ಬಸ್‌ಪಾಸ್‌ ಶೈಕ್ಷಣಿಕ ಅವಧಿ ವಿಸ್ತರಿಸಲು ಆಗ್ರಹ

Team Udayavani, Jul 4, 2022, 3:41 PM IST

19bus-pass

ವಿಜಯಪುರ: ಬಸ್‌ಪಾಸ್‌ ಅವಧಿ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೇಡಿಕೆಗಳ ಫಲಕ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್‌ ಅನ್ನು ಸೆಪ್ಟೆಂಬರ್‌ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾಗಿವೆ. ಹಿಂದಿನಂತೆ ಶೈಕ್ಷಣಿಕ ಅವಧಿವರೆಗೆ ಪಾಸ್‌ ಮಾನ್ಯತೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ 2021ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್‌ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಅಂದರೆ, ನವೆಂಬರ್‌ ತಿಂಗಳಲ್ಲಿ ತರಗತಿ ಆರಂಭದ ನಂತರ ಪಾಸ್‌ ಪಡೆದ ವಿದ್ಯಾರ್ಥಿಗಳು ಆಗಸ್ಟ್‌ವರೆಗೂ, ಡಿಸೆಂಬರ್‌ನಲ್ಲಿ ಪಾಸ್‌ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್‌ವರೆಗೂ ಉಚಿತವಾಗಿ ಓಡಾಡಬಹುದಾಗಿದೆ ಎಂದು ವಿವರಿಸಿದರು.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಏಕಾಏಕಿ ಜೂನ್‌ ತಿಂಗಳಿಗೆ ವಿದ್ಯಾರ್ಥಿ ಬಸ್‌ಪಾಸ್‌ ಅವಧಿ ಕೊನೆಗೊಳ್ಳಲಿರುವ ಕಾರಣ ಮುಂದಿನ ತಿಂಗಳಿನಿಂದ ದುಡ್ಡು ಕೊಟ್ಟು ಓಡಾಡಬೇಕು ಎಂದು ಹೇಳಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಗ್ರಾಮೀಣ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಿದೆ ಎಂದು ದೂರಿದರು.

ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್‌ ಅನ್ನು ಪಡೆದುಕೊಂಡಿದ್ದೇವೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್‌ ನೀಡಬೇಕು ಎಂಬುದೇ ಆಗಿದೆ. ಹೀಗಿರುವಾಗ, ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮಾನ್ಯತೆ ರದ್ದಾಗಿದೆ ದುಡ್ಡು ಕೊಟ್ಟು ಓಡಾಡಬೇಕು ಎನ್ನುವುದು, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಮೇಲೆ ಮತ್ತಷ್ಟು ಹೊರೆ ಹೊರಿಸಿದಂತಾಗಿದೆ ಎಂದರು.

ಶಿಕ್ಷಣ ಉಳಿಸಿ ಸಮಿತಿ ಎಚ್‌.ಟಿ.ಭರತಕುಮಾರ ವಿದ್ಯಾರ್ಥಿಳ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು. ಸಂಘಟನೆಯ ದೀಪಾ ವಡ್ಡರ, ಅಜಿತ್‌, ವಿದ್ಯಾರ್ಥಿಗಳಾದ ಆಯಿಶಾ, ಹನುಮಂತ ಪಾಟೀಲ, ಹನುಮಂತ ಉಪ್ಪಾರ, ಮಹಾಂತೇಶ ಬಿರಾದಾರ, ವಿಕಾಸ್‌ ಬಡಿಗೇರ, ವಸಂತ ವಾಲೀಕಾರ, ಬಿ.ಹನುಮಂತ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

gold-and-silver

Gold ಬಳಿಕ ಬೆಳ್ಳಿಗೂ ಹಾಲ್‌ಮಾರ್ಕ್‌ ಚಿಹ್ನೆ ಕಡ್ಡಾಯ ಚಿಂತನೆ:ಜೋಶಿ

VHP (2)

VHP; ಸರಕಾರದ ಹಿಡಿತದಿಂದ ದೇಗುಲಗಳ ಮುಕ್ತಿಗೆ  ಆಂದೋಲನ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.