ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅಗತ್ಯ
Team Udayavani, Jan 11, 2022, 6:03 PM IST
ಚಡಚಣ: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಜನರ ಆರೋಗ್ಯದ ಜೊತೆಗೆ ಮತಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆಯಿದ್ದು ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಶಾಸಕ ದೇವಾನಂದ ಚವ್ಹಾಣ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎರಡನೇ ಅಲೆಯಲ್ಲಿ ನಮ್ಮ ಸಂಬಂಧಿಕರನ್ನು, ಪ್ರಾಮಾಣಿಕ ಅಧಿಕಾರಿಗಳನ್ನು ಕಳೆದುಕೊಂಡಿದ್ದೇವೆ. ರಾಜ್ಯದಲ್ಲಿ ಪ್ರಾರಂಭವಾದ ಮೂರನೇ ಅಲೆಯನ್ನು ಬಹಳ ಜಾಣ್ಮೆಯಿಂದ ಎದುರಿಸಬೇಕಾಗಿದೆ ಎಂದು ಅವರು, ದೇಶದ ಬೆನ್ನೆಲುಬಾಗಿ ನಿಲ್ಲಬೇಕಾದ ಕೃಷಿ ಇಲಾಖೆ ಅಧಿಕಾರಿಗಳು ಹಣದ ಆಸೆಗೆ ಕಚೇರಿಗಳಿಗೆ ಸುಖಾ ಸುಮ್ಮನೆ ರೈತರನ್ನು ಅಲೆದಾಡಿಸಬೇಡಿ ಎಂದರು.
ವಿವಿಧ ಇಲಾಖೆಗಳಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು ಮಾರ್ಚ್ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ನೀಡಬೇಕು. ಪಟ್ಟಣ ಸೇರಿದಂತೆ ತಾಲೂಕಿನಲ್ಲಿನ ದಾಬಾಗಳಲ್ಲಿ ಅವ್ಯಾಹತವಾಗಿ ನಡೆದಿರುವ ಅಕ್ರಮ ಚಟುವಟಿಕೆಗಳಿಗೆ ಅಬಕಾರಿ ಇಲಾಖೆ ಅಕಾರಿಗಳು ಕಡಿವಾಣ ಹಾಕಬೇಕು. ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ಶೇ. 50 ಯೋಜನೆಗಳು ಮೂಲಭೂತ ಸೌಲಭ್ಯ ಇಲ್ಲದವರಿಗೆ ಮುಟ್ಟುತ್ತಿವೆ. ಕೋವಿಡ್ ಮುಗಿದ ತಕ್ಷಣ ಪಂಚಾಯ್ತಿ ಮಟ್ಟದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಭೆ ಆಯೋಜಿಸಿ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಯೋಜನೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.
ತಹಶೀಲ್ದಾರ್ ಸುರೇಶ ಚವಲರ, ತಾಪಂ ಆಡಳಿತಾಧಿಕಾರಿ ಬಸವರಾಜ ಬಿರಾದಾರ, ಇಒ ಸಂಜೀವ ಖಡಗೇಕರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.