dk shivakumar ರಾಜೀನಾಮೆ ಪಡೆಯುವ ಧೈರ್ಯ ಸಿದ್ದರಾಮಯ್ಯಗೆ ಇದೆಯಾ?: ಯತ್ನಾಳ್ ಪ್ರಶ್ನೆ
Team Udayavani, Aug 14, 2023, 3:27 PM IST
ವಿಜಯಪುರ: ಓರ್ವ ಗುತ್ತಿಗೆದಾರ ಶೇ.15 ರಷ್ಟು ಲಂಚ ಕೇಳಿದ್ದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪ ಸುಳ್ಳಾದರೆ ಶಿವಕುಮಾರ ತಾವೇ ನಂಬಿರುವ ನೊಣವಿನಕೆರೆ ಗುರುವಿನ ಮೇಲೆ ಆಣೆ – ಪ್ರಮಾಣ ಮಾಡಲಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದ್ದಾರೆ.
ಸೋಮವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಇಂಥ ಆರೋಪ ಕೇಳಿ ಬರುತ್ತಲೇ ರಾಜೀನಾಮೆ ಪಡೆಯಲಾಗಿತ್ತು. ತನಿಖೆ ನಡೆಸಿದಾಗ ಆರೋಪ ಸಾಬೀತಾಗಿರಲಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಂಚ ಕೇಳಿದ ಆರೋಪಿ ಡಿಸಿಎಂ ಶಿವಕುಮಾರ ರಾಜೀನಾಮೆ ಪಡೆಯುವ ಧೈರ್ಯ ಇದೆಯೇ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಭ್ರಷ್ಟಾಚಾರ ವ್ಯಾಪಕವಾಗಿದೆ. ಕಾಂಗ್ರೆಸ್ ಏಜೆಂಟ್ ಕೆಂಪಣ್ಣ ಅವರನ್ನು ಬಿಟ್ಟು ಉಳಿದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಡುತ್ತಿದ್ದಾರೆ. ನೀವು ಎಲ್ಲ ಗುತ್ತಿಗೆದಾರರ ಬಳಿ ಶೇ.15 ಕಮಿಷನ್ ಕೇಳಿದ್ದೀರಿ ಎಂದು ಡಿಸಿಎಂ ಡಿಕೆ ಶಿವಕುಮಾರಗೆ ಓರ್ವ ಗುತ್ತಿಗೆದಾರ ನೇರ ಸವಾಲು ಹಾಕಿದ್ದಾರೆ.
ಶಿವಕುಮಾರ ವಿರುದ್ಧ ಗುತ್ತಿಗೆದಾರ ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಭ್ರಷ್ಟಾಚಾರದ ಆರೋಪಿ ಡಿಸಿಎಂ ಶಿವಕುಮಾರ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದರು.
ಬಿಜೆಪಿ ಸರ್ಕಾರ ಇದ್ದಾಗ ನಿರಂತರ ಆರೋಪ ಮಾಡುತ್ತಿದ್ದ ಕೆಂಪಣ್ಣ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಮೌನವಾಗಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದುದಕ್ಕೆ ಗುತ್ತೇದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ. 3500 ಕೋಟಿ ರೂ. ಬಾಕಿ ಪಾವತಿಯಾಗದೇ ಗುತ್ತಿಗೆದಾರರು ಕಂಗಾಲಾಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಯತ್ನಾಳ ಟೀಕಾ ಪ್ರಹಾರ ನಡೆಸಿದರು.
ಪತನ ಗ್ಯಾರಂಟಿ: ಲೋಕಸಭಾ ಚುನಾವಣೆ ಮುನ್ನ ಅಥವಾ ಚುನಾವಣೆಯ ಬಳಿಕ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ. ನೀವು ಮನಗೆ ಹೋಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಯತ್ನಾಳ ಭವಿಷ್ಯ ನುಡಿದರು. ನಿಮ್ಮ ಗ್ಯಾರಂಟಿ ಹೆಸರಿನ ಉಚಿತ ಯೋಜನೆಗಳಿಗೆ ಜನರು ಉಚಿತ ಮತ ಹಾಕಲ್ಲ. ಅದರಿಂದ ನಿಮ್ಮ ಪತನ ಖಚಿತ ಎಂದರು.
ಕಾಂಗ್ರೆಸ್ ಸರ್ಕಾರದ ವರ್ಗಾವಣೆ ದಂಧೆ, ಐದು ಗ್ಯಾರಂಟಿಗಳ ಮೋಸತನ, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಶಾಸಕರ ಅಸಮಾಧಾನ ಬಹಿರಂಗವಾಗಿ ಸ್ಫೋಟಗೊಂಡಿದೆ. ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ, ಏನು ಕೇಳಿದರೂ ಗ್ಯಾರಂಟಿ ನೆಪ ಹೇಳುತ್ತಿದ್ದಾರೆ ಎಂದು ಮೂರೇ ತಿಂಗಳಲ್ಲಿ 136 ರಲ್ಲಿ 90 ಸ್ವಪಕ್ಷೀಯ ಶಾಸಕರಿಂದಲೇ ಆಕ್ರೋಶ ಜೋರಾಗಿದೆ. ಈ ಆಧಾರದಲ್ಲಿ ಆರು ತಿಂಗಲ್ಲಿ ಕಾಂಗ್ರೆಸ್ ಸರ್ಕಾರ ಸ್ವಯಂಕೃತ ಅಪರಾಧದಿಂದ ಪತನವಾಗಲಿದೆ. ಇದಕ್ಕೆ ಬಿಜೆಪಿ ಪಕ್ಷದ ಅಥವಾ ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಪ್ರಯತ್ನವೂ ಬೇಕಿಲ್ಲ. ಸರ್ಕಾರ ಪತನ ಮಾಡುವ ಕುರಿತು ನಾವು ಯಾರೊಂದಿಗೂ ಚರ್ಚಿಸಿಲ್ಲ. ಕಾಂಗ್ರೆಸ್ ಶಾಸಕರೇ ಇಂಥ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರೇ ಹೇಳುತ್ತಿದ್ದಾರೆ ಎಂದರು.
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಮಸ್ಯೆಯಾಗಿದೆ. ವರ್ಗಾವಣೆಗೆ ರೇಟ್ ಫಿಕ್ಸ್ ಅಗಿದೆ, ಸಿಎಂ ಸೂಪರ್ ಸಿಎಂ ಡಿಸಿಎಂ ಲೂಟಿ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ಶಾಸಕರಿಗೆ ಅದಾಯ ಸಿಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ, ಯತೀಶ್, ಯತೀಂದ್ರ ಅದರಿಂದಲೇ ಎಲ್ಲ ವ್ಯವಹಾರ ನಡೆಯುತ್ತವೆ ಎಂದು ಆರೋಪ ಕೇಳಿ ಬರುತ್ತಿದೆ ಎಂದರು.
ಸಾರಿಗೆ, ಶಿಕ್ಷಣ ಇಲಾಖೆ ನೌಕರರಿಗೆ ಸಂಬಳ ನೀಡಿಲ್ಲ. ಸರ್ಕಾರ ದಿವಾಳಿ ಆಗಿರುವುದಕ್ಕೆ ಇದು ಸಾಕ್ಷಿ. ನಮ್ಮ ಸರ್ಕಾರ ಸರ್ಧಾರ ವಲ್ಲಭಬಾಯಿ ಪಟೇಲ್ ಮೂರ್ತಿ ಮಾಡಿದಾಗ ವೇಸ್ಟ್ ಆಪ್ ಮನಿ ಎಂದಿದ್ದ ಕಾಂಗ್ರೆಸ್ ನಾಯಕರು ಇದೀಗ 500 ಕೋಟಿ ರೂ. ವೆಚ್ಚದಲ್ಲಿ ರಾಜೀವಗಾಂಧಿ ಪ್ರತಿಮೆ ಸ್ಥಾಪನೆಗೆ ಮುಂದಾಗಿದೆ ಎಂದು ಟೀಕಿಸಿದರು.
ಪಟೇಲರ ಪ್ರತಿಮೆ ವೀಕ್ಷಣೆಗೆ ಬರುವಂತೆ ರಾಜೀವ್ ಗಾಂಧಿ ಮೂರ್ತಿ ವೀಕ್ಷಣೆಗೆ ದೇಶದ ಯಾರು ಬರುವುದಿಲ್ಲ, ಅದೇ ಸೋನಿಯಾ, ರಾಹುಲ್ ಗಾಂಧಿ ಅವರಷ್ಟೇ ಬರಬೇಕು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು ಮೇಲೆ ಸಿದ್ದರಾಮಯ್ಯ ಹಿಡಿತವಿಲ್ಲ: ಬೆಂಗಳೂರಿನ ಎಲ್ಲ ಶಾಸಕರ ಬಾಯಿ ಮುಚ್ಚಿಸಿ ಡಿ.ಕೆ.ಶಿವಕುಮಾರ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರೇ ನೇರ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕತೆ ತೋರಿಸುತ್ತಿದ್ದಾರೆ.
ಸರ್ಕಾರದಲ್ಲಿನ ಭ್ರಷ್ಟಾಚಾರದ ಕುರಿತು ಅವರದೇ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಆರೋಪ ಮಾಡಿದ್ದಾರೆ ಎಂದು ಕುಟುಕಿದರು.
ಅರ್ಹತೆ ಇಲ್ಲದ ಅಧಿಕಾರಿಯನ್ನು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಮಾಡಿದ್ದಾರೆ. ನಗರದಲ್ಲಿ ಅಭಿವೃದ್ದಿ ಕಾರ್ಯಗಳನ್ನು ತಡೆಯಲಾಗತ್ತಿದೆ. ತಮ್ಮ ಸರ್ಕಾರ ಐದು ವರ್ಷದ ಅಧಿಕಾರದಲ್ಲಿ ಇರಲಿದೆ ಎಂಬ ಭ್ರಮೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಜಿಲ್ಲೆಯಲ್ಲಿ ಕೆಟ್ಟ ಚಾಳಿ ಮುಂದುವರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.