ಆಲಮಟ್ಟಿ ಭರ್ತಿಗೆ ಕ್ಷಣಗಣನೆ
Team Udayavani, Jul 16, 2018, 11:06 AM IST
ಆಲಮಟ್ಟಿ: ಕೃಷ್ಣೆಯ ಉಗಮ ಸ್ಥಾನ ಮಹಾಬಳೇಶ್ವರ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನೀರು ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಸಂಪೂರ್ಣವಾಗಿ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ.
519.60 ಮೀ. ಗರಿಷ್ಠ ಎತ್ತರದಲ್ಲಿ ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ 517.40 ಮೀ. ಎತ್ತರದಲ್ಲಿ 89.534 ಟಿಎಂಸಿ ಅಡಿ ನೀರು ಸಂಗ್ರಹವಾಗಿ ಒಂದು ಲಕ್ಷಕ್ಕೂ ಅಧಿಕ (1,00,667 ಕ್ಯೂಸೆಕ್) ನೀರು ಒಳಹರಿವಿನ ಮೂಲಕ ಹರಿದು ಬರುತ್ತಿದೆ. ಇದರಿಂದ ಜಲಾಶಯಕ್ಕೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬಂದು ಜಲಾಶಯದಲ್ಲಿ ನೀರಿನ ಸಂಗ್ರಹಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಜಲಾಶಯ ಸಂಪೂರ್ಣವಾಗಿ ತುಂಬಲು ಕೇವಲ 2.20 ಮೀ. ಮಾತ್ರ ಬಾಕಿಯಿದೆ.
ಕಳೆದ ವರ್ಷ ಇದೇ ದಿನದಂದು ಜಲಾಶಯದಲ್ಲಿ 512.55 ಮೀ. ಎತ್ತರದಲ್ಲಿ 44.429 ಟಿಎಂಸಿ ಅಡಿ ನೀರು ಸಂಗ್ರವಾಗಿ 3831 ಕ್ಯೂಸೆಕ್ ನೀರು ಒಳಹರಿವಿತ್ತು. ಕಳೆದ ವರ್ಷಕ್ಕಿಂತಲೂ ಈ ಬಾರಿ ಜಲಾಶಯ ಬೇಗ ತುಂಬುತ್ತಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ನೀರು ತಲುಪುತ್ತದೆ ಎಂದು ಆಶಾಭಾವನೆಯಿಂದ ನೋಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.