ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ
Team Udayavani, Oct 18, 2021, 3:23 PM IST
ಸಿಂದಗಿ: ಸಿಂದಗಿ ಉಪಚುನಾವಣೆ ನಿಮಿತ್ತ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಅವರ ಪರ ಚುನಾವಣಾ ಪ್ರಚಾರ ಅ. 18ರಿಂದ ಪ್ರಾರಂಭಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ರವಿವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ, ಕುಮಾರಸ್ವಾಮಿ ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ನನ್ನ ಅಭಿಪ್ರಾಯದಂತೆ ಈ ಕ್ಷೇತ್ರದಲ್ಲಿ ಕೆಲಸ ಮಾಡಿರುವುದನ್ನು ಗುರುತಿಸುವವರು ಸಾಕಷ್ಟು ಜನರಿದ್ದಾರೆ. ನಾವು ಚುನಾವಣೆ ಪ್ರಚಾರದಲ್ಲಿ ಯಾವ ಪಕ್ಷದ ಬಗ್ಗೆ ಮಾತನಾಡೋದಿಲ್ಲ. ನಮ್ಮ ಸಾಧನೆ ಬಗ್ಗೆ ಮಾತನಾಡಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರು ಜೆಡಿಎಸ್ ಪಕ್ಷದವರೆಂದು ಹೇಗೆ ಹೇಳುವುದು. ಯಾರು ಪಕ್ಷದಿಂದ ಬಿಟ್ಟು ಹೋಗುತ್ತಾರೋ ಎಂದು ನೋಡೋದಿಲ್ಲ. ನಾವು ಮತದಾರರ ಬಳಿ ನೇರವಾಗಿ ಹೋಗಿ ಮತಯಾಚನೆ ಮಾಡುತ್ತೇವೆ. ಚುನಾವಣೆ ಪ್ರಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಸೇರಿದಂತೆ ರಾಜ್ಯದ, ಜಿಲ್ಲೆಯ ಮುಖಂಡರು ಭಾಗವಹಿಸುವರು.ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ, ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ಮಂಗಳಾದೇವಿ ಬಿರಾದಾರ, ಎಂ.ಎಸ್. ಪಾಟೀಲ ಹಲಸಂಗಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ, ತಾಲೂಕು ಮಾಜಿ ಅಧ್ಯಕ್ಷ ಪ್ರಕಾಶ ಹಿರೇಕುರಬರ, ಜಿಪಂ ಮಾಜಿ ಸದಸ್ಯ ಗುರುರಾಜಗೌಡ ಪಾಟೀಲ ಚಾಂದಕವಠೆ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.