ತೊಗರಿ ಖರೀದಿ ಕೇಂದ್ರಕ್ಕೆ ಆಗ್ರಹ
Team Udayavani, Jan 21, 2020, 1:18 PM IST
ದೇವರಹಿಪ್ಪರಗಿ: ಯಲಗೋಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೊಗರಿ ಖರೀದಿ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ವೈ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿ ಕಾರಿಗಳು ಗ್ರಾಮಕ್ಕೆ ತೊಗರಿ ಖರೀದಿ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿದರು. ಈ ವೇಳೆ ಸಾಯಬಣ್ಣ ಬಾಗೇವಾಡಿ ಮಾತನಾಡಿ, ಗ್ರಾಮದ ಪಿಕೆಪಿಎಸ್ ವ್ಯಾಪ್ತಿಗೆ ಮೂರರಿಂದ ನಾಲ್ಕು ಗ್ರಾಮಗಳು ಬರುತ್ತಿದ್ದು ಈ ಗ್ರಾಮಗಳ ರೈತರಿಗೆ ಅನುಕೂಲವಾಗುವಂತೆ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು.
ಗ್ರಾಮದಲ್ಲಿ ಖರೀದಿ ಕೇಂದ್ರಕ್ಕೆ ಸಹಕಾರಿಯಾಗುವಂತೆ 150 ಟನ್ ಸಾಮರ್ಥ್ಯದ ಸಂಗ್ರಹಣಾಲಯಗಳು ಲಭ್ಯವಿವೆ. ಈ ಎಲ್ಲ ಕಾರಣಗಳನ್ನು ಪರಿಶೀಲಿಸಿ ಅಗತ್ಯವಾದ ಕೇಂದ್ರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ರಾಜು ಮೆಟಗಾರ, ಮಲ್ಲು ಜಮಾದಾರ, ಆಕಾಶ ಬೂದಿಹಾಳ, ಉಮೇಶ ಇಂಗಳಗಿ, ಸೋಮಶೇಖರ ಹೊಸಮನಿ, ಬಸವರಾಜ ನಾಟೀಕಾರ,ಅರವಿಂದ , ಪರಶುರಾಮ ನಾಟೀಕಾರ, ಮಲಕಣ್ಣ ಸುಣಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.