ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ
Team Udayavani, Oct 13, 2021, 7:20 PM IST
ಸಾಂದರ್ಭಿಕ ಚಿತ್ರ
ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯೊಬ್ಬಳನ್ನು ಆಕೆ ಬಹಿರ್ದೆಸೆಗೆ ಹೋದಾಗ ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಅದೇ ಗ್ರಾಮದ ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಎಂಬಾತನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಆಕೆ ಬಹಿರ್ದೆಸೆಗೆ ಹೋದಾಗ ಆರೋಪಿ ಆಕೆಯನ್ನು ತನ್ನ ಸಹಚರರೊಂದಿಗೆ ಅಪಹರಿಸಿದ್ದು ಅತ್ಯಾಚಾರ ಎಸಗಿದ ನಂತರ ಆಕೆಯ ಮೈಮೇಲಿದ್ದ ಚಿನ್ನದ ಒಡವೆಗಳನ್ನು ದೋಚಿದ್ದಾನೆ ಎನ್ನಲಾಗುತ್ತಿದೆ.
ಸಂಜೆಯಾದರೂ ಮಗಳು ಮನೆಗೆ ಬರಲಿಲ್ಲವಲ್ಲ ಎಂದು ಪಾಲಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಸಂಜೆ ಆಕೆ ಮನೆಗೆ ಬಂದು ವಿಷಯ ತಿಳಿಸಿದಾಗಲೇ ಅತ್ಯಾಚಾರ ನಡೆದದ್ದು ಗೊತ್ತಾಗಿದೆ.
ಇದನ್ನೂ ಓದಿ:ಹಾನಗಲ್ಲ ಉಪಚುನಾವಣೆ : ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ರಾತ್ರಿಯೇ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಲು ಆಕೆಯ ಪಾಲಕರು ಮುಂದಾಗಿದ್ದಾರೆ. ಆದರೆ ತಕ್ಷಣಕ್ಕೆ ಪ್ರಕರಣ ದಾಖಲಾಗಿಲ್ಲ. ಮರುದಿನ ಬರುವಂತೆ ಹೇಳಿ ಮರಳಿ ಕಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರಕರಣದ ಗಂಭೀರತೆ ಅರಿತ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದ ಮೇಲೆ ಸಂಜೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಧ್ಯ ಆಕೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕಳಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.