ಮಳೆಗೆ ಕೊಳೆಯುತ್ತಿವೆ ತೋಟದ ಬೆಳೆ

ದ್ರಾಕ್ಷಿ ರೋಗಕ್ಕೆ ದವಣಿ ರೋಗ-ದಾಸ್ತಾನು ಕೇಂದ್ರದಲ್ಲಿ ಈರುಳ್ಳಿಗೆ ಕೊಳೆ

Team Udayavani, Aug 18, 2020, 5:08 PM IST

ಮಳೆಗೆ ಕೊಳೆಯುತ್ತಿವೆ ತೋಟದ ಬೆಳೆ

ವಿಜಯಪುರ: ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಶ್ರಾವಣ ಮಳೆ ರೈತರ ಬದುಕನ್ನು ಹೈರಾಣಾಗಿಸಿದೆ. ಹಲವೆಡೆ ಅತಿಯಾದ ಮಳೆಗೆ ರೈತರು ನಿರ್ಮಿಸಿಕೊಂಡಿರುವ ಕೃಷಿ ಹೊಂಡಗಳು ಸೇರಿದಂತೆಹಲವು ಜಲ ಮೂಲಗಳು ಕೊಚ್ಚಿಕೊಂಡು ಹೋಗಿ ಹಾನಿಗೀಡಾಗಿವೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಎನಿಸಿದ ದ್ರಾಕ್ಷಿ, ಲಿಂಬೆಬೆಳೆಗಳು ರೋಗಬಾಧೆ,  ಹಾನಿಗೆ ಸಿಲುಕಿವೆ. ಪರಿಣಾಮ ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರದ ಕಡೆ ನೆರವಿಗೆ ಆಸೆಗಣ್ಣು ನೆಟ್ಟು ಕುಳಿತಿದ್ದಾರೆ. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಎನಿಸಿದ ದ್ರಾಕ್ಷಿ, ಲಿಂಬೆ ಬೆಳೆಗಳಿಗೆ ರೋಗಬಾಧೆ ಆವರಿಸಿದ್ದು, ಇಳುವರಿ ಕುಸಿತ ಹಾಗೂ ಹಾನಿಗೆ ಸಿಲುಕಿವೆ. ರಾಜ್ಯದಲ್ಲಿ 31,600 ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯುತ್ತಿದ್ದು, ಇದರಲ್ಲಿ ದ್ರಾಕ್ಷಿ ಬೆಳೆಯುವ ಅರ್ಧದಷ್ಟು ಪ್ರದೇಶ ವಿಜಯಪುರ ಜಿಲ್ಲೆಯಲ್ಲೇ ಇದೆ. ಜಿಲ್ಲೆಯಲ್ಲಿ ಸುಮಾರು 15 ಸಾವಿರ ಹೆಕ್ಟೇರ್‌, ಬಾಗಲಕೋಟೆ ಜಿಲ್ಲೆಯಲ್ಲಿ 3,500 ಹೆಕ್ಟೇರ್‌, ಬೆಳಗಾವಿ ಜಿಲ್ಲೆಯಲ್ಲಿ 2700 ಹೆಕ್ಟೇರ್‌ ಮಾತ್ರವಲ್ಲದೇ ಕೊಪ್ಪಳ, ಗದಗ, ಯಾದಗಿರಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರೆಡೆಯೂ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ.

ಈ ವರ್ಷಾರಂಭದಲ್ಲಿ ಕಟಾವು ಹಂತದಲ್ಲಿ ಕಾಣಿಸಿಕೊಂಡ ಕೋವಿಡ್‌ ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ ದೇಶಾದ್ಯಂತ ಜಾರಿಗೆ ಬಂದ ಲಾಕ್‌ಡೌನ್‌ ಕಟಾವು ಹಾಗೂ ಮಾರುಕಟ್ಟೆ ಅವಕಾಶ ಕಿತ್ತುಕೊಂಡಿತು. ರಫ್ತು ಗುಣಮಟ್ಟದ ತೋಟಗಾರಿಕೆ ಬೆಳೆ ಬೆಳೆಯುವ ಜಿಲ್ಲೆಯ ಲಕ್ಷಾಂತರ ರೈತರನ್ನು ಅದರಲ್ಲೂ ತೋಟಗಾರಿಕೆ ಬೆಳೆಗಾರರನ್ನು ಲಾಕ್‌ಡೌನ್‌ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಇದೀಗ ಪ್ರಕೃತಿ ವೈಪರಿತ್ಯ ತೋಟಗಾರಿಕೆ ಬೆಳೆಗಾರರ ಪಾಲಿಗೆ ಶಾಪವಾಗಿ ಪರಿಣಮಿಸಿದೆ.

ದ್ರಾಕ್ಷಿ ಬೆಳೆಗೆ ಪ್ರಖರ ಬಿಸಿಲು ಬೇಕು. ಕೊಂಚವೇ ತೇವಾಂಶದ ಶೀತಗಾಳಿ, ನಿರಂತರ ತುಂತುರು ಮಳೆ, ಮಂಜು ಆವರಿಸುವಿಕೆ, ಮೋಡ ಕವಿಯುವಂಥ ವಾತಾವರಣ ಇದ್ದರೂ ದ್ರಾಕ್ಷಿ ಬೆಳೆಗೆ ಹಾನಿ ಉಂಟಾಗುತ್ತದೆ. ಇದರಿಂದ ರೈತರು ಲಕ್ಷಾಂತರ ರೂ. ನಷ್ಟವಾಗಲಿದ್ದು, ಭವಿಷ್ಯದಲ್ಲಿ ಭಾರಿ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆ ಕುಸಿತದ ಭೀತಿ ಎದುರಾಗಿದೆ. ದ್ರಾಕ್ಷಿ ಬೆಳೆ ಚಾಟ್ನಿ (ಫ್ರೂನಿಂಗ್‌) ಮಾಡುವ ಈ ಹಂತದಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ಮೋಡ ಕವಿದ ಹಾಗೂ ತುಂತುರು ಮಳೆ ಸುರಿಯುವುದು ಸಾಮಾನ್ಯವಾಗಿದೆ. ಇದರಿಂದ ರಾಕ್ಷಿ ಬೆಳೆಗೆ ದಾವಣಿ ಎಂಬ ಎಲೆ ಉದುರುವಿಕೆ ರೋಗ ಬಾಧಿಸುತ್ತಿದೆ.

ಪರಿಣಾಮ ಭವಿಷ್ಯದಲ್ಲಿ ದ್ರಾಕ್ಷಿ ಇಳುವರಿ ಕುಂಠಿತ, ಇಲ್ಲವೇ ಗುಣಮಟ್ಟ ಕುಸಿತವಾಗುವ ಭೀತಿ ಇದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದನ್ನರಿತ ಜಿಲ್ಲೆಯ ತೋಟಗಾರಿಕೆ ಇಲಾಖೆ ದ್ರಾಕ್ಷಿ ಬೆಳೆಯ ರೋಗ ಹಾಗೂ ಸಂಭವನೀಯ ಭಾರಿ ಹಾನಿ ತಡೆಗೆ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರನ್ನು ಕರೆಸಿ ಜಿಲ್ಲೆಯ ತೋಟಗಳಿಗೆ ಭೇಟಿ ಮಾಡಿಸಿದೆ. ರೋಗದ ಅಧ್ಯಯನ ನಡೆಸಿರುವ ವಿಜ್ಞಾನಿಗಳು ನೀಡುವ ವರದಿ ಹಾಗೂ ಕೊಡುವ ಸಲಹೆ ಆಧರಿಸಿ ಮುಂದಿನ ಕ್ರಮಕ್ಕೆ ಅಧಿಕಾರಿಗಳು ಕಾಯುತ್ತಿದ್ದಾರೆ. ಮತ್ತೂಂದೆಡೆ ಗುಣಮಟ್ಟದ ಈರುಳ್ಳಿ ಬೆಳೆಯುವ ವಿಜಯಪುರ ಜಿಲ್ಲೆಯಲ್ಲಿ ಶ್ರಾವಣದ ತುಂತುರ ಮಳೆ ಹಾಗೂ ಶೀತ ವಾತಾವರಣ ರೈತರನ್ನು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತೆ ಮಾಡಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಮಾರುಕಟ್ಟೆ ಕೊರತೆ, ಬೆಲೆ ಕುಸಿತದ ಕಾರಣ ಭವಿಷ್ಯದಲ್ಲಿ ಉತ್ತಮ ದರದ ನಿರೀಕ್ಷೆಯಿಂದಾಗಿ ರೈತರು ಈರುಳ್ಳಿ ದಾಸ್ತಾನು ಮಾಡಿದ್ದರು. ಜಿಲ್ಲೆಯಲ್ಲಿ ಸಾಂಪ್ರದಾಯಿಕ ಉಗ್ರಾಣಗಳಲ್ಲಿ ದಾಸ್ತಾನು ಮಾಡಲಾಗಿದ್ದ ಬಹುತೇಕ ಈರುಳ್ಳಿ ಕೊಳಯುತ್ತಿದೆ. ಇದರಿಂದ ಗುಣಮಟ್ಟ ಕುಸಿತವಾಗಿ, ಮಾರುಕಟ್ಟೆಯಲ್ಲಿ ಸಾಗಾಣಿಕೆ ವೆಚ್ಚವೂ ಬಾರದ ದುಸ್ಥಿತಿ ಎದುರಾಗಿದ್ದು, ರೈತರಕಣ್ಣಲ್ಲಿ ನೀರು ತರಿಸಿರುವ ಈರುಳ್ಳಿ ತಿಪ್ಪೆಗೆ ಸೇರುವ ಸ್ಥಿತಿ ತಲುಪಿದೆ.

ಹೀಗೆ ಜಿಲ್ಲೆಯಲ್ಲಿ ಸುಮಾರು ಒಂದೂವರೆ ತಿಂಗಳಿಂದ ಕಾಡುತ್ತಿರುವ ಮೋಡ ಕವಿದ ಹಾಗೂ ತುಂತುರು ಮಳೆಯ ವಾತಾವರಣ ತೋಟಗಾರಿಕೆ ಬೆಳೆಗಾರರನ್ನು ಕಂಗಾಲಾಗಿಸಿದೆ. ಸರ್ಕಾರ ತಕ್ಷಣ ನೆರವಿಗೆ ಬರುವಂತೆ ಆಗ್ರಹಿಸುತ್ತಿದ್ದರೂ ಸಮೀಕ್ಷೆ ಮಾಡಿ ಪರಿಹಾರ ನಿಡುವ ಭರವಸೆ ಹೊರತಾಗಿ ತಕ್ಷಣ ಸರ್ಕಾರ ತಮ್ಮ ನೆರವಿಗೆ ಬಂದಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ರಾಜ್ಯದಲ್ಲಿ ದ್ರಾಕ್ಷಿ ಬೆಳಗಾರ ಅದರಲ್ಲೂ ವಿಜಯಪುರ ಜಿಲ್ಲೆಯ ರೈತರು ಪ್ರಕೃತಿ ವಿಕೋಪದಿಂದ ಕಳೆದ ಒಂದು ದಶಕದಿಂದ ನಿರಂತರ ನಷ್ಟದಲ್ಲಿದ್ದು, ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದಾನೆ. ಕೂಡಲೇ ಇತರೆ ತೋಟಗಾರಿಕೆ ಬೆಳೆಗಳಿಗೆ ಇರುವಂತೆ ದ್ರಾಕ್ಷಿ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಸರ್ಕಾರ ತಕ್ಷಣ ನಮ್ಮ ನೆರವಿಗೆ ಬರಬೇಕು. -ಅಭಯಕುಮಾರ ನಾಂದ್ರೇಕರ, ಅಧ್ಯಕ್ಷಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘ

ಹವಾಮಾನ ವೈಪರಿತ್ಯದಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು ವಿವಿಧ ರೋಗ ಬಾಧಿತವಾಗಿವೆ. ದ್ರಾಕ್ಷಿ ಬೆಳೆ ಸಂಭವನೀಯ ಹಾನಿ ತಪ್ಪಿಸಲು ತೋಟಗಾರಿಕೆ ವಿವಿಯ ವಿಜ್ಞಾನಿಗಳನ್ನು ಕರೆಸಿ ಸ್ಥಾನಿಕ ಅಧ್ಯಯನ ಮಾಡಿಸಲಾಗಿದೆ. ಈ ವಾರಾಂತ್ಯದಲ್ಲಿ ವರದಿ ಬರುವ ನಿರೀಕ್ಷೆ ಇದ್ದು, ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. -ಸಂತೋಷ ಇನಾಮದಾರ, ಉಪ ನಿರ್ದೇಶಕತೋಟಗಾರಿಕೆ ಇಲಾಖೆ, ವಿಜಯಪುರ

ಕೋಯ್ಲು ಮಾಡಿ ದಾಸ್ತಾನು ಮಾಡಿದ್ದ ಗುಣಮಟ್ಟದ ಈರುಳ್ಳಿ ಮಳೆಯಿಂದಾಗಿ ಕೊಳೆತು ಹಾನಿಗೀಡಾಗಿದೆ. ನನ್ನೊಬ್ಬನಿಗೆ ಸುಮಾರು 10-15 ಲಕ್ಷ ರೂ. ನಷ್ಟವಾಗಿದ್ದು, ಸರ್ಕಾರ ನಾನು ಸೇರಿದಂತೆ ಎಲ್ಲ ಈರುಳ್ಳಿ ಬೆಳೆಗಾರರಿಗೆ ಹಾನಿಗೆ ತಕ್ಕಂತೆ ತಕ್ಷಣ ಪರಿಹಾರ ನೀಡಬೇಕು. -ಭೀಮನಗೌಡ ಪಾಟೀಲ ಚಂದ್ರಶೇಖರ ನಾಟೀಕರ,ಕರಭಂಟನಾಳ ರೈತರು

-ಜಿ.ಎಸ್‌. ಕಮತರ

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.