ವಿಜಯಪುರದಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು: 43ಕ್ಕೇರಿದ ಸಂಖ್ಯೆ
Team Udayavani, Apr 30, 2020, 1:27 PM IST
ವಿಜಯಪುರ: ಗುರುವಾರ ಬಿಡುಗಡೆಯಾದ ಹೆಲ್ತ್ ಬುಲಿಟಿನ್ ನಲ್ಲಿ ಜಿಲ್ಲೆಯ ಮೊದಲ ಸೋಂಕಿತೆಯ ಸಂಪರ್ಕದಿಂದ ಮತ್ತೆ ಇಬ್ಬರಿಗೆ ಸೋಂಕು ತಾಗಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ.
ಗುರುವಾರ ಪತ್ತೆಯಾದ ಸೋಂಕಿತರಲ್ಲಿ 62 ವರ್ಷದ ವ್ಯಕ್ತಿಯನ್ನು ಪಿ-537 ಹಾಗೂ 33 ವರ್ಷದ ಸೋಂಕಿತ ಪಿ-538 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.
ಈ ಇಬ್ಬರು ಸೋಂಕಿತರು ಜಿಲ್ಲೆಯ ಮೊದಲ ಸೋಂಕಿತ ವೃದ್ಧೆ ಪಿ- 221 ಇವರ ಸಂಬಂಧಿಗಳಾಗಿದ್ದು, ನಗರದ ಸೀಲ್ ಡೌನ್ ಪ್ರದೇಶದ ಕ್ಲಸ್ಟರ್ ಝೋನ್ ನಲ್ಲಿರುವ ಪ್ರದೇಶದ ನಿವಾಸಿಗಳೇ ಆಗಿದ್ದಾರೆ.
ಈ ಇಬ್ಬರೊಂದಿಗೆ ಜಿಲ್ಲೆಯ ಮೊದಲ ಸೋಂಕಿತ ಪಿ-221 ವೃದ್ಧೆಯಿಂದಲೇ 26 ಜನರಿಗೆ ಸೋಂಕು ಹರಡಿದೆ.
ಜಿಲ್ಲೆಯ ಮೊದಲ ಸೋಂಕಿತ ವೃದ್ಧೆ ಸೇರಿದಂತೆ 43 ಸೋಂಕಿತರಲ್ಲಿ ಸಂಪೂರ್ಣ ಗುಣಮುಖರಾಗಿ 6 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಸೋಂಕಿತ ಇಬ್ಬರು ಈಗಾಗಲೇ ಮೃತಪಟ್ಟಿದ್ದು, ಹೊಸ ಸೋಂಕಿತರು ಸೇರಿದಂತೆ ಸಕ್ರಿಯ 35 ರೋಗಿಗಳು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.