ರಸ್ತೆ ಸುಧಾರಣೆಗೆ ಜಿಲ್ಲಾಧಿಕಾರಿ ತಾಕೀತು
Team Udayavani, Oct 7, 2020, 4:58 PM IST
ವಿಜಯಪುರ: ಸಾರ್ವಜನಿಕರ ಹಿತದೃಷ್ಟಿಯಿಂದಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರದ ಎಲ್ಲ ರಸ್ತೆ ಗುಂಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅಲ್ಲದೇ ನಗರದಲ್ಲಿ ಅಪಘಾತ ಸಂಭವಿಸಿದರೆ ಪಾಲಿಕೆ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ನಗರದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ನಗರದಲ್ಲಿ ನಾಗರಿಕರು ಸಂಚಾರ ಮಾಡಲು ಗಂಭೀರ ಸಮಸ್ಯೆ ಎದುರಿಸುತ್ತಿರುವ ಕುರಿತು ದೂರುಗಳು ಬರುತ್ತಿವೆ. ಹೀಗಾಗಿ ತಕ್ಷಣವೇ ರಸ್ತೆಗಳ ದುರಸ್ತಿ ಕೈಗೊಳ್ಳಬೇಕು. ರಸ್ತೆ ಮೇಲಿನ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ಒಂದೊಮ್ಮೆ ನಗರದಲ್ಲಿ ಹದಗೆಟ್ಟ ರಸ್ತೆಗಳಿಂದ ಅಪಘಾತ ಸಾವು ಸಂಭವಿಸಿದರೆ ಪಾಲಿಕೆ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಸಿದರು.
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆಗೆ ಸಂಬಂಧಪಟ್ಟಂತೆ ಈಗಾಗಲೆ ಕರಡು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಆಡಳಿತಮತ್ತು ಮುಂದಾಳತ್ವ, ಜಿಲ್ಲಾ ಕ್ರಿಯಾಯೋಜನೆ, ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ವಿಶ್ಲೇಷಣೆ, ಮಾಹಿತಿ ಮತ್ತು ದತ್ತಾಂಶಗಳು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಪ್ರವರ್ಧನ, ಎಂಜಿನಿಯರಿಂಗ್ ಚಟುವಟಿಕೆಗಳು, ಅಪಘಾತ ಮತ್ತು ತುರ್ತು ಚಿಕಿತ್ಸೆ, ಮೇಲ್ವಿಚಾರಣೆ, ಪರಿಶೀಲನೆ, ನಿರಂತರ ಮೌಲ್ಯಮಾಪನ, ರಸ್ತೆ ಸುರಕ್ಷತೆ ಅರಿವು ಮತ್ತು ತರಬೇತಿ ಚಟುವಟಿಕೆಯನ್ನು ಪರಿಣಾಮಕಾರಿ ಹಮ್ಮಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕ್ರಿಯಾಯೋಜನೆ ಅನ್ವಯ ರಸ್ತೆ ಸುಧಾರಣೆ-ಸಾಧನ ಸಲಕರಣೆ ಅಳವಡಿಕೆಗೆಪ್ರಾದೇಶಿಕ ಸಾರಿಗೆ ಕೇಂದ್ರ ಕಚೇರಿಯಿಂದ ಅನುದಾನ ಲಭ್ಯವಾಗಲಿದೆ. ಪೊಲೀಸ್ ಇಲಾಖೆ ಮೂಲಕ ರಸ್ತೆ ಸುರಕ್ಷತೆಗೆ ಕುರಿತು ಸೂಚನಾ ಫಲಕ ಸೇರಿದಂತೆ ಇತರೆ ಖರ್ಚು-ವೆಚ್ಚ ವರದಿ ಪಡೆಯಬೇಕು. ಮಹಾನಗರ ಪಾಲಿಕೆಯೊಂದಿಗೆ ಸಮನ್ವಯತೆ ಸಾಧಿ ಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಈ ಜವಾಬ್ದಾರಿ ನಿಭಾಯಿಸಬೇಕು ಎಂದು ಸೂಚಿಸಿದರು.
ನಗರದ ಸ್ಯಾಟ್ಟ್ ಲೈಟ್ ಬಸ್ ನಿಲ್ದಾಣದಿಂದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದವರೆಗಿನ ಚತುಷ್ಪಥ ರಸ್ತೆನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕವಾಗಿ ತಗ್ಗು-ಗುಂಡಿ ಮುಚ್ಚಿ ದುರಸ್ತಿ ಮಾಡಬೇಕು. ಕನಕದಾಸ ವೃತ್ತದಿಂದ ಕಾಮತ್ ಹೋಟೆಲ್‌ವರೆಗಿನ ರಸ್ತೆ ದುರಸ್ತಿಗೆ ನಿರ್ಧರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸುರಕ್ಷತೆ ಹಿನ್ನೆಲೆಯಲ್ಲಿ ಸಭೆಗೆ ಗೈರಾದ ಕಲಬುರಗಿ ಹಾಗೂ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರದ ಅಧಿಕಾರಿಗಳಿಂದಸಮರ್ಪಕ ಉತ್ತರ ಪಡೆಯುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿರುವ ಇಟಗಿ ಪಂಪ್ ವೃತ್ತ, ವಲ್ಲಬಾಯಿ ಪಟೇಲ್ ವೃತ್ತ, ತಿಕೋಟಾ ವೃತ್ತ, ಸಿಂದಗಿ ವೈ ಜಂಕ್ಷನ್, ಬಬಲೇಶ್ವರ ವೈ ಜಂಕ್ಷನ್ ಸುಧಾರಣೆಗೆ ಲೋಕೋಪಯೋಗಿ ಇಲಾಖೆ ಮುಂದಾಗಿದೆ. ಈ ಕುರಿತು ಟ್ರಾಫಿಕ್ ಇಂಚಾರ್ಜ್ ಮತ್ತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್ಪಿ ಅನುಪಮ್ ಅಗರವಾಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್ವೆಲ್ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.