ಕೋಟ್ಪಾ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಸೂಚನೆ


Team Udayavani, Nov 7, 2020, 6:58 PM IST

ಕೋಟ್ಪಾ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಸೂಚನೆ

ವಿಜಯಪುರ: ಜಿಲ್ಲೆಯ ಪ್ರತಿ ಶಾಲೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧವಿದೆ. ಇಂತಹ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟಗಾರರ ಬಗ್ಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾಮಟ್ಟದ ತ್ತೈಮಾಸಿಕ, ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ಶಾಲೆಗಳ ನೂರು ಗಜಗಳವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಬಗ್ಗೆ ಆಯಾ ಶಾಲಾ ಶಿಕ್ಷಕರಿಂದ ಛಾಯಾಚಿತ್ರ ಸಹಿತ ಪರಿಶೀಲನಾವರದಿ ಪಡೆದು ಈ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಅದರಂತೆ ಕೋಟ್ಪಾ-2003ರ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ತಂಬಾಕು ಉತ್ಪನ್ನ ಸೇವನೆಯಿಂದ ಆಗುವ ಹಾನಿಯ ಕುರಿತು ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು. ಜೊತೆಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಮಹಾನಗರ ಪಾಲಿಕೆ, ವಿವಿಧ ನಗರ, ಪಟ್ಟಣ, ಗ್ರಾಪಂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಅವಶ್ಯಕ ಕ್ರಮ ಕೈಗೊಳ್ಳಬೇಕು. ಈ ಕುರಿತು ಆರೋಗ್ಯ, ತಂಬಾಕು ನಿಯಂತ್ರಣ ಘಟಕ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ ಮತ್ತು ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನಿನರಿತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಾವಳಿಯನ್ವಯ ಉತ್ಪನ್ನಗಳ ನಿಷೇಧ, ಜಪ್ತಿ ಮತ್ತು ಮಾರಾಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೋಟ್ಪಾ ಕಾಯ್ದೆ ಅನ್ವಯ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧವಿದೆ. ನಿಯಮ ಪಾಲಿಸದ ವ್ಯಕ್ತಿಗೆ 200 ರೂ. ದಂಡ ಹಾಗೂ ಮಾಲೀಕರು, ವ್ಯವಸ್ಥಾಪಕರುಅಥವಾ ಅಧಿಕೃತ ಅಧಿಕಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ನಡೆದ ನಿಯಮ ಉಲ್ಲಂಘನೆಗಳ ಸಂಖ್ಯೆಗೆ ಸರಿ ಸಮಾನವಾಗಿ ದಂಡ ವಿಧಿಸಲಾಗುವುದು.

ಅದರಂತೆ ಸೆಕ್ಷನ್‌ 5ರನ್ವಯ ಸಿಗರೇಟ್‌ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ, 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ಸೆಕ್ಷನ್‌ 6ರನ್ವಯ 18ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ನಿಷಿದ್ಧ. ಶಾಲಾ ಕಾಲೇಜುಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರುವುದರ ನಿಷೇಧ 200 ರೂ.ರವರೆಗೆ ದಂಡ ವಿಧಿಸುವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಸೆಕ್ಷನ್‌-7ರಿಂದ 9ರವರೆಗೆ ಸಿಗರೇಟ್‌ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆ ಸಂದೇಶ ನೀಡದ, ಮಾರುವುದೂ ನಿಷೇಧವಿದೆ.

ತಂಬಾಕು ಉತ್ಪನ್ನ ಉತ್ಪಾದಕರಿಗೆ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗುವುದು. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ 10 ಸಾವಿರ ರೂ. ದಂಡ ವಿಧಿಸುವ ಕುರಿತು ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಸೂಚಿಸಿದರು.

ಮಾರಾಟ, ಚಿಲ್ಲರೆ ವ್ಯಾಪಾರಕ್ಕಾಗಿ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ 1000 ರೂ. ದಂಡ ಹಾಗೂ ಎರಡನೇ ಉಲ್ಲಂಘನೆಗಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ, ಸರ್ಕಾರಿ ಜಿಲ್ಲಾಸ್ಪತ್ರೆಯ ಡಾ| ಶರಣಪ್ಪ ಕಟ್ಟಿ, ಡಿಡಿಪಿಐ ಪ್ರಸನ್ನಕುಮಾರ, ತಂಬಾಕು ನಿಷೇಧ ಘಟಕದ ಅಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಇದ್ದರು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.