ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೊಡಿ
Team Udayavani, Mar 28, 2022, 6:31 PM IST
ಮುದ್ದೇಬಿಹಾಳ: ರಾಜ್ಯವ್ಯಾಪಿ ಇರುವ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಕೊಡಬೇಕೆಂದು ಆಗ್ರಹಿಸಿ ಎ. 14ರ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ದಿನದಂದು ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದು ಈಗಾಗಲೇ ಪೂರ್ವತಯಾರಿ ಭರದಿಂದ ಸಾಗಿವೆ ಎಂದು ಬೇಡ ಜಂಗಮ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಮುಖ ಮತ್ತು ಬೇಡ ಜಂಗಮ ರಥಯಾತ್ರೆ ಸಂಚಾಲಕ ಅರುಣಕುಮಾರ ಜಡಿಮಠ ಹೇಳಿದರು.
ಪಟ್ಟಣಕ್ಕೆ ರವಿವಾರ ಆಗಮಿಸಿದ ಬೇಡ ಜಂಗಮ ರಥಯಾತ್ರೆಯ ವಾಹನವನ್ನು ಸ್ವಾಗತಿಸಿಕೊಂಡು, ಕುಂಭ ಸಮೇತ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಕರೆತಂದಾಗ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಬೇಡ ಜಂಗಮ ರಥಯಾತ್ರೆಯ ಮೂಲಕ ಸಮಾಜದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬೇಡ ಜಂಗಮ ಪ್ರಮಾಣ ಪತ್ರದ ಮಹತ್ವವನ್ನು ಎಲ್ಲರಿಗೂ ತಿಳಿಸಿಕೊಡಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ರಾಜ್ಯವ್ಯಾಪಿ ಅಸಂಖ್ಯಾತ ಜಂಗಮ ಸಮಾಜದ ಪ್ರತಿನಿ ಗಳು ಆಗಮಿಸಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯ ಮಾಡುವ ಮೂಲಕ ರಾಜ್ಯವ್ಯಾಪಿ ಏಕರೂಪದ ಆದೇಶ ಮಾಡಲು ಮನವಿ ಮಾಡುತ್ತೇವೆ ಎಂದರು.
ಮುದ್ದೇಬಿಹಾಳ ತಾಲೂಕು ವೀರಶೈವ ಜಂಗಮ ಸಮಾಜದ ಸಲಹಾ ಸಮಿತಿಯ ಹಿರಿಯ ಸದಸ್ಯರಾದ ಶಿವಾನಂದ ಹಿರೇಮಠ, ಉಪಾಧ್ಯಕ್ಷ ದಾನಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಆರ್.ಐ. ಹಿರೇಮಠ, ಸಂಘದ ಖಜಾಂಚಿ ಮಹಾಂತೇಶ ಬೂದಿಹಾಳಮಠ ಮತ್ತು ಜಂಗಮ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಹಿರೇಮಠ ಅವರು ಈ ಸಂದರ್ಭ ಮಾತನಾಡಿ ಬೇಡ ಜಂಗಮರನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಿ ರಾಜ್ಯವ್ಯಾಪಿ ಏಕರೂಪದ ಪ್ರಮಾಣ ಪತ್ರ ಕೊಡಬೇಕು ಎನ್ನುವುದು ನಮ್ಮ ಸಮಾಜದ ಹಲವು ವರ್ಷಗಳ ಬೇಡಿಕೆಯಾಗಿದೆ. ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ಎಲ್ಲ ತಾಲೂಕುಗಳಿಂದಲೂ ಸಮಾಜ ಬಾಂಧವರು ತೆರಳಿ ಸರ್ಕಾರಕ್ಕೆ ಒತ್ತಾಯ ಮಾಡಲು ಮುಂದಾಗಬೇಕು ಎಂದರು.
ಇದೇ ವೇಳೆ ಮಾತನಾಡಿದ ಎಲ್ಲ ಮುಖಂಡರು, ಸರ್ಕಾರವು ಪ್ರತಿ ವರ್ಷ ಮಾ. 16ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವ ಕುರಿತು ಆದೇಶ ಹೊರಡಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಸಂಘದ ಗೌರವಾಧ್ಯಕ್ಷ ಅರವಿಂದ ಲದ್ದಿಮಠ, ಅಧ್ಯಕ್ಷ ಸಿದ್ದಲಿಂಗಯ್ಯ ಕಲ್ಯಾಣಮಠ, ಸಂಘಟನಾ ಕಾರ್ಯದರ್ಶಿ ವೀರೇಶ ಹಿರೇಮಠ, ಪುರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಸನ್ನಕುಮಾರ ಮಠ, ಪ್ರಮುಖರಾದ ಮಂಜು ಅಬ್ಯಾಳಮಠ ಕುಂಟೋಜಿ, ಮುತ್ತಯ್ಯ ಹಿರೇಮಠ, ಸಿದ್ದಯ್ಯ ಗಣಾಚಾರಿ, ಶಂಕರ ಹಿರೇಮಠ, ಜಂಗಮ ಸಮಾಜ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ತೆಗ್ಗಿನಮಠ, ಗುರಯ್ಯ ಮುದ್ನೂರಮಠ, ಶಂಕರ ಸಾಲಿಮಠ, ಶಿವಾನಂದ ಸಾಲಿಮಠ, ಸಿದ್ದು ಹಿರೇಮಠ, ಗಿರಿಜಾ ಶಿವಯೋಗಿಮಠ, ಸಂಗಮ್ಮ ಸಾಲಿಮಠ, ಚಂದ್ರಶೇಖರ ಶಿವಯೋಗಿಮಠ, ಗೌರಮ್ಮ ಕಲ್ಯಾಣಮಠ, ಬೇಬಿ ಹಿರೇಮಠ ಸೇರಿ ಹಲವರು ಪಾಲ್ಗೊಂಡಿದ್ದರು.
ಬಸವೇಶ್ವರ ವೃತ್ತದಿಂದ ಜೈಕಾರದೊಂದಿಗೆ ಮರಳಿ ಡಾ| ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ರಥಯಾತ್ರೆಯನ್ನು ತಾಳಿಕೋಟೆ ಪಟ್ಟಣದತ್ತ ಬೀಳ್ಕೊಡಲಾಯಿತು. ರಥಯಾತ್ರೆಯ ಸಂಚಾಲಕ ಜಡಿಮಠ, ಹಿರೇಮಠ ಮತ್ತಿತರರು ರಥಯಾತ್ರೆಯ ವಾಹನ ಸಮೇತ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.