ದೇಶದ ಅಭಿವೃದ್ದಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಖಂಡ್ರೆ
Team Udayavani, Oct 28, 2021, 2:29 PM IST
ಸಿಂದಗಿ: ದೇಶದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಬುಧವಾರ ತಾಲೂಕಿನ ಗಣಿಹಾರ, ರಾಂಪುರ ಗ್ರಾಮದಲ್ಲಿ ಉಪಚುನಾವಣೆ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಬೈಕ್‌ರ್ಯಾಲಿ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.
ಇಂದಿರಾ ಗಾಂಧಿ ಕಾಲದಿಂದಲೂ ಬಡವರ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನದೆಯಾದ ಇತಿಹಾಸ ಹೊಂದಿದೆ. ಇಂತಹ ಪಕ್ಷದಲ್ಲಿ ನಾವು ಕಾರ್ಯಕರ್ತರಾಗಿರುವುದು ಹೆಮ್ಮೆಯ ಸಂಗತಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರ ಪಾಲಿಗೆ ಆಶಾಕಿರಣವಾಗಿದೆ. ಆದ್ದರಿಂದ ಕಾರ್ಯಕರ್ತರು ಎದೆಗುಂದದೆ ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿನ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಬಹುಮತದಿಂದ ಚುನಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಬಿಜೆಪಿಯ ದುರಾಡಳಿತ ಕಂಡಿರುವ ರಾಜ್ಯದ ಜನತೆ ಈಗಾಗಲೇ ಬೇಸತ್ತಿದ್ದಾರೆ. ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ದೇಶದ ಭವಿಷ್ಯ ಉಜ್ವಲಗೊಳ್ಳುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಮತದಾರರು ಅರಿತಿದ್ದಾರೆ. ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಉಪಚುನಾವಣೆ ಫಲಿತಾಂಶ ಮುಂಬರುವ 2023ನೇ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಆದ್ದರಿಂದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕೋರಿದರು.
ಇದನ್ನೂ ಓದಿ: ಬುದ್ದಿನ್ನಿಗೆ ಪ್ರೌಢಶಾಲೆ ಮಂಜೂರಿಗೆ ಆಗ್ರಹ
ಎಂ.ಸಿ. ಮನಗೂಳಿ ತಮ್ಮ ಅಧಿಕಾರದ ಅವಧಿಯಲ್ಲಿ ಕುಡಿಯುವ ನೀರು, ರೈತರಿಗೆ ನೀರು, ಗ್ರಾಮಗಳ ನಡುವೆ ರಸ್ತೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರ ಮಗ ಅಶೋಕ ಒಬ್ಬ ಕ್ರಿಯಾಶೀಲ, ಸಮರ್ಥ ವ್ಯಕ್ತಿ. ಅವರನ್ನು ಗೆಲ್ಲಿಸಿ ತಂದಲ್ಲಿ ವಿಧಾನಸೌಧದಲ್ಲಿ ನಿಮ್ಮ ಧ್ವನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಆದ್ದರಿಂದ ಅಶೋಕರನ್ನು ಶಾಸಕರನ್ನಾಗಿ ಮಾಡಿ ಎಂದು ಮನವಿ ಮಾಡಿಕೊಂಡರು. ವೀಣಾ ಕಾಶಪ್ಪನವರ ಸೇರಿದಂತೆ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.