ಜೈಲು ಹಕ್ಕಿ ಬಿಎಸ್‌ವೈ ಸಿಎಂ ಮಾಡಬೇಡಿ: ಸಿದ್ದರಾಮಯ್ಯ
Team Udayavani, Apr 30, 2018, 6:45 AM IST
ಇಂಡಿ (ವಿಜಯಪುರ): ಜೈಲಿಗೆ ಹೋಗಿ ಬಂದವರನ್ನು ಮುಖ್ಯಮಂತ್ರಿ ಮಾಡ್ತೀರಾ? ಹಾಗೆ ಮಾಡಬೇಡಿ, ರಾಜ್ಯ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಆಶೀರ್ವದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿಯವರು ಅಚ್ಛೇ ದಿನ್ ಆಯೇಗಾ ಎಂದು ಹೇಳಿದ್ದಾರೆ. ಅಚ್ಛೇ ದಿನ್ ಬಂದಿದೆಯಾ? ಕಚ್ಚಾ ಬೆಲೆ ಇಳಿಕೆಯಾದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿಲ್ಲ. ನೋಟ್ ಬ್ಯಾನ್ ಮಾಡಿದ ನಂತರ ಕಪ್ಪು ಹಣ ತಂದು ಪ್ರತಿಯೊಬ್ಬರ ಅಕೌಂಟ್‌ಗೆ 15 ಲಕ್ಷ ಹಣ ಹಾಕ್ತೀನಿ ಅಂದಿದ್ರು, ಹಾಕಿದ್ರಾ? ಯಾರಿಗಾದರೂ ಹಣ ಬಂದಿದೆಯಾ? ಒಂದು ಕಡೆ ಕೋಮುವಾದಿ ಬಿಜೆಪಿ. ಇನ್ನೊಂದು ಕಡೆ ಅವಕಾಶವಾದಿ ಪಕ್ಷವಿದೆ. ನಮ್ಮದು ಅಭಿವೃದ್ಧಿ ಪರ ಪಕ್ಷ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ ಕಾಂಗ್ರೆಸ್ ಮತ್ತೆ ಅ ಧಿಕಾರಕ್ಕೆ ಬರೋದು ಅಷ್ಟೇ ಸತ್ಯ ಎಂದರು.
ಬಿಎಸ್‌ವೈ ಮಾತು ನಂಬಬೇಡಿ:
ಬಳಿಕ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಮಾತನಾಡಿ, ಐದು ವರ್ಷಗಳಲ್ಲಿ ಮೂರು ಸಿಎಂಗಳು ಅಧಿ ಕಾರ ನಡೆಸಿದ ಬಿಜೆಪಿ ಸಾಧನೆ ಶೂನ್ಯ. ರೈತರ ಸಾಲಮನ್ನಾ ಮಾಡಲು ನಮ್ಮ ಸರ್ಕಾರದಲ್ಲಿ ನೋಟ್‌ಪ್ರಿಂಟ್ ಮಷಿನ್ ಇಲ್ಲ ಎಂದು ಹೇಳಿದ್ದು ಯಡಿಯೂರಪ್ಪ. ಹಸಿರು ಶಾಲು ಹಾಕಿಕೊಂಡು ಬರುವ ಬಿಎಸ್‌ವೈ ಮಾತು ನಂಬಬೇಡಿ. ಬಿಜೆಪಿಯ ಯಡಿಯೂರಪ್ಪ, ಜೆಡಿಎಸ್‌ನ ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.