ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಬಸವಸೈನ್ಯ ಪ್ರತಿಭಟನೆ

Team Udayavani, Nov 30, 2021, 1:22 PM IST

16protest

ಬಸವನಬಾಗೇವಾಡಿ: ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ಮಂಜಿನಿಂದ ಜಿಲ್ಲಾದ್ಯಾಂತ ಅಪಾರ ಪ್ರಮಾಣದ ಬೆಳೆಗಳು ಹಾಳಾಗಿದ್ದು ಕೇಂದ್ರ, ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಬಸವಸೈನ್ಯ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಬಸವೇಶ್ವರ ದೇವಸ್ಥಾನದಲ್ಲಿ ಜಮಾಯಿಸಿದ ಬಸವಸೈನ್ಯ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತ ಬಸವೇಶ್ವರ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ಮಾಡಿದರು.

ಈ ವೇಳೆ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಕಳೆದೆರೆಡು ವರ್ಷ ಲಾಕ್‌ಡೌನ್‌ನಿಂದ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಸಾಧ್ಯವಾಗದೆ ಅಪಾರ ಪ್ರಮಾಣ ಹಾನಿಯಾಗಿದೆ. ಈಗ ತೊಗರಿ, ದ್ರಾಕ್ಷಿ, ಈರುಳ್ಳಿ, ಹತ್ತಿ, ಗೋಧಿ, ಕಡಲೆ, ಗೋವಿನ ಜೋಳ, ಬಿಳಿ ಜೋಳ, ಅಜವಾನ ಸೇರಿದಂತೆ ಅನೇಕ ತೋಟಗಾರಿಕೆ ಹಾಗೂ ಖುಸ್ಕಿ ಜಮೀನಿನಲ್ಲಿರುವ ಬೆಳೆಗಳು ಹಾಳಾಗಿವೆ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ರೈತರ ಖಾತೆಗೆ ಪ್ರತಿ ಎಕರೆಗೆ 30 ಸಾವಿರ ರೂ. ಪರಿಹಾರಧನ ನೀಡಬೇಕು. ರೈತರು ತುಂಬಿದ ಭೀಮಾ ಫಸಲು ಹಾಗೂ ರೈತರು ತುಂಬಿರುವ ವಿಮೆ ಯೋಜನೆಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಒಂದು ವೇಳೆ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ಮಾಡುವುದು ಅನಿರ್ವಾವಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್‌ -2 ತಹಶೀಲ್ದಾರ್‌ ಪಿ.ಜೆ. ಪವಾರ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜು ಬಿರಾದಾರ, ಸುನೀಲ ಚಿಕ್ಕೊಂಡ, ಸಂಗಮೇಶ ಜಾಲಗೇರಿ, ಜಟ್ಟಿಂಗರಾಯ ಮಾಲಗಾರ, ಗುರು ವಂದಾಲ, ವೀರೇಶ ಗಬ್ಬೂರ, ಮಂಜು ಜಾಲಗೇರಿ, ನಿಂಗಪ್ಪ ಅವಟಿ, ಆಕಾಶ ಗೊಳಸಂಗಿ, ಅರುಣ ಗೊಳಸಂಗಿ, ಸುರೇಶ ಹೂಗಾರ, ಕಿರಣ ಜನಗೊಂಡ, ಅರವಿಂದ ಗೊಳಸಂಗಿ, ಸಂಗಮೇಶ ವಾಡೇದ, ಮಶಾಕ್‌ ಮಕಾನದಾರ, ಆಶೀಫ್‌ ತಾಂಬೊಳೆ, ಅಮೀತ ಘೋರ್ಪಡೆ ಇದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.