ದೆಹಲಿಗೆ ಹೋಗಿ ಲಾಬಿ ಮಾಡದೇ ಲಭಿಸಿದೆ ಸಚಿವ ಸ್ಥಾನ


Team Udayavani, Jun 14, 2018, 1:10 PM IST

vijaypura-1.jpg

ವಿಜಯಪುರ: ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗಾಗಿ ಈ ಹಿಂದೆ ನಾನು ಪ್ರತಿನಿಧಿಸುತ್ತಿದ್ದ ತಿಕೋಟ ಕ್ಷೇತ್ರವನ್ನು ತ್ಯಾಗ ಮಾಡಿ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಹೋಗಿದ್ದೇನೆ. ಅವರೊಂದಿಗೆ ಎಂದಿಗೂ ನಾನಂತೂ ಉತ್ತಮ ಬಾಂಧವ್ಯವನ್ನೇ ಹೊಂದಿದ್ದೇನೆ. ಅವರೊಂದಿಗೆ ಭಿನ್ನಾಭಿಪ್ರಾಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಸಚಿವ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಸಂಜೆ ನಗರದ ಡಾ| ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು
ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರದ ಹಿಂದೆ ಎಂದೂ ಓಡಿದವನಲ್ಲ. ಶಾಶ್ವತವಲ್ಲದ ಸಚಿವ ಸ್ಥಾನದ  ಅಧಿಕಾರಕ್ಕಾಗಿ ಲಾಬಿ ಮಾಡಲಿಲ್ಲ, ಅದಕ್ಕಾಗಿ ದೆಹಲಿಗೆ ಅಲೆಯಲಿಲ್ಲ. ಹೈಕಮಾಂಡ್‌ ನನ್ನ ಸಾಮರ್ಥ್ಯ ಮನದಟ್ಟು ಮಾಡಿಕೊಂಡು ತಾನಾಗಿಯೇ ನನಗೆ ಸಚಿವನಾಗುವ ಅವಕಾಶ ನೀಡಿದೆ. ಸಚಿವ ಸಂಪುಟ ರಚನೆ ಹಿಂದಿನ ದಿನವೂ ಸಚಿವ ಸ್ಥಾನಕ್ಕಾಗಿ ಓಡಾಡದೇ ನಿರ್ಲಿಪ್ತನಾಗಿದ್ದೆ.

ಮಧ್ಯರಾತ್ರಿ ಪಕ್ಷದ ವರಿಷ್ಠರು ಕರೆ ಮಾಡಿ ಸಚಿವ ಸಂಪುಟದಲ್ಲಿ ಸೇರ್ಪಡೆಗೆ ಸಿದ್ಧರಾಗಿ ಎಂದು ಹೇಳಿದಾಗಲೇ ನನಗೂ ತಿಳಿದದ್ದು. ಹೀಗಾಗಿ ಅಧಿಕಾರ ಎಂದಿಗೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ತಾನಾಗಿಯೇ ದೊರಕಿದೆಯೇ ಹೊರತು ಲಾಬಿ ಮಾಡಿ ಪಡೆದುದಲ್ಲ. ದೊರಕಿರುವ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ಚುನಾವಣೆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಹಲವು ನಾಯಕರು ಸಮರ್ಥರಿಗೆ ಸಚಿವ ಸ್ಥಾನ ನೀಡುವುದಾಗಿ ಪ್ರಕಟಿಸಿದ್ದರು. ಹೀಗಾಗಿ ಈ ಬಾರಿ ಸಚಿವ ಸ್ಥಾನ ದೊರಕುವ ವಿಶ್ವಾಸವಿತ್ತು. ಕಾಂಗ್ರೆಸ್‌ ಪಕ್ಷ ನನಗೆ ಅವಕಾಶ ನೀಡಿತು. ಜನಸೇವೆ ಮಾಡುವ ಅವಕಾಶ ಕೊಟ್ಟಿತು ಎಂದರು. ಮತದಾರರ ಋಣ ತೀರಿಸಲು
ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಎಂ.ಬಿ. ಪಾಟೀಲ  ಅವರಿಗಾಗಿ ಈ ಹಿಂದೆ ನಾನು ಪ್ರತಿನಿಧಿಸುತ್ತಿದ್ದ ತಿಕೋಟ ಕ್ಷೇತ್ರವನ್ನು ತ್ಯಾಗ
ಮಾಡಿ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಹೋಗಿದ್ದೇನೆ. ಅವರೊಂದಿಗೆ ಎಂದಿಗೂ ನಾನಂತೂ ಉತ್ತಮ ಬಾಂಧವ್ಯವನ್ನೇ ಹೊಂದಿದ್ದೇನೆ.  ಅವರೊಂದಿಗೆ ಭಿನ್ನಾಭಿಪ್ರಾಯವಿಲ್ಲ ಎಂಬುದು ಕೇವಲ ಊಹಾಪೋಹ ಮಾತ್ರ. ಎಂಬಿ.ಪಾಟೀಲ ಅವರೊಂದಿಗೆ ಬಾಂಧವ್ಯ ಸರಿ ಇಲ್ಲದಿದ್ದರೆ ಕ್ಷೇತ್ರ ತ್ಯಾಗ ಮಾಡುತ್ತಿರಲಿಲ್ಲ ಎಂದರು.

ಜಿಲ್ಲೆಯ ಸಮಗ್ರ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ. ಪಾಟೀಲ ಅವರಿಗೆ ಜಿಲ್ಲೆಯ ಕಾಂಗ್ರೆಸ್‌ನ ಎಲ್ಲಾ ಏಳೂ ಶಾಸಕರು ನಮ್ಮ ಸ್ವಾರ್ಥ ಬದಿಗಿಟ್ಟು ಸಂಪೂರ್ಣ ಸಹಕಾರ ನೀಡಿದ್ದೇವೆ. ಇದೀಗ ನಾನು ಸಚಿವನಾಗಿರುವ ಈ ಹಂತದಲ್ಲಿ ಸಂಪೂರ್ಣ ಸಹಕಾರ ನೀಡುವ ಅವರ ಹೇಳಿಕೆಗೆ ನಾನು ಅಭಿನಂದಿಸುತ್ತೇನೆ ಎಂದರು.  ಡಿಸಿಸಿ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ, ಮಾಜಿ ಶಾಸಕರಾದ ಡಾ| ಎಂ.ಎಸ್‌.
ಬಾಗವಾನ, ವಿಠಲ ಕಟಕದೊಂಡ, ಕಾಂಗ್ರೆಸ್‌ ಮುಖಂಡರಾದ ಬಿ.ಎಸ್‌ .ಪಾಟೀಲ-ಯಾಳಗಿ, ಆಜಾದ್‌ ಪಟೇಲ್‌, ಹಾಸಿಂಪೀರ ವಾಲೀಕಾರ, ಎಸ್‌.ಎಂ. ಪಾಟೀಲ ಗಣಿಹಾರ ಉಪಸ್ಥಿತರಿದ್ದರು.

ಎಂ.ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿ ಐದು ವರ್ಷ ಉತ್ತಮ ಕೆಲಸ ಮಾಡಿರುವ ಕಾರಣ ಅವರು ಈಗ ವಿಶ್ರಾಂತಿ ಪಡೆಯಲಿ. ಈ ಬಾರಿ ಸಿ.ಎಸ್‌.ನಾಡಗೌಡ ಅವರೂ ಮುದ್ದೇಬಿಹಾಳ ಕ್ಷೇತ್ರದಲ್ಲಿ ಆಯ್ಕೆ ಆಗಲಿಲ್ಲ ಎಂಬ ಕೊರಗಿದೆ. ಅದರ ಮಧ್ಯೆಯೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಶಿವಾನಂದ ಪಾಟೀಲ ಹಾಗೂ ನಾನು ಕಟ್ಟಿಕೊಂಡಿರುವ ಕನಸುಗಳನ್ನು ಸಾಕಾರಗೊಳಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇವೆ. ದೊರಕಿರುವ ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೂ ಸಚಿವ ಶಿವಾನಂದ ಪಾಟೀಲ ಬದ್ಧತೆ ತೋರಲಿದ್ದಾರೆ. 

 ಯಶವಂತರಾಯಗೌಡ ವಿ. ಪಾಟೀಲ ಶಾಸಕರು, ಇಂಡಿ ಕ್ಷೇತ

ಬಿಜೆಪಿ ಪಕ್ಷದಲ್ಲಿದ್ದ ನಾನು ಅಲ್ಲೇ ಇದ್ದಿದ್ದರೆ ಈಗ ಡಿಸಿಎಂ ಆಗಿರುತ್ತಿದ್ದೆ. ಸುಮ್ಮನೇ ನನ್ನನ್ನು ಕಾಂಗ್ರೆಸ್‌ ಪಕ್ಷಕ್ಕೆ ಕರೆ ತಂದು ಅಧಿಕಾರದಿಂದ ವಂಚಿತನನ್ನಾಗಿ ಮಾಡಿದಿರಿ ಎಂದು ಶಿವಾನಂದ ಪಾಟೀಲ ಅವರು ನಮ್ಮನ್ನು ಪ್ರೀತಿಯಿಂದ ಕುಟುಕುತ್ತಿದ್ದರು. ಈಗ ಅವರಿಗೆ ಸಾಮರ್ಥ್ಯಕ್ಕೆ ತಕ್ಕಂತೆ ಅಧಿಕಾರ ದೊರಕಿದೆ. ಬಿಜೆಪಿ ಪಕ್ಷದಲ್ಲಿದ್ದ ಶಿವಾನಂದ ಪಾಟೀಲ ಅವರನ್ನು ನಾನು ಸೇರಿದಂತೆ ಹಲವಾರು ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಕರೆ ತಂದೆವು. ಆದರೆ ಸಚಿವ ಸ್ಥಾನದ ಅಧಿಕಾರ ದಕ್ಕಲು ದಶಕಗಳೇ ಕಳೆಯಬೇಕಾಯಿತು  

ಸಿ.ಎಸ್‌.ನಾಡಗೌಡ, ಮಾಜಿ ಸಚಿವ

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.