ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹ
Team Udayavani, Sep 17, 2017, 12:30 PM IST
ವಿಜಯಪುರ: ಡಿಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ. ನಾಶ ಮಾಡಿರುವ ಆರೋಪ ಹೊತ್ತಿರುವ ಕೆ.ಜೆ. ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶನಿವಾರ ಬೆಳಗ್ಗೆ ಸಿದ್ದೇಶ್ವರ ದೇವಸ್ಥಾನದಿಂದ ಮಹಾತ್ಮ ಗಾಂಧೀಜಿ, ಬಸವೇಶ್ವರ ಹಾಗೂ ಡಾ|ಬಿ.ಆರ್. ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಡಳಿತ ಕಚೇರಿವರೆಗೆ ಜಾಥಾ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರಾಮಾಣಿಕ, ದಕ್ಷರಾಗಿದ್ದ ಪೊಲೀಸ್ ಅಧಿಕಾರಿ ಡಿಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ರಾಜ್ಯ ಸರ್ಕಾರದ ಭ್ರಷ್ಟ ಮಂತ್ರಿಯ ನೇರ ಕೈವಾಡವಿದೆ. ಹೀಗಾಗಿ ಪ್ರಕರಣದ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ಸಿಎಂ ಸಿದ್ದರಾಮಯ್ಯ ಭ್ರಷ್ಟ ಮಂತ್ರಿ ಜಾರ್ಜ್ ಅವರ ರಕ್ಷಣೆಗೆ ನಿಂತಿದ್ದಾರೆ. ಕೂಡಲೇ ಜಾರ್ಜ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಸಿಎಂ ಸಿದ್ದರಾಮಯ್ಯ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರಮೇಶ ಜಿಗಜಿಣಗಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಭ್ರಷ್ಟಾಚಾರಕ್ಕೆ ಮುಂದಾಗಿದೆ. ನಾಲ್ಕು ದಶಕಗಳ ನನ್ನ ರಾಜಕೀಯದಲ್ಲಿ ಪ್ರಾಮಾಣಿಕ ಅಧಿಕಾರಿಗಳು ಸಾಯುತ್ತಲೇ ಇದ್ದರೂ ಸರ್ಕಾರ ಅಧಿಕಾರಿಗಳಿಗೆ ಆತ್ಮಸ್ಥೈರ್ಯ ತುಂಬಲು ಮುಂದಾಗಿಲ್ಲ. ಹೀಗಾಗಿ ಜೀವನದಲ್ಲಿ ಇಂಥ ಭ್ರಷ್ಟ ಸರ್ಕಾರ ಕಂಡಿಲ್ಲ. ಕೇವಲ ನಾಲ್ಕೂವರೆ ವರ್ಷಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಪ್ರಮಾಣಿಕರನ್ನೇ ಸಂಪುಟದಲ್ಲಿ ಇರಿಸಿಕೊಂಡು ಆಡಳಿತ ನಡೆಸಲು ಮುಂದಾಗಿರುವ ಕ್ರಮ ನಾಚಿಕೆಗೇಡಿನ ಸಂಗತಿ.
ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೋಂಡ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಎಂಬ ಸಿಎಂ ಅವರ ಸರ್ವಾಧಿಕಾರದ ಆಡಳಿತ ನಡೆಯುತ್ತಿದ್ದು ಸಾಲು ಸಾಲು ಅಧಿಕಾರಿಗಳು ಅನುಮಾನಾಸ್ಪದವಾಗಿ ಮೃತಪಡುತ್ತಿದ್ದರೂ ಈ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೇ ಅಧಿಕಾರಿ ಸಾವಿನ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಭ್ರಷ್ಟ ಸಚಿವರ ರಕ್ಷಣೆಗೆ ಮುಂದಾಗಿದ್ದಾರೆ.
ಇದರಿಂದ ಪ್ರಾಮಾಣಿಕ ಅಧಿಕಾರಿಗಳ ಸಾವು ಸಂಭವಿಸುತ್ತಿವೆ. ಆದ್ದರಿಂದ ಗಣಪತಿ ಆತ್ಮಹತ್ಯೆಗೆ ಮುನ್ನ ಸಚಿವ ಜಾರ್ಜ್ ಅವರು ತಮಗೆ ನೀಡುತ್ತಿದ್ದ ಕಿರುಕುಳದ ಕುರಿತು ಹೇಳಿಕೆ ನೀಡಿದ್ದಾರೆ. ಆದರೂ ಸರ್ಕಾರ ಆರೋಪಿ ವ್ಯಕ್ತಿಯನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ಅಶೋಕ ಅಲ್ಲಾಪುರ, ಸೋಮನಗೌಡ ಪಾಟೀಲ ಸಾಸನೂರ, ದಯಾಸಾಗರ ಪಾಟೀಲ, ಸುರೇಶ ಬಿರಾದಾರ, ವಿವೇಕ್ ಡಬ್ಬಿ, ಸಂಗರಾಜ ದೇಸಾಯಿ, ರವಿಕಾಂತ ಬಗಲಿ, ಆರ್.ಎಸ್.ಪಾಟೀಲ ಕೂಚಬಾಳ, ನಾಗೇಂದ್ರ ಮಾಯವಂಶಿ, ಭೀಮಾಶಂಕರ ಹದನೂರ, ಬಾಪುಗೌಡ ಪಾಟೀಲ, ಎಂ.ಡಿ. ಕುಂಬಾರ, ಚಂದ್ರಶೇಖರ ಕವಟಗಿ, ಗೋಪಾಲ ಘಟಕಾಂಬಳೆ, ರಾಜು ಮಗಿಮಠ, ರಾಹುಲ್ ಜಾಧವ, ಶಿವಾನಂದ ಬುಯಾರ, ಬಸವರಾಜ ಬೈಚಬಾಳ, ಶಂಭು ಕಕ್ಕಳಮೇಲಿ, ಶ್ರೀಶೈಲಗೌಡ ಬಿರಾದಾರ, ಹನುಮಂತ ಬಿರಾದಾರ, ಈರಣ್ಣ ಪಟ್ಟಣಶೆಟ್ಟಿ, ಬಿ.ಕೆ. ಕಲ್ಲೂರ, ಮಂಗಳಾದೇವಿ ಬಿರಾದಾರ, ಸರಸ್ವತಿ ಚಿಮ್ಮಲಗಿ, ಗೀತಾ ಕಾಗನೂರ, ರಾಜು ಬಿರಾದಾರ, ಶಹಜಾನ ಮುಲ್ಲಾ, ರವಿದಾಸ ಜಾಧವ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.