ಡಿ.23 ರಿಂದ ಪಂಚಮಸಾಲಿ ಮೀಸಲಾತಿಗಾಗಿ ಪಾದಯಾತ್ರೆ, ವಿಧಾನಸೌಧ ಮುತ್ತಿಗೆ
Team Udayavani, Dec 6, 2020, 1:00 PM IST
ವಿಜಯಪುರ: ಪಂಚಮಸಾಲಿ ಸಮಾಜಕ್ಕೆ ರಾಜ್ಯದಲ್ಲಿ 2A ಹಾಗೂ ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಡಿ.23 ರಂದು ಬೆಂಗಳೂರು ವಿಧಾನಸೌಧ ಮುತ್ತಿಗೆ ಹಾಕಲು ಕೂಡಲಸಂಗಮದಿಂದ ಪಾದಯಾತ್ರೆ ಆರಂಭ ಮಾಡುವುದಾಗಿ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಇರುವ ಮೀಸಲಾತಿ ಪಡೆಯಲೆಂದೇ ಸಮಾಜ ಸಂಘಟನೆ ಮಾಡಲಾಗುತ್ತದೆ ಎಂದರು.
ಬೆಳಗಾವಿ ಸುವರ್ಣ ಸೌಧ ಎದುರು ಉಪವಾಸ ಸತ್ಯಾಗ್ರಹದ ಹೋರಾಟ ನಡೆಸಲಾಗಿತ್ತು ಸಿ.ಎಂ. ಕರೆಯ ಮೇರೆಗೆ ಹೋರಾಟ ಹಿಂಪಡೆದು, ಸರ್ಕಾರಕ್ಕೆ ನೀಡಿದ ನವೆಂಬರ್ 28 ಗಡುವು ಮೀರಿದೆ. ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ಹುಸಿಯಾಗಿದೆ. ಹೀಗಾಗಿ ಡಿ.23 ರಿಂದ ಕೂಡಲಸಂಗಮ ದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚ ಲಕ್ಷ ಹೆಜ್ಜೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಹೇಳಿದರು.
ಸದರಿ ಪಂಚ ಲಕ್ಷ ಪಾದಯಾತ್ರೆಗೆ ಪ್ರತಿ ಜಿಲ್ಲೆಯಿಂದ 10 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆ ನಿತ್ಯ ಪ್ರತಿ 20 ಕಿ.ಮೀ. ಪಾದಯಾತ್ರೆ ನಡೆಯಲಿದೆ ಎಂದರು.
ಇದನ್ನೂ ಓದಿ:ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಭೆ
ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಸವೇಶ್ವರ ಹೆಸರು ನಾಮಕರಣ ಮಾಡಲು ಕೋರಲಾಗಿದೆ. ಯಡಿಯೂರಪ್ಪ ಎರಡು ಬಾರಿ ಸಿ.ಎಂ. ಮಾಡಲು ಸಮಾಜದ ಋಣ ದೊಡ್ಡದಿದೆ. ಕಾರಣ ಯಡಿಯೂರಪ್ಪ ಸರ್ಕಾರ ನಮ್ಮ ಸಮಾಜದ ಹಕ್ಕೊತ್ತಾಯಕ್ಕೆ ಸ್ಪಂದಿಸುವ ವಿಶ್ವಾಸ ಇದೆ ಎಂದರು.
ಸದರಿ ಪಾದಯಾತ್ರೆಯಲ್ಲಿ ವಿವಿಧ ಮಠಗಳ ಮಠಾಧೀಶರು ಸಮುದಾಯದ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸದರಿ ಪಾದಯಾತ್ರೆ ಪೂರ್ವಸಿದ್ಧತೆಗಾಗಿ ಶಾಸಕರ ಸಭೆ ಕರೆದಿದ್ದು, ಹೋರಾಟದ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.
ಬಿ.ಎಂ.ಪಾಟೀಲ, ಶಂಕರಗೌಡ ಬಿರಾದಾರ, ಮಲ್ಲನಗೌಡ ಬಿರಾದಾರ, ವಕ್ತಾರ ಸಂಗಮೇಶ ಬಬಲೇಶ್ವರ, ಸಿ.ಎಸ್.ಸೊಲ್ಲಾಪುರ, ಮಹಿಳಾ ಜಿಲ್ಲಾಧ್ಯಕ್ಷೆ ಲತಾ ಜಿರಾದಾರ, ಶ್ರೀಶೈಲ ಬುಕ್ಕಾಣಿ, ದಾನೇಶ ಅವಟಿ, ಶೋಭಾ ಎಸ್. ಬಿರಾದಾರ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.