ವಿವಿಧ ಅಭಿವೃದ್ಧಿ ಕಾಮಗಾರುಗಳಿಗೆ ಚಾಲನೆ
Team Udayavani, Aug 29, 2020, 8:08 PM IST
ಸಿಂದಗಿ: ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋನೆಯಡಿ 74 ಲಕ್ಷ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕ ಎಂ.ಸಿ. ಮನಗೂಳಿ ಅನುದಾನ ತರುವ ಮೂಲಕ ಗ್ರಾಮಾಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಮನಗೂಳಿ ಹೇಳಿದರು.
ಮುಖ್ಯಮಂತ್ರಿ ಗ್ರಾಮ ವಿಕಾಸ ಯೋನೆಯಡಿ 74 ಲಕ್ಷ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ನೀಡುತ್ತಿದ್ದು ಹಂತ ಹಂತವಾಗಿ ಕಾಮಗಾರಿ ಮಾಡಲಾಗುತ್ತಿದೆ. ಬಳಗಾನೂರ ಗ್ರಾಪಂ ವ್ಯಾಪ್ತಿಗೆ ಈಗ ಸರಕಾರ ಈ ಯೋಜನೆಯಡಿ 74 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದರು.
ನಂತರ ಬಳಗಾನೂರ ಸಮೀಪದ ಬಂಥನಾಳ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 15 ಲಕ್ಷ ರೂ. ಅನುದಾನದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಜಿಪಂ ಸದಸ್ಯ ಬಿ.ಆರ್. ಎಂಟಮಾನ, ತಾಪಂ ಇಒ ಸುನೀಲ ಮದ್ದಿನ, ಕೆಆರ್ ಐಡಿಎಲ್ ಅಧಿಕಾರಿ ಅಬ್ಟಾಸಲಿ ಮುಲ್ಲಾ, ಶಿವಶರಣಗೌಡ ಪಾಟೀಲ, ಪರಶುರಾಮ ಕಾಂಬಳೆ, ಗುಂಡುಗೌಡ ಪಾಟೀಲ, ಮಲ್ಲು ಬಾದನ್, ಮಲ್ಲು ಶಂಬೇವಾಡ, ಪರಶುರಾಮ ಮಂಕಣಿ, ಕೆಂಚಪ್ಪ ಕತ್ತನಳ್ಳಿ, ಗುರು ಹುಲ್ಲೂರ, ಶಿವಶಂಕರ ಕುಂಟೋಜಿ, ಸಿದ್ದಗೌಡ ಪಾಟೀಲ, ಕಾಂತನಗೌಡ ಪಾಟೀಲ ಸುರಗಿಹಳ್ಳಿ, ಸಿದ್ದು ಹತ್ತಳ್ಳಿ, ಬಸಲಿಂಗಪ್ಪಗೌಡ ಪಾಟೀಲ, ಚಂದ್ರಾಮ ಬಂಥನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.