ಸುವ್ಯವಸ್ಥಿತ ಚುನಾವಣೆಗೆ ಸ್ಪರ್ಧಿಗಳ ಸಹಕಾರ ಅಗತ್ಯ
Team Udayavani, Nov 29, 2021, 4:51 PM IST
ವಿಜಯಪುರ: ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ಮೇಲ್ಮನೆಯ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳು ತಮಗೆ ನೀಡಿದ ಗುರುತಿನ ಚೀಟಿಗಳನ್ನು ಕೌಂಟಿಂಗ್ ಮುಗಿಯುವವರೆಗೂ ಸುರಕ್ಷಿತವಾಗಿ ಇರಿಸಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಸುನೀಲಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಸ್ಪರ್ಧಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪರಿಷ್ಕೃತಗೊಂಡು ಚುನಾವಣಾ ಆಯೋಗದಿಂದ ಅಂತಿಮವಾಗಿ 411 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಅಂತಿಮವಾಗಿ ಕಣದಲ್ಲಿ ಏಳು ಜನ ಅಭ್ಯರ್ಥಿಗಳು ಉಳಿದಿದ್ದು ಸುವ್ಯವಸ್ಥಿತ ಚುನಾವಣೆಗೆ ಎಲ್ಲ ಅಭ್ಯರ್ಥಿಗಳು ಹಾಗೂ ಅವರ ಏಜೆಂಟರು ಚುನಾವಣೆ ಸಹಕರಿಸಬೇಕೆಂದು ಹೇಳಿದರು.
ಅದರಂತೆ ಕೋವಿಡ್ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ 500ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ನಿರ್ದೇಶನವಿದ್ದು, ಇದರೊಂದಿಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆ ಸೇರಿದಂತೆ ಸಾಮಾಜಿಕ ಅಂತರದಂತಹ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಈಗಾಗಲೇ ಈ ಚುನಾವಣೆಗೆ ಸಂಬಂಧಪಟ್ಟಂತೆ ಎರಡು ಜಿಲ್ಲೆಗಳಿಗೆ ಎಂಸಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರಚಾರಕ್ಕೆ ಬಳಸುವ ವಾಹನಗಳ ಪರವಾನಿಗೆಯನ್ನು ಚುನಾವಣಾಧಿಕಾರಿಗಳಿಂದ ಪಡೆಯಬೇಕೆಂದು ತಿಳಿಸಿದ ಅವರು, ಈ ಚುನಾವಣೆಯ ಪ್ರತಿಯೊಂದು ಬೂತ್‌ನಲ್ಲಿ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸಲಾಗಿದ್ದು ಅವರು ಎಲ್ಲದರ ಬಗ್ಗೆ ನಿಗಾ ವಹಿಸುತ್ತಾರೆ. ಚುನಾವಣಾ ಕಾರ್ಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಹಾಗೆಯೇ ಮತದಾನ ಜಾಗೃತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಚೋರಗಸ್ತಿ, ಹಾದಿಮನಿ ಸೇರಿದಂತೆ ಕ್ಷೇತ್ರದ ವಿವಿಧ ಸ್ಪರ್ಧಿಗಳು, ವಿವಿಧ ಪಕ್ಷಗಳು, ಸ್ಪರ್ಧಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.