ಇಂಡಿ ತಾಲೂಕಲ್ಲಿ ಮರಗಳ ಮಾರಣಹೋಮ ಅವ್ಯಾಹತ
ಕಂಡು ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳ ಕಾರ್ಯವೈಖರಿಗೆ ಪರಿಸರ ಪ್ರೇಮಿಗಳ ಆಕ್ರೋಶ
Team Udayavani, Sep 1, 2021, 8:00 PM IST
ಇಂಡಿ: ರಾಜ್ಯಾದ್ಯಂತ ಅರಣ್ಯ ರಕ್ಷಣೆ ಹಾಗೂ ಅರಣ್ಯ ನಿರ್ಮಾಣಕ್ಕೆ ಗ್ರಾಪಂ, ತಾಪಂ ಹಾಗೂ ಜಿಪಂಗಳಿಂದ ಕೋಟ್ಯಂತರ ರೂ. ವ್ಯಯಿಸಲಾಗುತ್ತಿದೆ. ಆದರೆ ಇದೆಷ್ಟರ ಮಟ್ಟಿಗೆ ಸದುಪಯೋಗವಾಗುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ತಾಲೂಕಿನಲ್ಲಿ ಪ್ರತಿ ದಿನ ಸಾವಿರಾರು ಮರಗಳ ಮಾರಣಹೋಮ ನಡೆಯುತ್ತಿದ್ದು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಮರಗಳನ್ನು ಕಡಿದು ದಿನಕ್ಕೆ ಸುಮಾರು
20-25 ಟ್ರ್ಯಾಕ್ಟರ್ ಕಟ್ಟಿಗೆ ಸಾಗಣೆ ಮಾಡುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಮೌನವಾಗಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.
ತಾಲೂಕಿನೆಲ್ಲೆಡೆ ಗಿಡ-ಮರಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕಡಿಯುತ್ತಿದ್ದರೂ ಅದನ್ನು ತಡೆಯಲು ಅಧಿಕಾರಿ ವರ್ಗ ವಿಫಲವಾಗಿದೆ. ಕಟ್ಟಿಗೆ ಅಡ್ಡೆಗಳ ಸಂಖ್ಯೆ ಕೂಡ ಹೆಚ್ಚುತ್ತಲಿದೆ. ಬರದ ತಾಲೂಕು ಎಂದು ಹಣೆಪಟ್ಟಿ ಅಂಟಿಸಿಕೊಂಡಿರುವ ಇಂಡಿ ತಾಲೂಕು ಏಕೆ ಬರಗಾಲಕ್ಕೆ ತುತ್ತಾಗುತ್ತಿದೆ ಎಂಬುದನ್ನು ಗಮನಿಸಿದಾಗ ಅದಕ್ಕೆ ಕಾರಣ ಈ ಮರಗಳ ಮಾರಣಹೋಮ. ಗಿಡ ಮರಗಳನ್ನು ವ್ಯಾಪಕ ಪ್ರಮಾಣದಲ್ಲಿ ಬೆಳೆಸಬೇಕೆಂದು ಸರಕಾರ ಮೇಲಿಂದ ಮೇಲೆ ಯೋಜನೆಗಳ ನೀಲ ನಕ್ಷೆಗಳನ್ನೇನೋ ರೂಪಿಸುತ್ತಿದೆ. ಆದರೆ ನೈಸರ್ಗಿಕವಾಗಿ ಬೆಳೆದ ಮರಗಳನ್ನು ನಾಶ ಗೊಳಿಸುವ ಕೃತ್ಯವಂತೂ ಧಾರಾಳವಾಗಿ ಮುಂದು ವರಿದಿದೆ. ಲಕ್ಷಾಂತರ ಎಕರೆ ಭೂಮಿಯಲ್ಲಿ ವಿಸ್ತರಿಸಿದ ಅರಣ್ಯವನ್ನು
ನಾಶಗೊಳಿಸುವುದರ ಮೂಲಕ ಇದರ ಸಂಪೂರ್ಣ ಲಾಭ ಪಡೆಯುತ್ತಿರುವ ನಿಜವಾದ ಮರಗಳ್ಳರು ಯಾರು? ದೇಶದಲ್ಲಿ ಮರಗಳ ಸಂರಕ್ಷಣೆಗೆ ನೂರಾರು ಕಾನೂನುಗಳು ಜಾರಿಯಲ್ಲಿದ್ದರೂ ಅವುಗಳ ಸಮರ್ಪಕ ಅನುಷ್ಠಾನ ಆಗಿಲ್ಲವೇಕೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ.
ಇದನ್ನೂ ಓದಿ:ಬಾಲಿವುಡ್ ಡ್ರಗ್ ಪ್ರಕರಣ : ನಟ ಅರ್ಮಾನ್‍ಗೆ 14 ದಿನ ನ್ಯಾಯಾಂಗ ಬಂಧನ
ಕಾಡಿನ ಪರವಾಗಿ ಧ್ವನಿ ಎತ್ತುತ್ತಿರುವ ವಿವಿಧ ಸಂಘಟನೆಗಳು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಲೇರಿ ಅರಣ್ಯ ಕಾಯ್ದೆ ಉಲ್ಲಂಘನೆ
ಪ್ರಕರಣಗಳನ್ನು ಪ್ರಶ್ನಿಸುತ್ತಲೇ ಇವೆ. ಇಂತಹ ಹಲವಾರು ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಗಳನ್ನು ನ್ಯಾಯಾಲಯಗಳು ಇದುವರೆಗೆ ಅತಿ ಗಂಭೀರವಾಗಿ ಪರಿಗಣಿಸಿ ಕಠಿಣ ಆದೇಶಗಳನ್ನು ಜಾರಿ ಮಾಡಿವೆ. ವಾಸ್ತವ ದುರಂತ ಎಂದರೆ ಹೈಕೋರ್ಟ್- ಸುಪ್ರೀಂಕೋರ್ಟ್ ಕಾಲ ಕಾಲಕ್ಕೆ ನೀಡುತ್ತಿರುವ ಆದೇಶಗಳು ಕಟ್ಟುನಿಟ್ಟಾಗಿ ಪಾಲನೆಯಾಗದೆ ಬರಿ ಕಾಗದದ ಮೇಲೆ ಉಳಿಯುವಂತಾಗುತ್ತಿರುವುದು ವಿಪರ್ಯಾಸ.
ಗ್ರಾಮೀಣ ಭಾಗದ ಕೆರೆ-ಕುಂಟೆಗಳೂ ಒತ್ತುವರಿಯಾಗಿವೆ. ಕೆರೆ-ಕುಂಟೆಗಳನ್ನು ಅರಣ್ಯ ಇಲಾಖೆ ಸಂರಕ್ಷಿಸಬೇಕಿದೆ. ಇದು ಕೇವಲ ಜಿಲ್ಲೆ, ತಾಲೂಕು ಅಥವಾ ಗ್ರಾಪಂ ಅಧಿಕಾರಿಗಳ ಸುಪರ್ದಿನಲ್ಲಿ ಸಂರಕ್ಷಣೆಯಾಗಬೇಕೆಂಬ ನಿಯಮವೇನೂ ಇಲ್ಲ. ಕೆರೆಕಟ್ಟಿ ಉಳಿಸಿಕೊಳ್ಳಬೇಕೆಂಬ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಮೂಡಿದಾಗ ಮಾತ್ರ ಪರಿಸರ ರಕ್ಷಣೆಯಾಗುತ್ತದೆ. ಪರಿಸರ ಪ್ರಜ್ಞೆ ಇಂದು ಕೇವಲ ನಗರ ಮತ್ತು ಪಟ್ಟಣಗಳಲ್ಲಿ ಪ್ರಚಾರಕ್ಕಾಗಿ ಸೀಮಿತವಾಗದೇ ಗ್ರಾಮೀಣ ಭಾರತದಲ್ಲಿ ಅರಣ್ಯ ಮತ್ತು ಕೆರೆ-ಕುಂಟೆ ಉಳಿಯಬೇಕಾದರೆ ಜನಜಾಗೃತಿ ಜತೆಗೆ ಕಾನೂನುಗಳ
ಕಟ್ಟುನಿಟ್ಟಿನ ಅನುಷ್ಠಾನವೂ ಅತಿ ಮುಖ್ಯವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಅರಣ್ಯ ಉಳಿವಿಗಾಗಿ ಗ್ಯಾಸ್‌ಗಳನ್ನು ಬಡವರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಆದರೂ ಮರಗಳ ಮರಣಹೋಮ ಮಾತ್ರ ನಿಂತಿಲ್ಲ. ಅಧಿ ಕಾರಿ ವರ್ಗ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಅರಣ್ಯ ಸಂರಕ್ಷಣೆ ಸಾಧ್ಯ.
-ಅನಿಲ ಜಮಾದಾರ ಬಿಜೆಪಿ ಎಸ್‌ಟಿ
ಮೋರ್ಚಾ ಜಿಲ್ಲಾಧ್ಯಕ್ಷ
-ಯಲಗೊಂಡ ಬೇವನೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.