ಪುರಸಭೆ ಸಿಒ ಸುರೇಖಾ ವಿರುದ್ಧ ಧರಣಿ

Team Udayavani, Jul 20, 2022, 5:35 PM IST

19protest

ಮುದ್ದೇಬಿಹಾಳ: ಪುರಸಭೆ ಮುಖ್ಯಾಧಿಕಾರಿ ಧೋರಣೆ ಖಂಡಿಸಿ ಮತ್ತು 12 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪುರಸಭೆ ಆಡಳಿತ ಪಕ್ಷ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಪುರಸಭೆ ಕಚೇರಿ ಎದುರೇ ಮಂಗಳವಾರದಿಂದ ಧರಣಿ ಆರಂಭಿಸಿದ್ದಾರೆ.

ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಶಿವಪುರ ಮತ್ತು ಸದಸ್ಯ ಮಹಿಬೂಬ ಗೊಳಸಂಗಿ ಧರಣಿ ಆರಂಭಿಸಿದ್ದು ಇವರಿಗೆ ಆಡಳಿತ ಪಕ್ಷದ ಸದಸ್ಯರಾದ ಮಹ್ಮದರಫೀಕ್‌ ದ್ರಾಕ್ಷಿ, ಹನುಮಂತ ಭೋವಿ, ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ ಅವರ ಪತಿ, ಗುತ್ತಿಗೆದಾರ ರುದ್ರಗೌಡ ಅಂಗಡಗೇರಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಹೋರಾಟಗಾರ ಮಂಜುನಾಥಸ್ವಾಮಿ ಕುಂದರಗಿ, ಪುರಸಭೆ ಮಳಿಗೆಗಳಲ್ಲಿ ಬಾಡಿಗೆ ಇರುವ ಕೆಲವರು ಧರಣಿಗೆ ಬೆಂಬಲ ಸೂಚಿಸಿದ್ದಾರೆ.

ಏತನ್ಮಧ್ಯೆ ಧರಣಿ ಕೈ ಬಿಟ್ಟು ಪುರಸಭೆ ಸಾಮಾನ್ಯ ಸಭೆಯಲ್ಲೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್‌ ಬಿ.ಎಸ್‌.ಕಡಕಭಾವಿ, ಸಿಪಿಐ ಆನಂದ ವಾಘ್ಮೋಡೆ ಅವರು ಮಾಡಿಕೊಂಡ ಮನವಿಗೆ ಸ್ಪಂದನೆ ದೊರಕಿಲ್ಲ. ಜಿಲ್ಲಾಧಿಕಾರಿಯೇ ಬಂದು ಸಮಸ್ಯೆ ಆಲಿಸಿ ಬೇಡಿಕೆ ಈಡೇರಿಸುವವರೆಗೂ ಧರಣಿ ಮುಂದುವರಿಸಲಾಗುತ್ತದೆ ಎಂದು ಧರಣಿ ನಿರತರು ತಿಳಿಸಿದ್ದಾರೆ.

ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ ಪಟ್ಟಣದಲ್ಲೇ ವಾಸ್ತವ್ಯ ಮಾಡಬೇಕು. ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಡಳಿತ ಮಂಡಳಿ ಗಮನಕ್ಕೆ ತಂದಿಲ್ಲ, ಅನುಮತಿಯನ್ನೂ ಪಡೆದುಕೊಂಡಿಲ್ಲ. ಸಾರ್ವಜನಿಕರ ಆಸ್ತಿ ಉತಾರೆ ವಿಳಂಬವಾಗುತ್ತಿದ್ದು ತುರ್ತು ಸೇವೆ ಒದಗಿಸಬೇಕು. 2018ರಲ್ಲಿ ಸುರೇಶ ಕಶೆಟ್ಟಿ ಹೆಸರಿನಲ್ಲಿ ವಾಹನ ಬಾಡಿಗೆ ತೆಗೆದಿರುವ ಕುರಿತು ವಿಚಾರಣೆ ನಡೆಸಬೇಕು. 2018ರಲ್ಲಿ ಆಗಿನ ಆಶ್ರಯ ಸಮಿತಿ ಅಧ್ಯಕ್ಷರು ರಿ.ಸ.ನಂ.73ರಲ್ಲಿ 346 ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು ಅವರಿಗೆ ಹಕ್ಕುಪತ್ರ ವಿತರಿಸಬೇಕು ಮತ್ತು ಇದನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಬಾರದು.

ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಕ್ರಮಬದ್ಧವಾಗಿಲ್ಲದ ಕಾರಣ ರದ್ದುಪಡಿಸಬೇಕು. ಪುರಸಭೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ದೋಷಗಳಿದ್ದು ರದ್ದುಪಡಿಸಿ ಇ-ಆಕ್ಷನ್‌ ಮೂಲಕ ಜರುಗಿಸಬೇಕು. 2018ರಲ್ಲಿ ಸಾರ್ವಜನಿಕ ಜಾಗೆಗಳನ್ನು ಎರಡು ಸಂಸ್ಥೆಗಳಿಗೆ ನೋಂದು ಮಾಡಿದ ಅಧಿಕಾರಿ ಮೇಲೆ ಕ್ರಮ ಜರುಗಿಸಬೇಕು. ಆಲಮಟ್ಟಿ ರಸ್ತೆಗೆ ಹೊಂದಿಕೊಂಡಿರುವ ಮಳಿಗೆ ಮಾಲೀಕ ಅಪ್ಪು ರಾವುಜಪ್ಪ ಮದರಿ ಹೆಸರಲ್ಲಿ ಕಾನೂನು ಬಾಹಿರವಾಗಿ ದಾಖಲಿಸಿ ಉತಾರೆ ನೀಡಿದ್ದು ರಿ.ಸ.ನಂ. 65ರ ಪ್ಲಾಟ್‌ ನಂಬರ್‌ 5ರಲ್ಲಿ ಗುಂಟೆ ಜಾಗೆ ದಾಖಲಿಸಿಕೊಂಡ ಅಧಿಕಾರಿ ಮೇಲೆ ಕ್ರಮ ಜರುಗಿಸಬೇಕು. ಪುರಸಭೆ ಕಾರ್ಯಾಲಯದಲ್ಲಿನ ಸಿಸಿ ಕ್ಯಾಮರಾ ಚಾಲೂ ಮಾಡಬೇಕು.

ಪಟ್ಟಣದಲ್ಲಿನ ಕಾಮಗಾರಿ ಕಳಪೆಯಾಗಿದ್ದು ಅಂದಾಜು ಪತ್ರಿಕೆಗೂ, ಕಾಮಗಾರಿಗೂ ವ್ಯತ್ಯಾಸವಿದ್ದು ಕ್ರಮ ಜರುಗಿಸಬೇಕು ಮತ್ತು ನಗರೋತ್ಥಾನ 4ನೇ ಹಂತದ ಕ್ರಿಯಾಯೋಜನೆ ಕುರಿತು ಸಾಮಾನ್ಯ ಸಭೆಗೆ ತಪ್ಪು ತಿಳಿವಳಿಕೆ ನಿಡಿದ ಅಧಿಕಾರಿ ಮೇಲೆ ಕ್ರಮ ಜರುಗಿಸಬೇಕು ಎನ್ನುವ ಬೇಡಿಕೆಗಳನ್ನು ಇಡಲಾಗಿದೆ. ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಪುರಸಭೆ ಅಧ್ಯಕ್ಷ, ಸದಸ್ಯರಿಗೆ ಸ್ವತಂತ್ರವಾಗಿ, ಕಾನೂನು ಬದ್ಧವಾಗಿ ಕೆಲಸ ಮಾಡುವುದು ಸಾಧ್ಯವಾಗುತ್ತಿಲ್ಲ. ಧರಣಿನಿರತರ ಬೇಡಿಕೆ ನ್ಯಾಯಯುತವಾಗಿವೆ. ಪಕ್ಷಾತೀತವಾಗಿ ಬೆಂಬಲ ನೀಡುತ್ತೇನೆ. ಇನ್ನೂ ಅನೇಕ ಸಮಸ್ಯೆಗಳಿದ್ದು ಇನ್ನೆರಡು ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತೇವೆ.

ಗ್ರಾಪಂ ಸದಸ್ಯರು ದಂಗೆ ಏಳುವ ಸ್ಥಿತಿ ಉದ್ಭವವಾಗಿದೆ. ಇವರ ಹಕ್ಕುಗಳನ್ನು ಮೊಟಕುಗೊಳಿಸುವುದರ ವಿರುದ್ಧ ಧ್ವನಿ ಎತ್ತುತ್ತೇವೆ. ಪುರಸಭೆ, ಗ್ರಾಪಂಗಳ ಅಧ್ಯಕ್ಷ, ಸದಸ್ಯರ ಹಕ್ಕು ಮೊಟಕುಗೊಳಿಸಬಾರದು. ಮನೆ ಹಂಚಿಕೆ ಮಾಡುವ ಅಧಿಕಾರ ಗ್ರಾಮಸಭೆಯಲ್ಲಿ ಪಾಲ್ಗೊಂಡವರಿಗೆ ಇರುತ್ತದೆಯೇ ಹೊರತು ಬೇರೆಯವರಿಗೆ ಇರುವುದಿಲ್ಲ. ಗ್ರಾಪಂ ಸದಸ್ಯರನ್ನು ಮನೆಗೆ ಕರೆದು ಸಭೆ ಮಾಡುವುದಲ್ಲ ಎಂದು ಸ್ಥಳೀಯ ಶಾಸಕರ ವಿರುದ್ಧ ನೇರವಾಗಿಯೇ ಹರಿಹಾಯ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.