ಕಾಮಗಾರಿ ಮುಗಿಸದ್ದಿದರೆ ಕ್ರಿಮಿನಲ್ ಕೇಸ್
ಅಮೃತ ಯೋಜನೆ ವಿಳಂಬಕ್ಕೆ ಸಂಸದ ಜಿಗಜಿಣಗಿ ಕಿಡಿ
Team Udayavani, Jun 23, 2020, 8:14 AM IST
ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ನಗರ ಕುಡಿಯುವ ನೀರಿನ ಅಮೃತ ಯೋಜನೆಗೆ ವಿಜಯಪುರ ನರಗ ಆಯ್ಕೆಯಾಗಿದೆ. 156 ಕೋಟಿ ರೂ. ವೆಚ್ಚದ ನಗರದಲ್ಲಿ ಜಾರಿಯಲ್ಲಿರುವ ಕುಡಿಯುವ ನೀರಿನ ಈ ಮಹತ್ವದ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಸಪ್ಟೆಂಬರ್ ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಾಕೀತು ಮಾಡಿದರು.
ಸೋಮವಾರ ನಗರದಲ್ಲಿ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ 2019ರಿಂದ ಅಮೃತ ಯೋಜನೆ ಕಾಮಗಾರಿ ನಡೆದಿದ್ದರೂ ಕಾಮಗಾರಿ ಮುಗಿಸಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹರಿಹಾಯ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಬಸವರಾಜು, ಸಪ್ಟೆಂಬರ್ ತಿಂಗಳೊಳಗೆ ಕಾಮಗಾರಿ ಮುಗಿಸಬೇಕು. ಇಲ್ಲವಾದಲ್ಲಿ ಕಾಮಗಾರಿ ಪರಿಶೀಲಿಸಿ, ಗುತ್ತಿಗೆ ಪಡೆದ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ನಗರದಲ್ಲಿ ಅಮೃತ್ ಯೋಜನೆ ಅನುಷ್ಠಾನದಿಂದ 6 ವಲಯಗಳಲ್ಲಿ ಸದ್ಯಕ್ಕೆ ನೀರು ಪೂರೈಕೆ ಆಗುತ್ತಿದೆ. ಇತರೆ ವಲಯಗಳಿಗೂ ನೀರು ಪೂರೈಸುವ ನಿಟ್ಟಿನಲ್ಲಿ ಕಾಮಗಾರಿ ಚುರುಕುಗೊಳಿಸಬೇಕು. ಮಾನವ ಸಂಪನ್ಮೂಲ ಹೆಚ್ಚಿಸಿಕೊಂಡು ಶೀಘ್ರ ಕಾಮಗಾರಿ ಮುಗಿಸಬೇಕು. ಬಾಕಿ ಇರುವ 13 ಸಾವಿರ ನಳ ಸಂಪರ್ಕ ಕಲ್ಪಿಸಬೇಕು ಎಂದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಶೇ.26ರಷ್ಟು ಮಾತ್ರ ಕರ ಸಂಗ್ರಹವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕರ ವಸೂಲಿಗೆ ಕ್ರಮ ಕೈಗೊಳ್ಳಬೇಕು. 14ನೇ ಹಣಕಾಸು ಆಯೋಗದ ಅನುದಾನ, ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆ, ವಿವಿಧ ವೃತ್ತಿ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸಬೇಕು. ನಗರದಲ್ಲಿ 10 ಕೋಟಿ ರೂ. ವೆಚ್ಚದ ಸುಭಾಶ್ಚಂದ್ರ ಬೋಸ್ ಹೆಸರಿನ ಕ್ರೀಡಾಂಗಣ ನಿರ್ಮಾಣ ಪ್ರಸ್ತಾವನೆಗೆ ಅನುಮೋದನೆ ಕೊಡಿಸಲಾಗುತ್ತದೆ. ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರದ ಈಜು ಕೊಳ ಉದ್ಘಾಟನೆ, ಹೊಸ ಕ್ರೀಡಾಂಗಣ ಹಾಗೂ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಹಾಪೂರ, ಡಿಸಿ ವೈ.ಎಸ್ ಪಾಟೀಲ, ಎಡಿಸಿ ಡಾ| ಔದ್ರಾಮ, ಶ್ರೀಹರಿ ಗೊಳಸಂಗಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.