Muddebihala:ಕಬ್ಬಿನ ತೂಕದಲ್ಲಿ ಮೋಸ ತಡೆಯಲು ಇಲೆಕ್ಟ್ರಾನಿಕ್ ವೇಯಿಂಗ್ ಮೆಷಿನ್: ಸಚಿವ ಪಾಟೀಲ
Team Udayavani, Oct 29, 2023, 2:49 PM IST
ಮುದ್ದೇಬಿಹಾಳ: ಕೆಲವು ಸಕ್ಕರೆ ಕಾರ್ಖಾನೆಯವರು ರೈತರು ಕಾರ್ಖಾನೆಗೆ ತರುವ ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವ ಬಗ್ಗೆ ದೂರು ಕೇಳಿಬರುತ್ತಿದೆ. ರೈತರು ಈ ಬಗ್ಗೆ ಆಧಾರ ಸಮೇತ ದೂರು ಸಲ್ಲಿಸಿದರೆ ಅಂಥ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಮುಂದಿನ ವರ್ಷದಿಂದ ಈ ಅಕ್ರಮ ತಡೆಯಲು ಸರ್ಕಾರದ ವತಿಯಿಂದಲೇ ಇಲೆಕ್ಟ್ರಾನಿಕ್ ವೇಯಿಂಗ್ ಮಷಿನ್ ಅಳವಡಿಸಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಆ.29ರ ರವಿವಾರ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಡಾ. ಚನ್ಮವೀರ ದೇವರ ಪಟ್ಟಾಧಿಕಾರ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಕ್ಕರೆ ಕಾರ್ಖಾನೆಯಲ್ಲಿ ಉತ್ಪತ್ತಿಯಾಗುವ ಇಥೆನಾಲ್ ಸೇರಿ ಎಲ್ಲ ಉಪ ಉತ್ಪನ್ನಗಳ ಲಾಭಾಂಶ ರೈತರಿಗೆ ಹಂಚಿಕೆ ಮಾಡಬೇಕು. ಸರ್ಕಾರ ನಿಗದಿಪಡಿಸಿದ ಎಂ.ಆರ್.ಪಿ. ದರದಂತೆ ಕಬ್ಬು ಖರೀದಿಸಬೇಕು. ರೈತರಿಗೆ ಉಪಯುಕ್ತವಾಗಿ ಕೆಲಸ ಮಾಡಬೇಕು. ಈ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶ ಕಡ್ಡಾಯವಾಗಿ ಪಾಲಿಸಬೇಕು ಎಂದರು.
ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ, ಬಸವ ನಾಡು ಎನ್ನುವ ಹೆಸರು ಇಡಲು ಚರ್ಚೆ ನಡೆದಿರುವುದು ರಾಜಕೀಯ ಲಾಭದ ಹೊರತಾಗಿರಬೇಕು ಎಂದು ಪುನರುಚ್ಚರಿಸಿದ ಅವರು ನಾನೂ ಬಸವಾಭಿಮಾನಿ, ಬಸವ ನಾಡಿನ ಬಸವಭಕ್ತ. ರಾಜಕೀಯ ಕಾರಣಕ್ಕಾಗಿ ಹೆಸರು ಬದಲಾವಣೆ ವಿಷಯ ಮುನ್ನಲೆಗೆ ತರುವುದು ಶೋಭೆ ತರುವಂಥದ್ದಲ್ಲ ಎಂದರು.
ಡಿಸಿಸಿ ಬ್ಯಾಂಕ್ ಗೆ ಅವಿರೋಧ ಸಂತಸ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಮತ್ತೆ ನನ್ನನ್ನು ಅದ್ಯಕ್ಷನನ್ನಾಗಿ ಅವಿರೋಧ ಆಯ್ಕೆ ಮಾಡಿರುವುದು ಸಂತಸ ತರುವಂಥದ್ದು. ಬ್ಯಾಂಕಿನ ಶತಮಾನೋತ್ಸವ ಸಂಭ್ರಮದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಆದರೆ ಬ್ಯಾಂಕ್ ನ ನಿರ್ದೇಶಕರ ಅವಿರೋಧ ಆಯ್ಕೆಗೆ ಮುದ್ದೇಬಿಹಾಳ ಪಿಕೆಪಿಎಸ್ ಮತಕ್ಷೇತ್ರ ಸ್ಪರ್ಧೆ ನೀಡಿ ಅವಿರೋಧ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದು ವಿಷಾಧನೀಯ ಎಂದರು.
ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಇದ್ದರು. ಇದಕ್ಕೂ ಮುನ್ನ ಸಚಿವರು ಸಂಗಮನಾಥ ಮತ್ತು ಬಸವಣ್ಣನ ದರ್ಶನಾಶಿರ್ವಾದ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.