ಸರಕಾರದಿಂದ ಮೀಸಲಾತಿ ಗೊಂದಲ ಸೃಷ್ಟಿ: ಡಿಕೆಶಿ

Team Udayavani, Jan 1, 2023, 5:10 AM IST

ಸರಕಾರದಿಂದ ಮೀಸಲಾತಿ ಗೊಂದಲ ಸೃಷ್ಟಿ: ಡಿಕೆಶಿ

ವಿಜಯಪುರ: ಒಕ್ಕಲಿಗರಿಗೆ 2-ಸಿ, ಲಿಂಗಾಯತರಿಗೆ 2-ಡಿ ಮೀಸ ಲಾತಿ ಘೋಷಿಸಿರುವುದು ಗೊಂದಲ ಸೃಷ್ಟಿಸುವ ಹುನ್ನಾರವೇ ಹೊರತು ಸರಕಾರದ ಜಾಣ ನಡೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಮೀಸಲಾತಿಯಿಂದ ಯಾರಿಗೆ ಅನುಕೂಲ, ಯಾರಿಗೆ ಅನನುಕೂಲ, ಎಲ್ಲಿಂದ ತೆಗೆದು ಎಲ್ಲಿ ಹಾಕುತ್ತಾರೆ ಎಂಬುದರ ಬಗ್ಗೆ ಸರಕಾರದಲ್ಲಿ ಸ್ಪಷ್ಟತೆ ಇಲ್ಲ. ಮೀಸಲಾತಿ ವಿಷಯದಲ್ಲಿ ಕಾನೂನು ತೊಡಕು ಸೃಷ್ಟಿಸಿದ್ದೇ ಸರಕಾರದ ಹೆಚ್ಚುಗಾರಿಕೆ ಎಂದರು.

ಶೇ.10 ಇತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಹೇಗೆ ತೆಗೆಯಲು ಸಾಧ್ಯ? ಒಬಿಸಿಯಿಂದ ತೆಗೆದರೆ ಅಲ್ಲಿರುವ ಸಮುದಾಯಗಳ ಭವಿಷ್ಯವೇನು? ಮಾಡುವ ಯಾವುದೇ ಕೆಲಸವಿದ್ದರೂ ಸಂವಿಧಾನ ಹಾಗೂ ಕಾನೂನು ಬದ್ಧವಾಗಿರಬೇಕು. ಇಷ್ಟಕ್ಕೂ ಸರಕಾರ ಘೋಷಿಸಿರುವ ಮೀಸಲಾತಿ ಬಗ್ಗೆ ಆಯಾ ಸಮಾಜದ ಮುಖಂಡರಿಂದ ಪೂರಕ ಹೇಳಿಕೆ ಕೊಡಿಸಲು ಸಾಧ್ಯವಿದೆಯೇ?
ಒಕ್ಕಲಿಗ ಸಮುದಾಯಕ್ಕೆ ಶೇ.12 ಮೀಸಲು ಕೊಡಬೇಕಿತ್ತು. ಪಂಚಮಸಾಲಿ ಸಮುದಾಯದ 2ಎ ಬೇಡಿಕೆ ಈಡೇರಿಸಬೇಕಿತ್ತು. ಪರಿಶಿಷ್ಟರ ಮೀಸಲಾತಿ ಹೆಚ್ಚಿಸಿದ್ದಾಗಿ ಹೇಳುವ ಸರಕಾರ ಸಂಸತ್‌ನಲ್ಲಿ ಮಂಡಿಸಿ ಒಂದನೇ ಅನುಚ್ಛೇದದಲ್ಲಿ ಸೇರಿಸಬೇಕಿತ್ತು. ಆದರೆ ಈವರೆಗೆ ಕೇಂದ್ರಕ್ಕೆ ಸೂಕ್ತ ರೀತಿಯ ದಾಖಲೆ-ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು.

ಬಿಜೆಪಿ ಮನೆಗೆ ಹೋಗುವ ಸಮಯ ಹತ್ತಿರದಲ್ಲಿದೆ
ಐದು ವರ್ಷದಲ್ಲಿ ಏನೂ ಮಾಡ‌ದ ಬಿಜೆಪಿ ಸರಕಾರ ಹಾಗೂ ಅದರ ನಾಯಕರು ಮನೆಗೆ ಹೋಗುವ ಸಮಯ ಹತ್ತಿರವಾಗಿದೆ. ಅಮಿತ್‌ ಶಾ ಚುನಾವಣೆ ಸಂದರ್ಭ ಆಶ್ವಾಸನೆ ಕೊಡಲು ಬರುತ್ತಿದ್ದಾರಷ್ಟೆ. 2018ರಲ್ಲಿ ನೀಡಿದ್ದ 600 ಭರವಸೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 50ನ್ನು ಮಾತ್ರ ಈಡೇರಿಸಿದೆ. 2013ರಲ್ಲಿ ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದಾಗ 169 ಭರವಸೆ ನೀಡಿದ್ದು, 165ನ್ನು ಈಡೇರಿಸಲಾಗಿದೆ ಎಂದರು.

ಯತ್ನಾಳ್‌ ಮೌನವೇಕೆ
ಪಂಚಮಸಾಲಿ ಹಾಗೂ ಇತರ ಮೀಸಲಾತಿ ವಿಷಯದಲ್ಲಿ ದೊಡ್ಡದಾಗಿ ಮಾತನಾಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮೀಸಲಾತಿ ಗೊಂದಲ ಸೃಷ್ಟಿಸಿ ಮಹಾಮೋಸ ಮಾಡಿರುವ ಸರಕಾರದ ನಡೆ ಹಾಗೂ ಶೇ. ನೂರರಷ‌ುr ಮೀಸಲಾತಿ ಕಲ್ಪಿಸುವುದು ಅಸಾಧ್ಯ ಎಂದಿರುವ ಸಚಿವ ಮುರುಗೇಶ ನಿರಾಣಿ ಮಾತಿಗೆ ಮೌನ ವಹಿಸಿರುವುದು ಯಾಕೆ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ನಗರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಷಯದಲ್ಲಿ ಬಿಜೆಪಿ ಬಾಯಿ ಮುಚ್ಚಿಸಿದೆ. ಮಾತೆತ್ತಿದರೆ ಪಕ್ಷದಿಂದ ಕಿತ್ತು ಹಾಕುತ್ತೇವೆಂದು ಯತ್ನಾಳ್‌ ಬಾಯಿ ಮುಚ್ಚಿಸಲಾಗಿದೆ. ಆದಕಾರಣ ಮೀಸಲಾತಿ ವಿಚಾರದಲ್ಲಿ ಅವರು ಉಸಿರೇ ಇಲ್ಲದಂತಾಗಿದ್ದಾರೆ ಎಂದು ಕುಟುಕಿದರು.

ಟಾಪ್ ನ್ಯೂಸ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.