ಸಹಕಾರಿ ಸಂಸ್ಥೆ ಅಭಿವೃದ್ದಿಗೆ ಗ್ರಾಹಕರ ಸಹಕಾರ ಅಗತ್ಯ

Team Udayavani, Sep 10, 2022, 5:23 PM IST

12-development

ಸಿಂದಗಿ: ಸಹಕಾರ ಕ್ಷೇತ್ರ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಎ.ಎಸ್‌. ಬಿರಾದಾರ ಹೇಳಿದರು.

ಪಟ್ಟಣದ ಅನಂತಲಕ್ಷ್ಮೀ ಸಭಾಭವನದಲ್ಲಿ ಜರುಗಿದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ 17ನೇ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೌಹಾರ್ದ ಸಹಕಾರಿ ಸಂಸ್ಥೆಗಳು ಬೆಳೆಯಬೇಕಾದಲ್ಲಿ ಗ್ರಾಹಕರ ಸಹಕಾರ ಅಗತ್ಯ. ಗ್ರಾಹರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಸದುಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಸಾಲ ಪಡೆದು ಅದನ್ನು ಸದುಪಯೋಗ ಮಾಡಿಕೊಂಡು ಜೀವನದಲ್ಲಿ ಆರ್ಥಿಕ ಜೀವನ ಸುಧಾರಿಸಿಕೊಳ್ಳಬೇಕು ಎಂದು ಹೇಳಿದರು. ಪಟ್ಟಣದ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ. ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಶ್ಲಾಘನಿಯ ಎಂದು ಹೇಳಿದರು.

ಕಸಾಪ ತಾಲೂಕಾಧ್ಯಕ್ಷ ರಾಜಸೇಖರ ಕೂಚಬಾಳ ಮಾತನಾಡಿ, ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆಗಳು ಆರ್ಥಿಕ ವ್ಯವಸ್ಥೆ ಅಭಿವೃದ್ಧಿಯಲ್ಲಿ ತನ್ನದೆಯಾದ ಪಾತ್ರ ವಹಿಸುತ್ತಿದೆ. ಸಿಂದಗಿ ಪಟ್ಟಣದ ಮದ್ಯಮ ವರ್ಗದ ಜನತೆಗೆ ಆರ್ಥಿಕ ಸಹಾಯ ಮಾಡುವ ಕಾಮಧೇನು, ಕಲ್ಪವೃಕ್ಷವಾಗಿ ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಗಜಾನನ ವಿವಿಧೋದ್ದೇಶ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿ, 2005 ರಲ್ಲಿ 4 ಲಕ್ಷ ಬಂಡವಾಳದೊಂದಿಗೆ ಆರಂಭವಾದ ಈ ಸಂಸ್ಥೆ 17 ವರ್ಷದಲ್ಲಿ ಸಂಸ್ಥೆಯ ಒಟ್ಟು ದುಡಿಯುವ ಬಂಡವಾಳ 20.20 ಕೋಟಿ ರೂ. ಆಗಿದೆ. ಪ್ರಸಕ್ತ ವರ್ಷದಲ್ಲಿ 54.57 ಲಕ್ಷ ರೂ. ಲಾಭದಲ್ಲಿದೆ ಎಂದರು.

ಇದೇ ಸಂದರ್ಭದಲ್ಲಿ 2021-22 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಅಂಕ ಪಡೆದು ಉತ್ತಮ ಸಾಧನೆ ಮಾಡಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಸಂಸ್ಥೆ ಉಪಾಧ್ಯಕ್ಷ ಎಸ್‌.ಆರ್‌. ಪೋತದಾರ, ನಿರ್ದೇಶಕರಾದ ಡಾ| ಗಿರೀಶ ಕುಲಕರ್ಣಿ, ವಿಜಯಕುಮಾರ ಕುಲಕರ್ಣಿ, ಶರದ್‌ ನಾಡಗೌಡ, ಚಿಂತಾಮಣಿ ಕುಲಕರ್ಣಿ, ಆನಂದರಾವ್‌ ಕುಲಕರ್ಣಿ, ವಿವೇಕಾನಂದ (ನಾರಾಯಣ) ಕುಲಕರ್ಣಿ, ಭೀಮಾಶಂಕರ ಕುಲಕರ್ಣಿ, ದಯಾನಂದ ಪತ್ತಾರ, ಎಂ.ಎ. ಸಿಂದಗೇರಿ, ಎಸ್‌.ಎಸ್‌. ಸೋಮಯಾಜಿ, ವಿ.ವೈ. ಮಿರ್ಜಿಕರ, ವ್ಯವಸ್ಥಾಪಕ ಅವಧೂತ ಜೋಶಿ ವೇದಿಕೆಯಲ್ಲಿದ್ದರು. ಹಿರಿಯರಾದ ಪಂಡಿತ್‌ ಕುಲಕರ್ಣಿ, ಎಚ್‌.ಟಿ. ಕುಲಕರ್ಣಿ ಸೇರಿದಂತೆ ಸಹಕಾರಿ ಸದಸ್ಯರು, ಬ್ಯಾಂಕ್‌ ಸಿಬ್ಬಂ ದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪವನ್‌ ಕುಲಕರ್ಣಿ ಸ್ವಾಗತಿಸಿದರು. ಸತೀಶ ಕುಲಕರ್ಣಿ ನಿರೂಪಿಸಿದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.