“ಆಸೆ-ಆಮಿಷಗಳಿಗೆ ಬಲಿಯಾಗದಿರಿ’
Team Udayavani, Jul 3, 2018, 1:31 PM IST
ಬಾಗಲಕೋಟೆ: ಪೊಲೀಸ್ ವೃತ್ತಿ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಸವಾಲುಗಳ ಜೊತೆಗೆ ಆಸೆ, ಆಮಿಷಗಳು ಬರಲಿದ್ದು, ಆಮಿಷಗಳಿಗೆ ಬಲಿಯಾಗಬಾರದು ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು.
ನವನಗರ ಪೊಲೀಸ್ ಪರೇಡ್ ಮೈದಾನಲ್ಲಿ ಹಮ್ಮಿಕೊಂಡ 9ನೇ ತಂಡದ ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಅಪರಾಧ ಎಸಗಿ ಬಂಧಿತರಾದ ಕೈದಿಗಳನ್ನು ನ್ಯಾಯಾಲಯ ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯುವ ವೇಳೆಯಲ್ಲಿ ಬಹಳಷ್ಟು ಅಪರಾಧಿಗಳು ಪರಾರಿಯಾಗುತ್ತಿದ್ದಾರೆ. ಪೊಲೀಸ್ ಸಿಬ್ಬಂದಿ ಜೊತೆ ಕೈ ಜೋಡಿಸಿ ಪರಾರಿಯಾಗುವಲ್ಲಿ ಕಾರಣೀಭೂತರಾಗಿದ್ದಾರೆ. ಇದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದರು.
ಸದ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಹೊಂದಿದ 116 ಜನ ಇಲಾಖೆಯ ಆಧಾರ ಸ್ತಂಭಗಳಾಗಿದ್ದು, ತಮ್ಮ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮ ಕುಟುಂಬ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕು ಎಂದರು.
116 ಜನರಲ್ಲಿ 47 ಜನ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರಾಗಿದ್ದೀರಿ. ನಿಮ್ಮ ಕರ್ತವ್ಯದಲ್ಲಿ ಕಲಿಕೆ ನಿರಂತರವಾಗಿರಲಿ. ತಮ್ಮ ಮುಂದಿನ ಜೀವನದಲ್ಲಿ ಮಾನಸಿಕ, ದೈಹಿಕವಾಗಿ ಸದೃಢರಾಗಿ ಶಿಸ್ತು ಮತ್ತು ಸಜ್ಜನಿಕೆ ಹಾಗೂ ಸಂಯಮಕ್ಕೆ ಮಾದರಿಯಾಗಿಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಂ ಮಾತನಾಡಿ, ನೀವು ದೈಹಿಕ, ಮಾನಸಿಕ ಮತ್ತು ಸಮತೋಲನದ ಎಲ್ಲ ಆಯಾಮಗಳನ್ನು ದಾಟಿ ಆಯ್ಕೆಯಾಗಿ ಬಂದಿದ್ದೀರಿ. ಈ ಪರೇಡ್‌ನಲ್ಲಿ ತಮ್ಮ ಚೈತನ್ಯ ಮೆರೆದಿದ್ದೀರಿ. ಉನ್ನತ ವ್ಯಾಸಂಗದ ನಂತರವೂ ಇಂತಹ ಸೇವೆಗೆ ಬರುತ್ತಿರುವುದು ಸಂತೋಷದ ಸಂಗತಿ ಎಂದು ತಿಳಿಸಿದರು.
ಡಿವೈಎಸ್ಪಿ ಎಸ್.ಬಿ. ಗಿರೀಶ ತರಬೇತಿ ಶಾಲೆಯ ವರದಿ ವಾಚಿಸಿದರು. ಇದೇ ಸಂದರ್ಭದಲ್ಲಿ 9ನೇ ತಂಡದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆರಂಭದಲ್ಲಿ ಮುಖ್ಯ ಅತಿಥಿಗಳಿಂದ ತಂಡಗಳ ಪರಿವೀಕ್ಷಣೆ, ನಿಧಾನ ಹಾಗೂ ತ್ವರಿತಗತಿಯ ಪಥಸಂಚಲನ, ಗೌರವ ವಂದನೆ, ಧ್ವಜಗಳ ಆಗಮನ, ಪೊಲೀಸ್ ಬ್ಯಾಂಡ್‌ನಿಂದ ರಾಷ್ಟ್ರಗೀತೆ, ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಒಳಾಂಗಣ ಮತ್ತು ಹೊರಾಂಗಣ ಬೋಧಕರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ವಾಗತಿಸಿದರು. ಜಾಸ್ಮಿನ್ ಕಿಲ್ಲೇದಾರ ನಿರೂಪಿಸಿದರು. ಸಂಜೀವ ಕಾಂಬಳೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.