ಕೋವಿಡ್ ಟೆಸ್ಟ್ ಗೆ ಸಹಕರಿಸಿ
Team Udayavani, Nov 22, 2020, 6:02 PM IST
ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಇರುವ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಕೋವಿಡ್-19 ತಪಾಸಣೆಗೊಳಪಡಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ತಂಡದೊಂದಿಗೆ ಸಹಕರಿಸಬೇಕುಎಂದು ತಹಶೀಲ್ದಾರ್ ಜಿ.ಎಸ್. ಮಳಗಿ ತಿಳಿಸಿದರು.
ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿಕೋವಿಡ್-19 ಸ್ಕ್ರೀನಿಂಗ್ ಬಗ್ಗೆ ಮಾಹಿತಿನೀಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ ಮಾತನಾಡಿ, ಈಗಾಗಲೇ ಪದವಿ ಕಾಲೇಜುಗಳು ಆರಂಭಗೊಂಡಿವೆ. ವಿದ್ಯಾರ್ಥಿಗಳು ನಿಧಾನವಾಗಿಕಾಲೇಜಿನತ್ತ ಬರುತ್ತಿದ್ದಾರೆ. ಹೀಗೆಕಾಲೇಜಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು. ಬೇರೆಕಡೆ ಇರುವವರನ್ನೂ ಕರೆಸಿ ತಪಾಸಣೆಗೆ ಒಳಪಡಿಸಬೇಕು. ನೆಗೆಟಿವ್ ವರದಿಬಂದವರನ್ನು ಮಾತ್ರ ಕಾಲೇಜಿನೊಳಕ್ಕೆಸೇರಿಸಿಕೊಳ್ಳಬೇಕು. ಪಾಸಿಟಿವ್ ವರದಿಬಂದವರಿಗೆ ಅವರು ತಮ್ಮ ಮನೆಯಲ್ಲೇ10 ದಿನಗಳ ಸ್ವಯಂ ಕ್ವಾರಂಟೈನ್‌ಗೆ ಒಳಪಡಬೇಕು. ಇದನ್ನು ಎಲ್ಲಕಾಲೇಜುಗಳ ಮುಖ್ಯಸ್ಥರು ಕಟ್ಟುನಿಟ್ಟಾಗಿಪಾಲಿಸಿ ಕೋವಿಡ್ ನಿಯಂತ್ರಿಸಲು ಸಹಕರಿಸಬೇಕು ಎಂದರು.
ಉಚಿತ ಕೋವಿಡ್ ತಪಾಸಣೆಗಾಗಿಯೇ ಸಾಕಷ್ಟು ಪ್ರಮಾಣದಲ್ಲಿ ಆರ್‌ಟಿಪಿಸಿಆರ್ ಕಿಟ್‌ಗಳು ಲಭ್ಯವಿವೆ. ಈ ತಾಲೂಕಿಗೆ ದಿನಕ್ಕೆ 375 ಆರ್‌ಟಿಪಿಸಿಆರ್ ಹಾಗೂ 100 ಆರ್‌ಎಟಿ ತಪಾಸಣೆ ಗುರಿ ನಿಗದಿಪಡಿಸಲಾಗಿದೆ. ಈ ಗುರಿ ಸಾಧಿಸಲೇಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಕಾಲೇಜಿನ ಮುಖ್ಯಸ್ಥರು, ಪ್ರಾಂಶುಪಾಲರು ತಮ್ಮ ಕಾಲೇಜಿಗೆ ಬರುವ ಕೋವಿಡ್ ಟೆಸ್ಟಿಂಗ್ ತಂಡದೊಂದಿಗೆ ಸಹಕರಿಸಬೇಕು. ವಿದ್ಯಾರ್ಥಿಗಳು ಹಾಗೂ ಪಾಲಕರಿಗೂ ತಪಾಸಣೆ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಪಿಯುಸಿ ಗೊಂದಲ: ಈಗ ಪದವಿ ಕಾಲೇಜುಗಳು ಮಾತ್ರ ಆರಂಭಗೊಂಡಿದೆ. ಪಿಯುಸಿ ಕಾಲೇಜುಗಳು ಇನ್ನೂಆರಂಭಗೊಂಡಿಲ್ಲ. ಇದಕ್ಕೆ ಸರ್ಕಾರಅನುಮತಿ ಕೊಟ್ಟಿಲ್ಲ. ಹೀಗಿದ್ದರೂ ಆರೋಗ್ಯ ಇಲಾಖೆಯವರು ಪಿಯುಸಿ ಪ್ರಥಮ, ದ್ವಿತೀಯ ವರ್ಷದವಿದ್ಯಾರ್ಥಿಗಳನ್ನೂ ಕಾಲೇಜಿಗೆ ಕರೆಸಿಕೋವಿಡ್ ತಪಾಸಣೆ ನಡೆಸಲು ಸಹಕರಿಸಬೇಕು ಎಂದು ಹೇಳಿದ್ದು ಗೊಂದಲ ಮೂಡಿಸಿದಂತಾಗಿತ್ತು.ಪಿಯುಸಿ ವಿದ್ಯಾರ್ಥಿಗಳನ್ನು ಈಗಲೇಕರೆಸಿ ತಪಾಸಣೆ ನಡೆಸುವುದರಿಂದಉಂಟಾಗುವ ಗೊಂದಲ ಅರಿತಆರೋಗ್ಯಾಧಿಕಾರಿಗಳು ಸರ್ಕಾರದ ಆದೇಶದವರೆಗೂ ಪಿಯು ವಿದ್ಯಾರ್ಥಿಗಳ ತಪಾಸಣೆಗೆ ಒತ್ತಡ ಹೇರದಿರಲು ತೀರ್ಮಾನಿಸಿದರು. ಸರ್ಕಾರ ಅನುಮತಿ ಕೊಟ್ಟ ನಂತರ ಪಿಯು ಕಾಲೇಜುಗಳು ಆರಂಭಗೊಂಡಲ್ಲಿ ಆಗ ವಿದ್ಯಾರ್ಥಿಗಳತಪಾಸಣೆಗೆ ಮುಂದಾಗುವ ಕುರಿತು ಚರ್ಚಿಸಲಾಯಿತು.
ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ, ನಗರ ಕೋವಿಡ್-19 ಮೇಲ್ವಿಚಾರಕ ಎಂ.ಎಸ್. ಗೌಡರ, ವಿವಿಧ ಕಾಲೇಜುಗಳು ಪ್ರಾಂಶುಪಾಲರು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.