Threat: ಭಯಬೇಡ, ಬಾಂಬ್ ಹುಸಿ ಬೆದರಿಕೆ: ಜಿಲ್ಲಾಡಳಿತ
Team Udayavani, Jan 6, 2024, 3:09 PM IST
ವಿಜಯಪುರ: ಐತಿಹಾಸಿಕ ಗೋಲ್ ಗುಂಬಜ್ ಆವರಣದಲ್ಲಿರುವ ಪಾರಂಪರಿಕ ವಸ್ತುಸಂಗ್ರಹಾಲಯಕ್ಕೆ ಬಾಂಬ್ ಇರಿಸಿರುವ ಇ-ಮೇಲ್ ಸಂದೇಶ ಹುಸಿ ಬೆದರಿಕೆಯಾಗಿದೆ. ಪೊಲೀಸರು ಪರಿಶೀಲಿಸಿದ್ದು, ಸಾರ್ವಜನಿಕರು ಭಯಪಡಬೇಕಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಭೂಬಾಲನ್, ಐತಿಹಾಸಿಕ ಗೋಲ್ಗುಂಬಜ್ ಪರಿಸರದಲ್ಲಿ ಬಾಂಬ್ ಇರಿಸಿರುವ ಹುಸಿ ಮೇಲ್ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದರು.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಜಯಪುರ ಎಸ್ಪಿ ಋಷಿಕೇಶ ಭಗವಾನ್, ವಿಜಯಪುರದ ಗೋಲ್ಗುಂಬಜ್ ಆವರಣದಲ್ಲಿರುವ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ದೇಶದಾದ್ಯಂಥ ಇರುವ ವಿವಿಧ ವಸ್ತುಸಂಗ್ರಹಾಲಯಗಳ ಮೇಲ್ ಐಡಿಗಳಿಗೆ ಬಾಂಬ್ ಬೆದರಿಕೆ ಕುರಿತ ಇ-ಮೇಲ್ ಕಳುಹಿಸಲಾಗಿತ್ತು. ಪರಿಶೀಲನೆ ಬಳಿಕ ಈ ಬಾಂಬ್ ಬೆದರಿಕೆ ನಕಲಿ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಘಟನೆಯ ಕುರಿತು ಎನ್ಸಿ ದಾಖಲಿಸಿದ್ದು, ಎಫ್ಐಆರ್ ದಾಖಲಿಸುವುದಕ್ಕೆ ನ್ಯಾಯಾಲಯದ ಅನುಮತಿಗೆ ಕಾಯಲಾಗುತ್ತಿದೆ ಎಂದು ವಿವರಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.