ಉಡುಪಿ ಜಿಲ್ಲೆಯ ಕಾರ್ಕಳದ 13 ಯುವಕರಿಗೆ ವಿಜಯಪುರದಲ್ಲಿ ಪುರ್ನಸತಿ
Team Udayavani, Mar 30, 2020, 11:19 PM IST
ವಿಜಯಪುರ : ಮಹಾರಾಷ್ಟ್ರದ ಭಾರಾಮತಿಯಿಂದ ಉಡುಪಿ ಜಿಲ್ಲೆಗೆ ತೆರಳುತ್ತಿದ್ದ 13 ಯುವಕರ ತಂಡ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಸಿಲುಕಿದ್ದ ಕಾರ್ಕಳದ 13 ಯುವಕರಿಗೆ ಜಿಲ್ಲಾಧಿಕಾರಿ ನೇತೃತ್ವ ಅಧಿಕಾರಿಗಳು ಪುನರ್ವಸತಿ ಕಲ್ಪಿಸಿ ಮಾನವೀಯತೆ ತೋರಿದ್ದಾರೆ.
ಲಾಕ್‍ಡೌನ್‍ನಿಂದ ಅನ್ನಕ್ಕೂ ಪರದಾಡುವ ಸೂರಿಲ್ಲದವರ ಕುರಿತು ಖುದ್ದು ಪರಿಶೀಲಿಸಲು ಸೋಮವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಸಿಇಓ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗರವಾಲ್ ಅವರ ತಂಡ ನಗರ ಪ್ರದಕ್ಷಿಣೆ ನಡೆಸಿತ್ತು. ಈ ಹಂತದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ 13 ಹುಡುಗರ ತಂಡ ಕಣ್ಣಿಗೆ ಬಿದ್ದಿದೆ. ಕೂಡಲೇ ಅವರ ಸಮಸ್ಯೆ ಆಲಿಸಲು ಮುಂದಾದ ಈ ಅಧಿಕಾರಿಗಳ ತಂಡ, ಊಟ-ವಸತಿ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದ ವಿಷಯ ಬೆಳಕಿಗೆ ಬಂದಿದೆ.
ಕೂಡಲೇ ಈ ಯುವಕರಿಗೆ ಆರೋಗ್ಯ ತಪಾಸಣೆಗೆ ನಡೆಸಿ, ನಗರದ ಕಾಕಾ ಕಾರ್ಖಾನಿಸ್ ಕಲ್ಯಾಣ ಮಂಟಪದಲ್ಲಿ ವಸತಿ ಹಾಗೂ ಊಟ-ಉಪಹಾರ ಸಹಿತ ತಾತ್ಕಾಲಿಕ ಪುರ್ನಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಲಾಕ್‍ಡೌನ್ ಆದೇಶ ಜಾರಿಯಲ್ಲಿರುವ ಕಾರಣ ನಿರ್ಬಂಧ ಉಲ್ಲಂಘಿಸಿ ಬೇರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಬಾರದು. ಸಂಕಷ್ಟದಲ್ಲಿ ಇದ್ದರಿಗೆ ಜಿಲ್ಲಾಡಳಿತ ತಕ್ಷಣ ನೆರವಿಗೆ ಧಾವಿಸಲಿದೆ ಎಂದು ಎಸ್ಪಿ ಅಗರವಾಲ್ ಹೇಳಿದರು.
ಇದಲ್ಲದೇ ನಗರ ಪರಿವೀಕ್ಷಣೆ ಸಂದರ್ಭದಲ್ಲಿ ಅಲೇಮಾರಿ ಜನಾಂಗದ 100 ಕ್ಕೂ ಹೆಚ್ಚು ಅಲೇಮಾರಿಗಳು ಕಂಡು ಬಂದಿದ್ದು, ಅವರ ಸಮಸ್ಯೆ ಆಲಿಸಿದರು. ಆಲ್ಲದೇ ತಕ್ಷಣದಿಂದಲೇ ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ತಲುಪಿಸುವ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಪಾಲಿಕೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.