ ಕೆಲವರು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಹೇಳಿದರು.
ವೀರಶೈವ ಧರ್ಮ ಪ್ರಾಚೀನ ಧರ್ಮವಾಗಿದೆ. ಪಂಚಪೀಠಗಳು ಸೇರಿದಂತೆ ಶಾಖಾ ಮಠಗಳನ್ನು ಧರ್ಮ ಜಾಗೃತಿಯಲ್ಲಿ ಪ್ರಮುಖ ಪಾತ್ರವಹಿಸಿವೆ. ಆದರೆ ಕೆಲವರು ಮೂಲ ಗುರುಪೀಠ ಕೊಟ್ಟ ಕೊಡುಗೆಯನ್ನು ಮರೆಯುತ್ತಿದ್ದಾರೆ ಎಂದು ಹೇಳಿದರು. ಇಂದು ಜನರು ಹಣ ಅಂತಸ್ತಿಗೆ ಬೆನ್ನು ಹತ್ತಿದ್ದಾರೆ. ನವ ನಾಗರಿಕತೆಗೆ ಮನ ಸೋತು ಎಲ್ಲವನ್ನು ಮರೆಯುತ್ತಿದ್ದಾರೆ. ನಾಗರಿಕ ಸಮಾಜದಲ್ಲಿ ಸಂಸ್ಕೃತಿ ಮೀರಿ ನಡೆಯುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
ಆಲಮೇಲದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಮಾತನಾಡಿ, ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು ಬಸವನಾಡಿನಲ್ಲಿ ಒಳ್ಳೆಯ ವಾಗ್ಮಿಗಳು. ತಮ್ಮ ಪ್ರವಚನ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಭಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ಪಟ್ಟಾಧಿಕಾರದ ರಜತ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು, ಮುಖಂಡ ಶಿವನಗೌಡ ಬಿರಾದಾರ ಮಾತನಾಡಿದರು. ತಡವಲಗಾದ ರಾಚೋಟೇಶ್ವರ ಶಿವಾಚಾರ್ಯ ಶ್ರೀಗಳು, ಮುಳವಾಡದ ಸಿದ್ದಲಿಂಗ ಶಿವಾಚಾರ್ಯ ಶ್ರೀಗಳು, ಯಂಕಚಿಯ ರುದ್ರಮುನಿ ಶಿವಾಚಾರ್ಯ ಶ್ರೀಗಳು, ಬಳವಾಟದ ಸೋಮಶೇಖರ ಶಿವಾಚಾರ್ಯ ಶ್ರೀಗಳು, ಜೇರಟಗಿಯ ಮಡಿವಾಳ ಶಾಸ್ತ್ರಿ, ಹನುಮಂತರಾಯಗೌಡ ಪಾಟೀಲ, ಸುರೇಶಗೌಡ ಪಾಟೀಲ, ಮುದುಕಪ್ಪ ಬಾರಿಗಿಡದ(ಅಸ್ಕಿ), ಶೇಖರ ಗೊಳಸಂಗಿ,
ಈರನಗೌಡ ಪಾಟೀಲ, ಬಸವರಾಜ ಗೊಳಸಂಗಿ ಇದ್ದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಸ್ವಾಗತಿಸಿದರು. ಎಚ್.ಬಿ. ಬಾರಿಕಾಯಿ ನಿರೂಪಿಸಿದರು. ರವಿ ರಾಠೊಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.