ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ : ಕಾರಜೋಳ

ಕಾಖಂಡಕಿಯಲ್ಲಿ ಶಿವಾಜಿ ಮಹಾರಾಜರ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ

Team Udayavani, Mar 3, 2021, 7:54 PM IST

DCM Govind Karajola

ವಿಜಯಪುರ: ಛತ್ರಪತಿ ಶಿವಾಜಿ ಕರ್ನಾಟಕ ಮೂಲದ ಕನ್ನಡದ ಶೂರ ಅರಸರಾಗಿದ್ದರು. ಇತಿಹಾಸದ ಆಳಕ್ಕೆ ಇಳಿದರೆ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥರು ಎಂಬ ಸತ್ಯ ಹೊರ ಬೀಳುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮಿತ್ರ ಮಂಡಳಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಶಿವಾಜಿ ಜನಿಸದೇ ಇದ್ದಿದ್ದರೆ ಭಾರತದಲ್ಲಿ ಹಿಂದೂ ಧರ್ಮ ಎಂಬುದೇ ಅಸ್ತಿತ್ವದಲ್ಲಿ ಇರುತ್ತಿರಲಿಲ್ಲ. ಶಿವಾಜಿ ಮಹಾರಾಜರ ಹೆಸರು ದೇಶದ 130 ಕೋಟಿ ಜನಸಂಖ್ಯೆ ಅರಿಯುವ ಅಗತ್ಯವಿದ್ದು ಇದಕ್ಕಾಗಿ ದೇಶಾದ್ಯಂತ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಶಿವಾಜಿ ಮಹಾರಾಜರು ಕನ್ನಡಿಗರು, ಜೊತೆಗೆ ಕರ್ನಾಟಕದಲ್ಲಿರುವ ಮರಾಠಾ ಜಾತಿಯ ಜನರೂ ಕನ್ನಡಿಗರೇ ಆಗಿದ್ದಾರೆ. ಶಿವಾಜಿ ಮಹಾರಾಜರು ತಮಗಾಗಿ ಸಾಮ್ರಾಜ್ಯ ಕಟ್ಟಲಿಲ್ಲ. ದೇಶ ರಕ್ಷಣೆಗಾಗಿ, ಹಿಂದೂ ಧರ್ಮದ ರಕ್ಷಣೆಗಾಗಿ ಸಾಮ್ರಾಜ್ಯ ಕಟ್ಟಿದ ಮಹತ್ವಕಾಂಕ್ಷೆಯ ಅರಸರಾಗಿದ್ದರು ಎಂದು ಬಣ್ಣಿಸಿದರು.

ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮಾತನಾಡಿ, ಭಾರತ ದೇಶದಲ್ಲಿ ಹಿಂದೂ ಧರ್ಮದ ರಕ್ಷಣೆಗಾಗಿ ಮೂರು ಜನಾಂಗದವರ ಕೊಡುಗೆ ಅತ್ಯಮೂಲ್ಯವಾಗಿದೆ. ಮರಾಠಾರು, ಶಿಖ್ಖರು ಹಾಗೂ ರಜಪೂತರು ಹಿಂದೂ ಧರ್ಮವನ್ನು ಮುಸಲ್ಮಾನರ ದಬ್ಟಾಳಿಕೆಯಿಂದ ಉಳಿಸಿದರು. ಹೀಗಾಗಿ ಇಂತಹ ಸಮುದಾಯಗಳ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಬೆನ್ನೆಲುಬಾಗಿ ನಿಲ್ಲಬೇಕಿದೆ ಎಂದರು. ಕಾಖಂಡಕಿಯ ಗುರುದೇವಾಶ್ರಮದ ಸಂದೀಪ ಮಹೋದಯರು, ಹಿರೇಮಠದ ಸಿದ್ದರಾಮಯ್ಯಶ್ರೀ ಸಾನ್ನಿಧ್ಯ ವಹಿಸಿದ್ದರು. ಗ್ರಾಮದ ಹಿರಿಯ ರಾಮನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ  ಪಾಟೀಲ, ಯುವ ಧುರೀಣ ಗುರುಲಿಂಗಪ್ಪ ಅಂಗಡಿ, ಅಪ್ಪುಗೌಡ ಪಾಟೀಲ, ಅರ್ಜುನ ದೇವಕ್ಕಿ, ಕಾಖಂಡಕಿ ಗ್ರಾಪಂ ಅಧ್ಯಕ್ಷ ಜಾನುಬಾ ಸಿಂಧೆ, ಜಿಪಂ ಮಾಜಿ ಸದಸ್ಯ ಮುತ್ತಪ್ಪ ಶಿವನ್ನವರ, ಮರಾಠಾ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯಕುಮಾರ ಚವ್ಹಾಣ, ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್‌ ಜಿಲ್ಲಾಧ್ಯಕ್ಷ ಭೀಮಾಶಂಕರ ಶಿವಾಳಕರ, ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್‌ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಘಾಟಗೆ, ಬಿ.ಟಿ. ತರಸೆ, ಸುಭಾಷ್‌ ವಿಕ್ರಮ, ಜ್ಯೋತಿಬಾ ಮೋರೆ, ವಿಜಯಪುರ ತಾಲೂಕು ಮರಾಠಾ ಸಮಾಜದ ಅಧ್ಯಕ್ಷ ರಾಮು ಜಾಧವ, ಕೃಷ್ಣಾ ಜಾಧವ ಇದ್ದರು.

ಈ ವೇಳೆ ತಹಶೀಲ್ದಾರ್‌ರಾಗಿ ಆಯ್ಕೆಯಾಗಿರುವ ಕಾಖಂಡಕಿ ಗ್ರಾಮದ ಆರ್‌.ಕವಿತಾ ಅವರನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ, ಗುದೇವಾಶ್ರಮದ ಸಂದೀಪ ಮಹೋದಯ, ಸಮಾಜದ ಮುಖಂಡ ರಾಮು ಜಾಧವ ಸನ್ಮಾನಿಸಿದರು. ಇದಕ್ಕೂ ಮೊದಲು ಕಾಖಂಡಕಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ನಿಯೋಜಿತ ವೃತ್ತದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಭೂಮಿಪೂಜೆ ನೆರವೇರಿಸಿದರು. ವಸಂತ ಜಗತಾಪ ಸ್ವಾಗತಿಸಿದರು. ಅಡವಯ್ಯ ಹಿರೇಮಠ ನಿರೂಪಿಸಿದರು. ಸುರೇಶ ಗೌಡಪ್ಪಗೋಳ ವಂದಿಸಿದರು.

ಟಾಪ್ ನ್ಯೂಸ್

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.