Vijayapura: ಡಿಕೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು: ಭವಿಷ್ಯ ನುಡಿದ ಯತ್ನಾಳ್


Team Udayavani, Aug 18, 2023, 6:29 PM IST

DK Shivakumar will never become Chief Minister says Basanagouda patil yatnal

ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಸೂಪರ್ ಸಿ.ಎಂ. ರೀತಿ ವರ್ತಿಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ದುರ್ಬಲಗೊಳಿಸಿ ಮುಖ್ಯಮಂತ್ರಿಯಾಗುವ ಹುನ್ನಾರ ನಡೆಸಿದ್ದಾರೆ. ಆದರೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ಬೆನ್ನಿಗೆ 15 ಶಾಸಕರಿದ್ದರೂ ಹೆಚ್ಚು ಶಾಸಕರ ಬೆಂಬಲ ಇರುವ ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಶಿವಕುಮಾರ ಸಂಚು ರೂಪಿಸುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಹೋದವರು ಮರಳಿ ಬರುತ್ತಾರೆ ಎನ್ನುವ ಹೇಳಿಕೆ ಹಿಂದೆ ಸಿದ್ದರಾಮಯ್ಯ ಶಕ್ತಿ ಕುಗ್ಗಿಸುವ ಹುನ್ನಾರ ಅಡಗಿದೆ ಎಂದು ವಿಶ್ಲೇಷಿಸಿದರು.

ಸಿದ್ಧರಾಮಯ್ಯ ಅವರ ವಿರುದ್ಧ ಇರುವ ಶಾಸಕರನ್ನು ಒಗ್ಗೂಡಿಸಿ ಇದಕ್ಕಾಗಿ ರಾಜಕೀಯವಾಗಿ ಮುಗಿಸಲು ಡಿಸಿಎಂ ದೊಡ್ಡ ಯೋಜನೆಯನ್ನೇ ಮಾಡಿದ್ದಾರೆ. ಇದಕ್ಕಾಗಿ ದೆಹಲಿಯಲ್ಲಿ ಯಾರ್ಯಾರ ಮನೆಗೆ ತಿರುಗಿ, ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಆರೋಪಿಸಿದರು.

ಶಿವಕುಮಾರ್ ಅವರಿಂದ ಏನೆಲ್ಲ ನೋವು ಅನುಭವಿಸಿದರೂ ಸಿದ್ದರಾಮಯ್ಯ ಸುಮ್ಮನಿದ್ದಾರೆ. ಈ ನೋವೇ ಅವರು ಶಿವಕುಮಾರ ಅವರಿಗೆ ಅಧಿಕಾರ ಬಿಟ್ದಟುಕೊಡದಂತೆ ಮಾಡಲಿದೆ. ನಾನೇ ಕಾಂಗ್ರೆಸ್ ಕೊನೆ ಮುಖ್ಯಮಂತ್ರಿ ಎನ್ನುವ ಸ್ಥಿತಿ ಇದ್ದು, 5 ತಿಂಗಳಾದರೂ ಸರಿ, 5 ವರ್ಷವಾದರೂ ಸರಿ ಸಿದ್ಧರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಲಿದ್ದಾರೆ. ಹೀಗಾಗಿ ಸಿ.ಎಂ. ಆಗುವ ಭಾಗ್ಯ ಶಿವಕುಮಾರಗೆ ಸಿಗುವುದಿಲ್ಲ ಎಂದು ಲೇವಡಿ ಮಾಡಿದರು.

ತನಿಖೆ ನಡೆಸಲಿ: ಒಂದೊಮ್ಮೆ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ತನಿಖೆ ನಡೆಸಲು ಈ ಸರ್ಕಾರಕ್ಕೆ ಧೈರ್ಯ ಇದೆಯೇ, ಇದ್ದರೆ 6 ತಿಂಗಳಲ್ಲಿ ತನಿಖೆ ಮುಗಿಸಲಿ. ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನು ಮಾಡಿರುವ ಆರೋಪದ ಕುರಿತು ತನಿಖೆ ಮಾಡಿದರೂ ಎದುರಿಸಲು ಸಿದ್ಧನಿದ್ದೇನೆ. ನಮ್ಮಲ್ಲಿಯೂ ಭ್ರಷ್ಟರಿದ್ದರೆ ತನಿಖೆಯಿಂದಾದರೂ ಬಿಜೆಪಿ ಸ್ವಚ್ಛಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಕಮೀಷನ್ ಪಡೆದಿತ್ತು ಎಂಬುದಕ್ಕೆ ಸಚಿವ ಎಂ.ಬಿ.ಪಾಟೀಲ ಅವರ ಬಳಿ ಆಡಿಯೋ, ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ. ಕ್ಯಾಸೆಟ್ ಕಾಲ ಹೋಗಿ ಪೆನ್‍ಡ್ರೈವ್ ಕಾಲ ಬಂದಿದೆ ಎಂದು ಛೇಡಿಸಿದರು.

ಎಂ.ಬಿ.ಪಾಟೀಲ ಅವರು ಐದು ವರ್ಷ ಸಚಿವನಾಗಿರುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಯತ್ನಾಳ್ ವಿಡಿಯೋ ನನ್ನ ಬಳಿ ಇವೆ ಬಿಡುಗಡೆ ಮಾಡುತ್ತೇನೆ ಎಂದಿರುವ ಸಚಿವ ಪಾಟೀಲ ಅವರಿಗೆ ಅಧಿಕಾರದ ಅರಳು ಮರಳು ಹಿಡಿದಿದೆ ಎಂದು ಕುಟುಕಿದರು.

ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ವೇತನ ನೀಡಲೂ ಸಾಧ್ಯವಾಗದ ದುಸ್ಥಿತಿ ಇದೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಳಿ ಪೆನ್ ಡ್ರೈವ್ ಇದೆ ಎಂದು ಬ್ಲಾಕ್‍ಮೇಲ್ ಮಾಡಿ ಬಾಯಿ ಮುಚ್ಚಿಸುವ ಬೆದರಿಕೆ ತಂತ್ರ ಬೇಡ. ಧೈರ್ಯ ಇದ್ದರೆ ಯಾರ್ಯಾರ ಡೈವ್, ಯಾರ್ಯಾರ ಪೆನ್ ಇದೆಯೋ ಬಿಡುಗಡೆ ಮಾಡಲಿ. ಯಾರ್ಯಾರದ್ದು ಏನೇನಿದೆ ಎಂಬುದು ನನಗೂ ಗೊತ್ತಿದೆ. ಇಂಥ ಹೇಳಿಕೆ ಕೊಡುವವರದ್ದು ಏನೇನಿದೆ ಎಂಬುದೂ ನನಗೆ ಗೊತ್ತಿದೆ. ಆದರೆ ನಾನು ಬ್ಲ್ಯಾಕ್ ಮೇಲ್ ಮಾಡಲಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಬಾಂಬೆ ಟೀಂ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬುದೆಲ್ಲ ಊಹಾಪೋಹ ಹಾಗೂ ಕಾಂಗ್ರೆಸ್ ನಡೆಸಿರುವ ಅಪ್ರಚಾರ. ಶಾಸಕ ಮುನಿರತ್ನ ಬಿಜೆಪಿ ಪಕ್ಷದಲ್ಲೇ ನನ್ನ ರಾಜಕೀಯ ಜೀವನ ಕೊನೆಗೊಳ್ಳಲಿದೆ ಎಂದಿದ್ದಾರೆ. ಇಂಥ ಅಪಪ್ರಚಾರದಿಂದ ಭಯ ಹುಟ್ಟಿಸಿ, ಲೋಕಸಭಾ ಚುನಾವಣೆಗೆ ವಾತಾವರಣ ವಾಮ ಮಾರ್ಗದ ಸಿದ್ಧತೆ ನಡೆಸಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಏನೇ ತಂತರ ಮಾಡಿದರೂ ಲೋಕಸಭೆ ಚುನಾವಣೆಯಲ್ಲಿ ದೇಶಕ್ಕೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ರಾಜ್ಯದಲ್ಲಿ ಬಿಜೆಪಿ ಮತ್ತೆ 25 ಸ್ಥಾನ ಗೆಲ್ಲುವುದು ಖಚಿತ. ದೇಶಕ್ಕೆ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಇಂತವರ ನಾಯಕತ್ವ ದೇಶಕ್ಕೆ ಬೇಕಿಲ್ಲ. ಭಾರತವನ್ನು ವಿಶ್ವದ ಆರ್ಥಿಕ ಬಲಿಷ್ಠ ರಾಷ್ಟ್ರಗಳಲ್ಲಿ 5ನೇ ಸ್ಥಾನಕ್ಕೆ ತಂದಿರುವ ಮೋದಿ ಅವರ ನಾಯಕತ್ವ ಬೇಕಿದ್ದು, ದೇಶದ ಮತದಾರರು ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬಿಜೆಪಿ ಮುಖಂಡ ಎಸ್.ಟಿ.ಸೋಮಶೇಖರ್ ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಶಾಸಕನಾಗಿದ್ದ ನಾನು ಪಟೇಲರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದಿದ್ದೆ. ಅಧಿಕಾರದಲ್ಲಿರುವ ನಾಯಕರನ್ನು ವಿಪಕ್ಷದವರು ಭೇಟಿ ಮಾಡುವುದು ಸಾಮಾನ್ಯ. ರಾಜಕೀಯದ ಹೊರತಾಗಿ ಭೇಟಿ ಮಾಡಿದರೆ ತಪ್ಪೇನಿದೆ ಎಂದರು.

ಬಿಜೆಪಿಗೆ ಓಟು ಹಾಕಿದವರು ರಾಕ್ಷಸರು ಎಂದು ಸುರ್ಜೆವಾಲಾ ಹೇಳಿಕೆಗೆ ತೀಕ್ಷ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ, ಸುರ್ಜೇವಾಲಾ ಭಾರತೀಯ ಮತದಾರರನ್ನು ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಸಂಸ್ಕೃತಿಯೇ ರಾಕ್ಷಸತ್ವದಿಂದ ಕೂಡಿದೆ. ಅದರ ವಂಶದ ಹಿನ್ನೆಲೆಯಲೇ ಸರಿ ಇಲ್ಲ, ಅದು ಹೈಬ್ರಿಡ್ ತಳಿಯ ರಾಕ್ಷಸ ಸಂತತಿ. ಕಾಂಗ್ರೆಸ್ ಪಕ್ಷ ಎಂಥ ಮನಸ್ಥಿತಿ ಹೊಂದಿದೆ ಎಂಬುದನ್ನು ದೇಶದ ಮತದಾರರು ಇನ್ನಾದರೂ ಅರ್ಥೈಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.