Maharashtra ಕನ್ನಡದ ಹಳ್ಳಿಗಳಿಗೆ ಕರ್ನಾಟಕದ ನೀರಿಗೆ ಬೇಡಿಕೆ
ಜತ್ ಶಾಸಕ ಸಾವಂತ ನೇತೃತ್ವದಲ್ಲಿ ಸಚಿವ ಎಂ.ಬಿ.ಪಾಟೀಲಗೆ ಮನವಿ
Team Udayavani, Aug 16, 2023, 7:55 PM IST
ವಿಜಯಪುರ: ಮಹಾರಾಷ್ಟ್ರ ರಾಜ್ಯದ ಜತ್ ತಾಲೂಕಿನ ಗಡಿ ಭಾಗದ ಕನ್ನಡದ ಹಳ್ಳಿಗಳಿಗೆ ಕರ್ನಾಟಕ ಸರ್ಕಾರ ನೀರು ಹರಿಸುವಂತೆ ಜತ್ ಶಾಸಕ ವಿಕ್ರಮಸಿಂಹ ಸಾವಂತ ನೇತೃತ್ವದ ಮಹಾರಾಷ್ಟ್ರದ ರೈತರ ನಿಯೋಗ ವಿಜಯಪುರ ಜಿಲ್ಲಾ ಉಸ್ತುವಾರಿ ಹೊಂದಿರುವ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಮಾಡಿದೆ.
ಬುಧವಾರ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ನಿವಾಸಕ್ಕೆ ಆಗಮಿಸಿದ ಜತ್ ಶಾಸಕ ವಿಕ್ರಮ ಸಿಂಹ ನೇತೃತ್ವದ ಮಹಾರಾಷ್ಟ್ರ ರೈತರು ತಾವು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ರೂಪಿಸಿದ್ದೀರಿ. ಅದರಿಂದ ಮಹಾರಾಷ್ಟ್ರ ರಾಜ್ಯದ ಜತ್ ತಾಲೂಕಿನ ಪೂರ್ವ ಭಾಗದ ಗ್ರಾಮಗಳಿಗೆ ನೀರು ಹರಿಸಿದ್ದೀರಿ ಎಂದು ಸ್ಮರಿಸಿದರು. ಅಲ್ಲದೇ ಈಗಲೂ ಅದೇ ಮಾದರಿಯಲ್ಲಿ ನಮ್ಮ ಭಾಗಕ್ಕೆ ಮಾನವೀಯ ನೆಲೆಯಲ್ಲಿ ನೀರು ಹರಿಸಿ ಎಂದು ಮನವಿ ಮಾಡಿದರು.
ಮಹಾರಾಷ್ಟ್ರ ರಾಜ್ಯದಲ್ಲಿ ಮಹಿಷಾಳ ಏತ ನೀರಾವರಿ ಯೋಜನೆ ಇದ್ದರೂ ಜತ್ ಭಾಗದ ಕನ್ನಡಿಗರ ಗ್ರಾಮಗಳಿಗೆ ತಲುಪುತ್ತಿಲ್ಲ. ಕರ್ನಾಟಕದ ತುಬಚಿ-ಬಬಲೇಶ್ವರ ಏತ ನೀರಾವರಿ ಮೂಲಕ ನಮ್ಮ ಭಾಗದ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಲು ನೀರು ಹರಿಸಿ ಎಂದು ರೈತರ ನಿಯೋಗದ ನೇತೃತ್ವ ವಹಿಸಿದ್ದ ಶಾಸಕ ವಿಕ್ರಮಸಿಂಹ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರಿಗೆ ಕೋರಿದರು.
ಮಹಾರಾಷ್ಟ್ರದ ಜತ್ ಶಾಸಕರ ನೇತೃತ್ವದ ರೈತರ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವ ಎಂ.ಬಿ.ಪಾಟೀಲ, ಸದ್ಯ ಕರ್ನಾಟಕದಲ್ಲಿನ ನಮ್ಮ ಭಾಗದಲ್ಲಿ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆ ಇದೆ. ಮುಂಬರುವ ದಿನಗಳಲ್ಲಿ ಕೃಷ್ಣಾ ನದಿ ಹಾಗೂ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಿದಲ್ಲಿ ಅದನ್ನು ಆಧರಿಸಿ ನಮ್ಮ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.