ಮಹಿಳಾ ವಿವಿ ಗುತ್ತಿಗೆ ನೌಕರರ ಕಾಯಂ ಶೀಘ್ರ


Team Udayavani, Jan 21, 2018, 4:52 PM IST

vij-1.jpg

ವಿಜಯಪುರ: ನಮ್ಮ ವಿಶ್ವವಿದ್ಯಾಲಯದಲ್ಲಿ ಮಂಜೂರಾಗಿರುವ ವಿವಿಧ ವಿಭಾಗಗಳ 47 ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯಾಪಾಲರು ಒಪ್ಪಿಗೆ ಸೂಚಿಸಿದ್ದು ಶೀಘ್ರ ನೇಮಕ ಮಾಡಿಕೊಳ್ಳಲಾಗುತ್ತದೆ. ಇದೇ ವೇಳೆ ದಶಕದಿಂದ ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 167 ನೌಕರರ ಸೇವೆ ಕಾಯಂ ಪ್ರಕ್ರಿಯೆಗೂ
ಚಾಲನೆ ನೀಡಲಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಡಾ| ಸಬಿಹಾಗೌಡ ಹೇಳಿದರು.

ಶನಿವಾರ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಬೋಧಕರ 60 ಮಂಜೂರಾತಿ ಹುದ್ದೆಗಳಲ್ಲಿ, 47 ಹುದ್ದೆ ಭರ್ತಿಗೆ ಮಾತ್ರ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸಲು ಸೇವಾ ನಿಯಮ ರೂಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ರಾಜ್ಯದ ಮಂಡ್ಯ ಹಾಗೂ ಸಿಂಧನೂರು ಸ್ನಾತಕೋತ್ತರ ಕೇಂದ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ವಿವಿಧ ವಿಭಾಗಗಳ ಕಟ್ಟಡ ನಿರ್ಮಾಣ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೇ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಿಳಾ ಪೊಲೀಸ್‌ ಠಾಣೆ ಆರಂಭಿಸುವ ಕುರಿತು ಸ್ಥಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. 

ಸಿಬ್ಬಂದಿ ಕೊರತೆ ಕಾರಣ ಪೂರ್ಣ ಪ್ರಮಾಣದಲ್ಲಿ ಮಹಿಳಾ ಠಾಣೆ ಆರಂಭ ವಿಳಂಬವಾಗುತ್ತಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಇದರ ಹೊರತಾಗಿಯೂ ವಿಶ್ವವಿದ್ಯಾಲಯದಲ್ಲಿ ಹಾಸ್ಟೆಲ್‌ ಸೇರಿದಂತೆ ಎಲ್ಲೆಡೆ ಖಾಸಗಿ ಭದ್ರತಾ ಸಿಬ್ಬಂದಿ ಸೇವೆ ಕಲ್ಪಿಸಲಾಗಿದೆ. ಆವರಣದಲ್ಲಿ ಮೂರು ಹೈಮಾಸ್ಟ್‌ ದೀಪ ಅಳವಡಿಸಿದ್ದು, ಇನ್ನೂ ಎರಡು ದೀಪ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈಚೆಗೆ ವಿಶ್ವವಿದ್ಯಾಲಯದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಬಲಿಯಾದ ಘಟನೆ ಆಘಾತಕಾರಿಯಾಗಿದೆ. ಹೀಗಾಗಿ ಸಾರಿಗೆ ಇಲಾಖೆಗೆ ಈ ಹಿಂದೆ ಹೆಚ್ಚಿನ ಟ್ರಿಪ್‌ ಬಸ್‌ ಸೇವೆ ಒದಗಿಸುವಂತೆ ಮಾಡಿಕೊಂಡ ಮನವಿಗೆ ಸ್ಪಂದನೆ ದೊರೆತಿದೆ. ತೊರವಿ ಗ್ರಾಮಕ್ಕೆ ಬರುವ ನಗರ ಸಾರಿಗೆ ಬಸ್‌ಗಳನ್ನು ವಿಶ್ವವಿದ್ಯಾಲಯದ ಆವರಣಕ್ಕೆ ವಿಸ್ತರಿಸಲಾಗಿದೆ.

ಪರಿಣಾಮ 27 ಟ್ರಿಪ್‌ ಇದ್ದ ಬಸ್‌ ಸೇವೆ ಈಗ 42ಕ್ಕೆ ಏರಿದೆ. ಅಲ್ಲದೇ ಸುರಕ್ಷತೆ ಇಲ್ಲದ ಕಾರಣ ವಿದ್ಯಾರ್ಥಿನಿಯರು ಆಟೋ, ಟಂಟಂ ಸೇರಿದಂತೆ ಖಾಸಗಿ ವಾಹನದಲ್ಲಿ ಪ್ರಯಾಣಕ್ಕೆ ನಿಬಂಧ ಹೇರಲಾಗಿದೆ. ಅಲ್ಲದೇ ಈ ಕುರಿತು ಜಾಗೃತಿಗಾಗಿ ಕಾರ್ಯಾಗಾರವನ್ನೂ ನಡೆಸಲಾಗಿದೆ. ಆಟೋ-ಟಂಟಂಗಳು ವಿಶ್ವವಿದ್ಯಾಲಯ ಪ್ರವೇಶ ನಿಷೇಧಿಸಲಾಗಿದೆ ಎಂದು ವಿವರಿಸಿದರು. ಹಾಸ್ಟೆಲ್‌ ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಸೌರ ವಿದ್ಯುತ್‌ ಅಳವಡಿಸಿದ್ದು, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ.

ಅಲ್ಲದೇ ಮೇಲ್ಮನೆ ಸದಸ್ಯ ಅರುಣ ಶಹಪುರ ಅವರ ಸಹಕಾರದಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಸಣ್ಣ ಪ್ರಮಾಣದ ಕೆರೆಯನ್ನೂ ನಿರ್ಮಿಸಲು ಯೋಜಿಸಲಾಗಿದೆ. 58 ಲಕ್ಷ ರೂ. ಯೋಜನೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಸೇರಿದಂತೆ 37 ಲಕ್ಷ ರೂ. ಹೊಂದಿಸಿಕೊಳ್ಳಲಾಗಿದ್ದು ಬಾಕಿ ಹಣವನ್ನು ವಿಶ್ವವಿದ್ಯಾಲಯ ಇತರೆ ಮೂಲಗಳಿಂದ
ಹೊಂದಿಸಿಕೊಳ್ಳಲಿದೆ ಎಂದರು

ಅಮೆರಿಕ ವಿವಿ ಜೊತೆ ಆನ್‌ಲೈನ್‌ ಶಿಕ್ಷಣ ವಿಜಯಪುರ: ತಮ್ಮ ವಿಶ್ವವಿದ್ಯಾಲಯ ಅಮೆರಿಕದ ನ್ಯೂಯಾರ್ಕ್‌ ಸ್ಟೇಟ್‌
ವಿವಿಯೊಂದಿಗೆ ಜಂಟಿಯಾಗಿ ಆನ್‌ಲೈನ್‌ ಕೋರ್ಸ್‌ ಆರಂಭಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ.ಸಬಿಹಾಗೌಡ ಹೇಳಿದರು.

ಶನಿವಾರ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯಪಾಲರ ಸಮ್ಮುಖದಲ್ಲಿ ಈಗಾಗಲೇ ಅಮೆರಿಕ ವಿಶ್ವವಿದ್ಯಾಲಯದೊಂದಿಗೆ ಜಂಟಿ ಕೋರ್ಸ್‌ ಆರಂಭಿಸಲು ಪರಸ್ಪರ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಗಿದೆ. ಉನ್ನತ ಶಿಕ್ಷಣ ಪಡೆಯುವ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರುವಂತೆ ಮಾಡಲು ಕೌಶಲ್ಯ ಹಾಗೂ ಸಂಹನದ ಕೊರತೆ ನೀಗಲು ಈ ಕೋರ್ಸ್‌ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

ಬರುವ ಶೈಕ್ಷಣಿಕ ವರ್ಷದಿಂದ 4 ಕೋರ್ಸ್‌ ಆರಂಭಿಸಲು ಯೋಜನೆ ರೂಪಿಸಿದ್ದು, ನಮ್ಮ ವಿಶ್ವವಿದ್ಯಾಲಯದೊಂದಿಗೆ ಸಂಲಗ್ನ ಹೊಂದಿರುವ ಅಧಿಕ ಸಂಖ್ಯೆಯಲ್ಲಿ ಕಂಪ್ಯೂಟರ್‌ ಹಾಗೂ ಇಂಟರ್‌ನೆಟ್‌ ಸಹಿತ ಸುಸಜ್ಜಿತ ಸೌಲಭ್ಯ ಇರುವ 10
ಖಾಸಗಿ ಕಾಲೇಜುಗಳಲ್ಲಿ ಈ ಕೋರ್ಸ್‌ ಆರಂಭಿಸಲು ನಿರ್ಧರಿಸಲಾಗಿದೆ. ಉಭಯ ವಿಶ್ವವಿದ್ಯಾಲಯಗಳು ಜಂಟಿ ಪ್ರಮಾಣ ಪತ್ರ ನೀಡಲಿದ್ದು, ಕೋರ್ಸ್‌ ಶುಲ್ಕ ಇನ್ನೂ ನಿಗದಿ ಆಗಿಲ್ಲ. ಸ್ನಾತಕ- ಸ್ನಾತಕೋತ್ತರ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಿದ್ದು ಹೆಚ್ಚಿನ ಉದ್ಯೋಗ ಅವಕಾಶಗಳು ಪಡೆಯಲು ಅವಕಾಶ ದೊರೆಯಲಿದೆ ಎಂದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.