ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Mar 26, 2022, 6:02 PM IST

24vijayapur

ವಿಜಯಪುರ: ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್‌ ದೇವದಾಸಿ ಮಹಿಳೆಯರ ಮಾಶಾಸನದ ಹೆಚ್ಚಳ, ಪುನರ್ವಸತಿ ಯೋಜನೆ ಬಲಪಡಿಸುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.

ಶುಕ್ರವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ದೇವದಾಸಿ ಮಹಿಳೆಯರು, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೇವದಾಸಿ ಮಹಿಳೆಯರ ವಿಮೋಚನ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಮಾಳಮ್ಮ, ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ನೀಡುತ್ತಿರುವ ಮಾಸಿಕ ಸಹಾಯ ಧನ ಕನಿಷ್ಠ 3 ಸಾವಿರ ರೂ. ಗೆ ಹೆಚ್ಚಿಸಬೇಕು. ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡಬೇಕು. ದೇವದಾಸಿ ಮಹಿಳೆಯರ ಪರಿತ್ಯಕ್ತ ಮಕ್ಕಳಿಗೂ ಮಾಸಿಕ ಸಹಾಯಧನ ನೀಡುವ ಜೊತೆಗೆ ಇಂಥ ಮಕ್ಕಳ ಗಣತಿ ಮಾಡಬೇಕು. ಗಣತಿಯಲ್ಲಿ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಿ ಎಲ್ಲ ನೆರವು ನೀಡಬೇಕು ಎಂದು ಆಗ್ರಹಿಸಿದರು.
ದೇವದಾಸಿ ಮಹಿಳೆಯರ ಮಕ್ಕಳ ಮತ್ತು ಕುಟುಂಬದ ಸದಸ್ಯರನ್ನು ತಕ್ಷಣವೇ ಗಣತಿ ಮಾಡಿ ಪುನರ್ವಸತಿ ಕಲ್ಪಿಸಬೇಕು. ದೇವದಾಸಿ ಮಹಿಳೆಯರ ಮಕ್ಕಳು ಅಂತರ್ಜಾತಿಯಲ್ಲಾಗಲಿ ಮತ್ತು ಸಜಾತಿಯಲ್ಲಾಗಲಿ ಹಾಗೂ ದೇವದಾಸಿ ಮಹಿಳೆಯರ ಕುಟುಂಬಗಳ ಸದಸ್ಯರ ನಡುವೆಯಾಗಲಿ ಮದುವೆಯಾದಲ್ಲಿ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು. ಮದುವೆಯ ವಿಚಾರದಲ್ಲಿ ಷರತ್ತು ವಿಧಿಸಬಾರದು. ಬರಗಾಲ ಹಾಗೂ ಅತಿವೃಷ್ಟಿ ಪ್ರವಾಹದ ಸಂದರ್ಭದಲ್ಲಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಹಾಗೂ ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ದೇವದಾಸಿ ಮಹಿಳೆಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಉನ್ನತ ಹಂತದವರೆಗೆ ಉಚಿತವಾದ ಮತ್ತು ನೇರವಾದ ಪ್ರವೇಶಾವಕಾಶ ಒದಗಿಸಬೇಕು. ವಿದ್ಯಾವಂತ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಪಡೆಯುವವರೆಗೂ ನಿರುದ್ಯೋಗ ಭತ್ಯೆ ನೀಡಬೇಕು ಎಂದರು.

ದೇವದಾಸಿ ಮಹಿಳೆಯರ ಮಾಸಾಶನ ನೀಡಿಕೆ ವ್ಯಾಪ್ತಿಯನ್ನು ಬದಲಿಸಿದ್ದರಿಂದ ಅನ್ಯಾಯವಾಗಿದೆ. ಕಾರಣ ನಮಗೆ ನಮ್ಮ ದೇವದಾಸಿ ಮಹಿಳೆಯರ ಪುನರ್ವಸತಿ ಕಚೇರಿಯಿಂದಲೇ ಮಾಸಾಶನ ನೀಡಬೇಕು. ದೇವದಾಸಿ ಕಚೇರಿಯಲ್ಲಿ ಸ್ವಯಂ ಸೇವಕರನ್ನು ಮರು ನೇಮಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಸುರೇಖಾ ರಜಪೂತ, ಕರ್ನಾಟಕ ಪ್ರಾಂತ ರೈತ ಸಂಘದ ಅಣ್ಣಾರಾಯ ಈಳಗೇರ, ಯಲ್ಲವ್ವ ಕತ್ನಳ್ಳಿ, ಕೆಂಚವ್ವ ಬಬಲೇಶ್ವರ, ಸತ್ಯವ್ವ ಸಿಂಗೆ, ಚಿಕ್ಕವ್ವ ಮಾದರ, ಶಿವಮ್ಮ ಗುಂಡೆನಮನಿ, ನಾಗಮ್ಮ ಬ್ಯಾಕೋಡ, ನಾಗಮ್ಮ ಸಂದಿಮನಿ, ಲಕ್ಕವ್ವ ಯಕ್ಕುಂಡಿ, ಮಾಲವ್ವ ಹಲಗಣಿ, ರೇಣುಕಾ ಬಗಲಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.