ರೈತರ ಉತ್ಪನ್ನಕ್ಕೆ ಉತ್ತಮ ಬೆಲೆ ಘೋಷಿಸಿ


Team Udayavani, Jan 14, 2022, 3:04 PM IST

19product

ತಾಳಿಕೋಟೆ: ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ನೇತೃತ್ವದಲ್ಲಿ ತಹಶೀಲ್ದಾರ್‌ ಅನೀಲಕುಮಾರ ಢವಳಗಿ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದರು.

ಜೀವನಕ್ಕೆ ಅತ್ಯವಶ್ಯವಾಗಿ ಬೇಕಾದ ಆಹಾರ ಉತ್ಪಾದಿಸುವ ಕೃಷಿ ಕ್ಷೇತ್ರ ಇಂದು ದುಸ್ಥಿತಿಯತ್ತ ಸಾಗುತ್ತಿದೆ. 1990ರ ದಶಕದಿಂದ 3.5 ಲಕ್ಷಕ್ಕೂ ಅಧಿ ಕ ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಪ್ರತಿ ವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವವರ ಸಂಖ್ಯೆ ಏರುತ್ತಿದೆ. ರೈತರು ಬೆಳೆಗಳ ವೆಚ್ಚ ಅಧಿಕವಾಗಿ, ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸುತ್ತಾರೆ. ಆದರೆ ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಮಧ್ಯವರ್ತಿಗಳು ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಕೇಂದ್ರ ಸರ್ಕಾರದ ಉತ್ತಮ ಚಿಂತನೆಯೇ ಸರಿ. ಆದರೆ, ಸರ್ಕಾರ ಕೇವಲ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದರೆ ಸಾಲದು. ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ, ಕಡಿಮೆ ಬೆಲೆಗೆ ಖರೀದಿಯಾಗಬಾರದು, ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರ ದರಕ್ಕೆ ಅನುಗುಣವಾಗಿರಲಿ, ಮಂಡಿಯೊಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷಾರ್ಹವಾಗಿಸಬೇಕೆಂಬ ವಿವಿಧ ಬೇಡಿಕೆ ಈಡೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ಅಧ್ಯಕ್ಷ ಹಣಮಗೌಡ ಬಸರಡ್ಡಿ, ಕಾರ್ಯದರ್ಶಿ ಬಿ.ಎಸ್‌. ಇಸಾಂಪೂರ, ಜಿಲ್ಲಾ ಉಪಾಧ್ಯಕ್ಷ ಎನ್‌. ಎಸ್‌.ದೇಸಾಯಿ, ಐ.ಎನ್‌. ಚೋರಗಸ್ತಿ, ಎನ್‌.ಜೆ. ಅಂಬಿಗೇರ, ಎಸ್‌.ಎಸ್‌. ಹಜೇರಿ, ನಾನಾಗೌಡ ಬಸರಡ್ಡಿ, ಕರಿಂ ಜಮಾದಾರ, ಸಿದ್ರಾಮ ಕೊಡಗಾನೂರ, ಯಲ್ಲಪ್ಪ ಚಲವಾದಿ, ಆರ್‌.ಡಿ. ಬಿಳಗಿ, ಐ.ಎಂ. ಕಂದಗಲ್ಲ, ಬಿ.ಐ. ಹಿರೇಮಠ, ಶಂಕರಗೌಡ ಪಾಟೀಲ, ರಾಮಪ್ಪ ಹರಿಜನ, ಇದ್ದರು.

ಟಾಪ್ ನ್ಯೂಸ್

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.