ಬೆಳೆ ಹಾನಿ; ವಾಸ್ತವ ವರದಿ ಸಂಗ್ರಹಿಸಲು ಸೂಚನೆ

Team Udayavani, Nov 25, 2021, 3:05 PM IST

26report

ಮುದ್ದೇಬಿಹಾಳ: ತಾಲೂಕಿನಲ್ಲಿ ಅಕಾಲಿಕ ಮಳೆ ಮತ್ತು ತೇವಾಂಶ ಪರಿಣಾಮ ಹಾನಿಗೀಡಾಗುತ್ತಿರುವ ವಿವಿಧ ಬೆಳೆಗಳ ವಸ್ತುನಿಷ್ಠ ಸಮೀಕ್ಷೆ ನಡೆಸುವ ಕುರಿತು ಇಲ್ಲಿನ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌ ಬಿ.ಎಸ್‌.ಕಡಕಭಾವಿ ಅಧ್ಯಕ್ಷತೆಯಲ್ಲಿ ಕಂದಾಯ, ಪಂಚಾಯತ್‌ ರಾಜ್‌, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಪಿಡಿಒ, ಗ್ರಾಮ ಲೆಕ್ಕಿಗ, ಕೃಷಿ ಸಹಾಯಕರ ಸಭೆ ನಡೆಯಿತು.

ಸಭೆಯಲ್ಲಿ ಬೆಳೆ ಹಾನಿ ಕುರಿತು ನಡೆಸಬೇಕಾದ ಸಮೀಕ್ಷೆ ಹೇಗಿರಬೇಕು ಮತ್ತು ಯಾವ ಅಂಶಗಳನ್ನು ಒಳಗೊಂಡು ಸಮೀಕ್ಷೆಯನ್ನು ನಿಖರವಾಗಿ, ವಸ್ತುನಿಷ್ಠವಾಗಿ ನಡೆಸಬೇಕು ಎನ್ನುವ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಕುರಿತು ಚರ್ಚಿಸಲಾಯಿತು.

ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿಯವರು ಬೆಳೆ ಹಾನಿಯ ನಿಖರ ಸಮೀಕ್ಷೆ ಮತ್ತು ವರದಿ ಸಲ್ಲಿಕೆಗೆ ಹೆಚ್ಚು ಆಸಕ್ತಿ ವಹಿಸಿದ್ದಾರೆ. ಯಾವುದೇ ಒಬ್ಬ ರೈತ ತಪ್ಪು ಸಮೀಕ್ಷೆಯಿಂದ ಹೊರಗುಳಿಯಬಾರದು ಎನ್ನುವ ಕಳಕಳಿ ಅವರಲ್ಲಿದೆ. ಅವರ ಕಳಕಳಿಯನ್ನು ಎಲ್ಲರೂ ಅರಿತುಕೊಂಡು ವಾಸ್ತವ ವರದಿ ಸಂಗ್ರಹಿಸಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್‌, ಅತಿವೃಷ್ಟಿ ಹಾಗೂ ತೇವಾಂಶದಿಂದ ಹಾನಿಯಾಗಿರುವ ಬೆಳೆಯ ನಷ್ಟದ ಅಂದಾಜಿ ಕುರಿತು ಸರ್ಕಾರದ ಮಾನದಂಡಗಳ ಅನುಸಾರವೇ ಸಮೀಕ್ಷೆ ಮಾಡಿ ವರದಿಯನ್ನು ಮೇಲಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಎರಡು ದಿನಗಳಲ್ಲಿ ಹಾನಿಯ ಅಂದಾಜು ವರದಿಯನ್ನು ತರಿಸಿಕೊಳ್ಳಲಾಗುತ್ತದೆ. ಈಗಾಗಲೇ ವೈಜ್ಞಾನಿಕ ಸಮೀಕ್ಷೆಗೆ ವಿಜ್ಞಾನಿಗಳು ಬರುವ ಸಂಭವ ಇದೆ. ಸರ್ಕಾರ ನಿರ್ದೇಶನ ನೀಡಿದ ಕೂಡಲೇ ತಂಡಗಳನ್ನು ರಚಿಸಿ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ತಾಪಂ ಇಓ ಶಿವಾನಂದ ಹೊಕ್ರಾಣಿ, ಸಹಾಯಕ ಕೃಷಿ ನಿರ್ದೇಶಕ ರೇವಣೆಪ್ಪ ಮನಗೂಳಿ, ಪಿಡಿಒಗಳು, ಗ್ರಾಮಲೆಕ್ಕಿಗರು ಸಭೆಯಲ್ಲಿ ಇದ್ದರು.

ನೀತಿ ಸಂಹಿತೆ-ಪಾಲ್ಗೊಳ್ಳದ ಶಾಸಕರು

ಎರಡು ದಿನಗಳ ಹಿಂದೆ ಬೆಳೆ ಹಾನಿ ಕುರಿತು ಖುದ್ದು ತಾವೇ ಕೆಲ ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿಯವರು ಮರು ದಿನವೇ ಸಂಬಂಧಿಸಿದ ಅಧಿಕಾರಿಗಳ ತುರ್ತು ಸಭೆಯನ್ನು ತಹಶೀಲ್ದಾರ್‌ ಕಚೇರಿಯಲ್ಲಿ ನಡೆಸುವುದಾಗಿ ತಿಳಿಸಿದ್ದರು. ಆದರೆ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಸುವಂತಿಲ್ಲ ಎನ್ನುವ ಮಾಹಿತಿ ಅರಿತು ತಾವು ಸಭೆಗೆ ಗೈರಾದರೂ ಬೆಳೆ ಹಾನಿ ಸಮೀಕ್ಷೆ ಕುರಿತು ಏನೇನು ಕ್ರಮ ಕೈಗೊಳ್ಳಬೇಕು ಎನ್ನುವ ನಿರ್ದೇಶನವನ್ನು ತಹಶೀಲ್ದಾರ್‌ಗೆ ನೀಡಿ ಅವುಗಳ ಕುರಿತು ಎಲ್ಲರ ಗಮನ ಸೆಳೆಯುವಂತೆ ತಿಳಿಸಿದ್ದರು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.