ಧಾರವಾಡ-ದಕ್ಷಿಣ ಕನ್ನಡ ಚಾಂಪಿಯನ್‌

Team Udayavani, Nov 21, 2017, 2:33 PM IST

vij-1.jpg

ತಾಳಿಕೋಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಳಿಕೋಟೆಯ ಎಚ್‌.ಎಸ್‌. ಪಾಟೀಲ ಪಪೂ ಕಾಲೇಜ್‌ ಸಹಯೋಗದಲ್ಲಿ ಪಟ್ಟಣದಲ್ಲಿ ಎರಡು ದಿನ ನಡೆದ ಪಪೂ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಧಾರವಾಡ, ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್‌ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಮುಡಿಗೇರಿಸಿಕೊಂಡವು.

ಪಂದ್ಯಾವಳಿಯಲ್ಲಿ ರಾಜ್ಯದ 32 ಜಿಲ್ಲೆಗಳ 32 ಬಾಲಕರು ಹಾಗೂ 32 ಬಾಲಕಿಯರ ತಂಡ ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ಅತಿ ಪೈಪೋಟಿ ಒಡ್ಡಿದ ಧಾರವಾಡ ಜಿಲ್ಲೆ ತಂಡ ದಕ್ಷಿಣ ಕನ್ನಡ ಜಿಲ್ಲೆ ತಂಡವನ್ನು ಹಿಮ್ಮೆಟ್ಟಿಸಿ ಗೆಲುವು ತಮ್ಮದಾಗಿಸಿಕೊಂಡಿತು.  ಬಾಲಕಿಯರ ತಂಡದಲ್ಲಿ ತೀವ್ರ ಪೈಪೋಟಿ ಒಡ್ಡಿದ್ದ ಧಾರವಾಡ ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆ ತಂಡ ಹಿಮ್ಮೆಟ್ಟಿಸಿ ಗೆಲುವು ತಮ್ಮದಾಗಿಸಿಕೊಂಡಿತು.

ಸ್ಕೋರ್‌ ವಿವರ: ಬಾಲಕರ ಫೈನಲ್‌ ಪಂದ್ಯದಲ್ಲಿ ಧಾರವಾಡ ತಂಡ 24-6 ಅಂಕಗಳಿಂದ ವಿಜಯ ಸಾಧಿಸಿತು. ತೀವ್ರ ಕುತೂಹಲ ಕೆರಳಿಸಿದ್ದ ಫೈನಲ್‌ ಪಂದ್ಯದಲ್ಲಿ ಮೊದಲ ಅರ್ಧದ ಪಂದ್ಯದಲ್ಲಿ 8-4 ಅಂಕಗಳಿಂದ ಧಾರವಾಡ ತಂಡ ಮುಂದೆ ಇತ್ತು. ಎರಡನೇ ಅರ್ಧ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡ ಎದುರಾಳಿ ವಿರುದ್ಧ ಪ್ರತಿರೋಧ ತೋರದಿರುವುದ ರಿಂದ ಕೊನೆಯಲ್ಲಿ 24-6 ಅಂಕಗಳಿಂದ ಧಾರವಾಡ ತಂಡ ಗೆಲುವು ಸಾಧಿಸಿತು. ಧಾರವಾಡ ತಂಡದ ನಾಯಕ ಗೋಳಪ್ಪ ಹಿರೆಗೋಳ ಅದ್ಭುತ ಆಟ ಪ್ರದರ್ಶಿಸಿದರು.

ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಆಳ್ವಾಸ್‌ ಬಾಲಕಿಯರ ತಂಡ 33-5 ಅಂಕಗಳಿಂದ ಚಾಂಪಿಯನ್‌ ತಂಡವಾಗಿ ಹೊರ ಹೊಮ್ಮಿತು. ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಆಳ್ವಾಸ್‌ ತಂಡ ಎದುರಾಳಿಗೆ ಅವಕಾಶ ನೀಡದೇ ಇರುವುದು ಕಂಡು ಬಂತು.

ಪಂದ್ಯದ ಮೊದಲಾರ್ಧದಲ್ಲಿ 18-3 ಅಂಕ ಪಡೆದು ಮುನ್ನಡೆ ಸಾಧಿಸಿತ್ತು. ಎರಡನೇ ಅರ್ಧ ಪಂದ್ಯದಲ್ಲಿ 33-5 ಅಂಕಗಳಿಂದ ಜಯ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯಿತು. ಫೈನಲ್‌ ಪಂದ್ಯ ಸೋತ ಧಾರವಾಡ ತಂಡ ರನ್ನರ್‌ ಅಫ್‌ ಆಗಿ ಹೊರಹೊಮ್ಮಿತು. ಆಳ್ವಾಸ್‌ ತಂಡದ ಸಂಯೋಜನೆ ಆಟದಿಂದ ಪಂದ್ಯದಲ್ಲಿ ಗೆಲುವು ಸಾಧಿತು.

ಕ್ರೀಡಾಕೂಟದ ಉಸ್ತುವಾರಿಯನ್ನು ಎಸ್‌ಕೆಪಪೂ ಕಾಲೇಜಿನ ದೈಹಿಕ ಶಿಕ್ಷಕ ಆರ್‌.ಎಲ್‌. ಕೊಪ್ಪದ, ಎಚ್‌ಎಸ್‌ಪಿ ಪಪೂ ಕಾಲೇಜಿನ ಪ್ರಾಚಾರ್ಯ ವೆಂಕಟೇಶ ರಾಠೊಡ, ಮಲ್ಲು ರಾಯಗೊಂಡ, ಎಸ್‌.ಜಿ. ಮಂಗ್ಯಾಳ, ಅಶೋಕ ಕಟ್ಟಿ, ರಾವುತ ಪೂಜಾರಿ, ಶಿವು ನಾಯಕ, ಎಸ್‌.ಜಿ. ದೋತ್ರೆ ವಹಿಸಿದ್ದರು.

ಪಪೂ ಕಾಲೇಜಿನ ಉಪ ನಿರ್ದೇಶಕ ಅಂಕದ, ಬಿಪಿಎಡ್‌ ಕಾಲೇಜ್‌ ಪ್ರಾಚಾರ್ಯ ಭೀಮಣ್ಣ ಅರಕೇರಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಎಸ್‌.ಡಿ.ಗಾಂಜಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ, ಪ್ರಕಾಶ ಗೊಂಗಡಿ, ಸಂಗಮಾರ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಎಚ್‌.ಎಸ್‌. ಪಾಟೀಲ, ಯುಥ್‌ ನ್ಪೋರ್ಟ್ಸ್ ಕ್ಲಬ್‌ ಸದಸ್ಯರು ಮೇಲುಸ್ತುವಾರಿ ವಹಿಸಿದ್ದರು. ಕ್ರೀಡಾಕೂಟದಲ್ಲಿ ಮುಖ್ಯ ನಿರ್ಣಾಯಕರಾಗಿ ವಿ.ಡಿ. ಪಾಟೀಲ, ರಮೇಶ ಪಾಟೀಲ, ಮಕಾಂದಾರ, ಸುರೇಶ ನಾಯಕ, ಭಜಂತ್ರಿ, ರಜಪೂತ ಕಾರ್ಯ ನಿರ್ವಹಿಸಿದರು.

„ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.