ಹಾಸ್ಟೆಲ್ ಹೊರಗುತ್ತಿಗೆ ನೌಕರರ ಮುಷ್ಕರ ಅಂತ್ಯ
Team Udayavani, Dec 15, 2019, 2:48 PM IST
ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಪಂ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಿದ್ದ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಅಧಿಕಾರಿಗಳ ಲಿಖೀತ ಭರವಸೆ ಹಿನ್ನಲೆಯಲ್ಲಿ ಹೋರಾಟ ಹಿಂಪಡೆದಿದ್ದಾರೆ.
ನಗರದ ಜಿಪಂ ಕಚೇರಿ ಎದುರು ಡಿ. 9ರಿಂದ ಆರಂಭಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಅಹೋರಾತ್ರಿ ನಡೆದಿತ್ತು. ಅಂತಿಮವಾಗಿ ಸ್ಥಳಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅ ಧಿಕಾರಿ ಜಿ.ಎಂ. ದೊಡಮನಿ, ವಿಜಯಪುರ ಜಿಲ್ಲೆಯಲ್ಲಿ ನಮ್ಮ ಇಲಾಖೆ ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ಉಳಿದಿರುವ ಪಿಎಫ್, ಇಎಸ್‌ಐ ವಂತಿಗೆ ಹಣವನ್ನು ಗುತ್ತಿಗೆ ಪಡೆದ ಏಜೆನ್ಸಿಯಿಂದ ಭರಿಸಲಾಗುತ್ತದೆ. ಇದಲ್ಲದೇ ಸ್ಥಳೀಯ ಪರಿಹಾರ ಸಾಧ್ಯ ಇರುವ ಸಮಸ್ಯೆಗಳನ್ನು ಒಂದು ವಾರದೊಳಗೆ ಬಗೆಹರಿಸುವುದಾಗಿ ಲಿಖತ ಭರವಸೆ ನೀಡಿದರು. ಇದರಿಂದ ಸಂತೃಪ್ತರಾದ ಪ್ರತಿಭಟನಾ ನಿರತ ಹೊರ ಗುತ್ತಿಗೆ ನೌಕರರು, ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟವನ್ನು ಹಿಂಪಡೆದರು.
ಕಾರ್ಮಿಕ ಮುಖಂಡ ಭೀಮಶಿ ಕಲಾದಗಿ, ಹೊರ ಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಹುಲಗಪ್ಪ ಚಲವಾದಿ, ಲಕ್ಷ್ಮಣ ಹಂದ್ರಾಳ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಸಳಿ, ಕಾಶೀಮ ಆಲದಾಳ, ಪವಾಡೆಪ್ಪ ಚಲವಾದಿ, ನಿಂಗಪ್ಪ ವಾಲೀಕಾರ, ಬೋರಮ್ಮ ಬೇಳೂರ, ಶಾಂತಾ ಕ್ವಾಟಿ, ರಾಮವ್ವ ಭಜಂತ್ರಿ, ಬೋರಮ್ಮ ಎಲ್.ಜಿ., ಯಮನಪ್ಪ ಭಜಂತ್ರಿ, ಸಿದ್ದಮ್ಮ ಯಂಕಂಚಿ ಸೇರಿದಂತೆ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಕರ್ನಾಟಕ ರಾಜ್ಯ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ, ದಲಿತ ಸಂಘರ್ಷ ಸಮಿತಿ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.