ಸಚಿವರಿಂದ ಪ್ರಜಾಪ್ರಭುತ್ವ ಕಗ್ಗೊಲೆ
Team Udayavani, Mar 8, 2021, 7:43 PM IST
ತಾಳಿಕೋಟೆ: ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜೊತೆಗೆ ಪ್ರಜಾಪ್ರಭುತ್ವದ ನಾಲ್ಕನೇ ಬಲಿಷ್ಠ ಅಂಗವೆಂದು ಗುರುತಿಸಿಕೊಂಡಿರುವ ಪತ್ರಿಕಾ ರಂಗದ ಹಕ್ಕುಗಳನ್ನು ಕಸಿದುಕೊಳ್ಳಲು ಸರ್ಕಾರದ ಭಾಗವಾಗಿರುವ ಸಚಿವರುಗಳು ಮಾಡುತ್ತಿರುವದು ಕಾರ್ಯ ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ರಾಜ್ಯಾಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಭಾಗವಾಗಿರುವ ಸಚಿವರುಗಳು ಅಶ್ಲೀಲವಾಗಿ ತಮ್ಮ ನಡೆ ತೋರಿಸುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಬಸವಣ್ಣನವರು ಜನ್ಮ ತಾಳಿದ ನಮ್ಮ ನಾಡಿನಲ್ಲಿ ರಾಜಕಾರಣಿಗಳು ಮಾದರಿಯಾಗಬೇಕು. ಆದರೆ ಇಡಿ ಸಮಾಜಕ್ಕೆ ನಾಚಿಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದರು. ಸರ್ಕಾರದ ಭಾಗವಾಗಿರುವ 6 ಸಚಿವರುಗಳು ತಮ್ಮ ತಮ್ಮ ಪ್ರಕರಣಗಳು,ಹಗರಣಗಳ ಸಿಡಿಗಳು ಬಿಡುಗಡೆಯಾದರೆ ಮಾಧ್ಯಮಗಳು ಪ್ರಸಾರ ಮಾಡಬಾರದೆಂದು ಕೋರ್ಟ್ ಮೋರೆ ಹೋಗಿದ್ದಾರೆ.
ಇದರ ಅರ್ಥ ಜಾರಕಿಹೋಳಿ ಅವರ ಹಾಗೆ ತಾವು ಅಕ್ರಮ ಸಂಬಂಧ ಹೊಂದಿದ್ದಾರೆಂಬ ವಾಸನೆ ತಾವೇ ನಾಗರಿಕ ಸಮಾಜಕ್ಕೆ ತೋರಿಸುತ್ತಿರುವುದು ಲಜ್ಜೆಗಟ್ಟಜೀವನವಾಗಿದೆ. ನಿಮಗೆ ಅಂತಹ ಜೀವನ ಬೇಕಾಗಿದ್ದರೆ ಪವಿತ್ರವಾದ ತಮ್ಮ ಹುದ್ದೆಗಳಿಗೆ ರಾಜೀನಾಮೆಯನ್ನು ಕೊಟ್ಟು ಹೊರಗಡೆ ಬನ್ನಿ.
ಅದನ್ನು ಬಿಟ್ಟು ತಮ್ಮ ಅಕ್ರಮದ ಸತ್ಯಾಸತ್ಯತೆಯ ಸುದ್ದಿ ಪ್ರತಿಕಾ ಹಾಗೂ ಇನ್ನಿತರ ಮಾದ್ಯಮಗಳಲ್ಲಿ ಮುದ್ರಿಸಬಾರದೆಂದು ಕೋರ್ಟ್ಗೆ ಮೋರೆ ಹೋಗಿರುವದು ಮಾಧ್ಯಮದ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದರು. ಶಮಶುದ್ದೀನ್ ನಾಲಬಂದ, ಕಾಶೀಮಪಟೇಲ್ ಪಾಟೀಲ (ಮೂಕಿಹಾಳ), ಇಬ್ರಾಹಿಂ ಮನ್ಸೂರ್, ಜೈಭೀಮ ಮುತ್ತಗಿ, ಗೌಸ್ ನಾಸರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.