ಪೌರತ್ವ ಕಾಯ್ದೆಯಿಂದ ತೊಂದರೆಯಾಗದು
ಬಿಜೆಪಿ ಕಾರ್ಯಕರ್ತರಿಂದ ಜಾಗೃತಿಕಾಂಗ್ರೆಸ್‌ನಿಂದ ಅರಾಜಕತೆ-ಗೊಂದಲ ಸೃಷ್ಟಿಸುವ ಕೆಲಸ
Team Udayavani, Jan 9, 2020, 11:54 AM IST
ದೇವರಹಿಪ್ಪರಗಿ: ಪೌರತ್ವ ಕಾಯ್ದೆಯಿಂದ ದೇಶದ ಯಾವೊಬ್ಬ ಭಾರತೀಯರಿಗೂ ತೊಂದರೆಯಾಗದು. ವಿನಾಕಾರಣ ಕಾಂಗ್ರೆಸ್‌ನವರು ದೇಶದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದಾರೆ ಎಂದು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.
ಪಟ್ಟಣದ ಡಾ| ಅಂಬೇಡ್ಕರ್ ವೃತ್ತದಲ್ಲಿ ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯಿಂದ ತೊಂದರೆ ಇರದಿದ್ದರೂ ಕಾಂಗ್ರೆಸ್ ತನ್ನ ಬೇಳೆ ಬೇಯಿಸಿಕೊಳ್ಳಲು ಒಂದು ಸಮುದಾಯವನ್ನು ಎತ್ತಿ ಕಟ್ಟುತ್ತಿದೆ. ಸ್ವಾರ್ಥ ರಾಜಕೀಯಕ್ಕಾಗಿ ಅಮಾಯಕರನ್ನು ಬೀದಿಗಿಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ ಅಲ್ಲಾಪುರ ಮಾತನಾಡಿ, ಪೌರತ್ವ ಕಾಯ್ದೆ ಯಾರ ವಿರೋಧವೂ ಅಲ್ಲ-ಪರವೂ ಅಲ್ಲ. ದೇಶದ ಒಳಿತಿಗಾಗಿ ಜಾರಿಗೆ ತರಲಾಗುತ್ತಿದೆ. ಅದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಮಹಾಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ. ಕ್ಷೇತ್ರದ 6 ಮಹಾಶಕ್ತಿ ಕೇಂದ್ರಗಳ ಮೂಲಕ 353 ಬೂತ್‌ಗಳಿಗೂ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಭಿತ್ತಿ ಪತ್ರ ಹಂಚುವ ಜೊತೆಗೆ ಜಾಗೃತಿ ಮೂಡಿಸಲಿದ್ದಾರೆ. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು ಎಂದರು.
ಮಂಡಲ ಅಧ್ಯಕ್ಷ ಭೀಮನಗೌಡ ಸಿದರೆಡ್ಡಿ, ರಮೇಶ ಮಸಬಿನಾಳ, ರಾಜು ಮೆಟಗಾರ, ಮಡುಗೌಡ ಬಿರಾದಾರ, ಸಂಗಮೇಶ ಮಸಬಿನಾಳ, ಶಂಖರಗೌಡ ಕೋಟಿಖಾನಿ, ಸೋಮು ಹಿರೇಮಠ, ರಾಘವೇಂದ್ರ ಗುಡಿಮನಿ, ಕಾಶೀನಾಥ ಚವ್ಹಾಣ, ಭೀಮನಗೌಡ ಲಚ್ಯಾಣ, ರಾವುತ್ ಅಗಸರ, ಶ್ರೀಕಾಂತ ಭಜಂತ್ರಿ, ರಮೇಶ ಈಳಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.