Vijayapura ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನಿಗಾ: ಸಚಿವ ಎಂ.ಬಿ.ಪಾಟೀಲ್
Team Udayavani, Feb 25, 2024, 12:38 PM IST
ವಿಜಯಪುರ: ರಾಜ್ಯದಲ್ಲಿ ಶತಮಾನದಲ್ಲೂ ಕಾಣದ ಭೀಕರ ಬರ ಆವರಿಸಿದೆ. ಈ ದುಸ್ಥಿತಿಯಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲು ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹೊಂದಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಭಾನುವಾರ ನಗರಕ್ಕೆ ಕುಡಿಯುವ ನೀರು ಪೂರೈಸುವ ಕೃಷ್ಣಾ ನದಿಯಿಂದ ಭೂತನಾಳ ಕೆರೆ ತುಂಬಿಸುವ ತಿಡಗುಂದಿ ಅಕ್ವಾಡೆಕ್ಟ್ ಸ್ಥಳ ಪರಿಶೀಲನೆ ನಡೆಸಿ, ನೀರು ಹರಿಯುವ ಪ್ರಮಾಣ, ಅಕ್ವಾಡೆಕ್ಟ್ ನಿಂದ ನೀರು ಎತ್ತುವ ಪಂಪ್ ಗಳು, ವಿದ್ಯುತ್ ಪರಿಕರಗಳ ಸಾಮರ್ಥ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ನಗರಕ್ಕೆ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ಅಗತ್ಯ ಇರುವ ಎಲ್ಲ ವ್ಯವಸ್ಥೆಗಳನ್ನು ನಿರ್ಲಕ್ಷ್ಯ ತೋರದಂತೆ ತ್ವರಿತವಾಗಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರಕ್ಕೆ ಕುಡಿಯುವ ನೀರಿನ ಹೊರತಾಗಿ ಇತರೆ ಕೆಲಸಗಳಿಗೆ ನಗರದಲ್ಲಿರುವ ಪಾರಂಪರಿಕ ತೆರೆದ ಭಾವಗಳನ್ನು ಪುನಶ್ಚೇತನಗೊಳಿಸಿ, ಶಾಸ್ವತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ನಗರದ ತಾಜ್ ಬಾವಡಿ ಸೇರಿದಂತೆ ಪಾರಂಪರಿಕ ಕೆಲವು ಭಾವಡಿಗಳನ್ನು ಪುನಶ್ಚೇತನ ಮಾಡಿದರೂ ನೀರು ಬಳಕೆಯಲ್ಲಿ ನಿರ್ವಹಣೆ ಮಾಡಿಲ್ಲ. ಹೀಗಾಗಿ ನಗರದಲ್ಲಿರುವ ಪಾರಂಪರಿಕ ಎಲ್ಲ ಭಾವಿಗಳ ಪುನಶ್ಚೇತನಗೊಳಿಸಿ, ಅದರಿಂದ ಮನೆ ಬಳಕೆಗೆ ನೀರು ಸರಬರಾಜು ಮಾಡಲು ಸೂಚಿಸಿದ್ದೇನೆ ಎಂದರು.
ಇದರ ಭಾಗವಾಗಿ ಶತಮಾನದ ಹಿಂದೆ ಮುಂಬೈ ಸರ್ಕಾರದ ಸಲಹೆ ಮೇರೆಗೆ ಸರ್ ಎಂ.ವಿಶ್ವೇಶ್ವರಯ್ಯ ನಿರ್ಮಿಸಿರುವ ನಗರಕ್ಕೆ ಕುಡಿಯುವ ನೀರು ಪೂರೈಕೆಯ ಭೂತನಾಳ ಕೆರೆಗೆ ನೀರು ತುಂಬಿಸುವ ಕೆಲಸ ನಡೆದಿದೆ ಎಂದರು.
ನಿತ್ಯವೂ 19 ಎಂ.ಎಲ್.ಡಿ. ನೀರಿನ ಅಗತ್ಯವಿದ್ದು, 10 ಎಂ.ಎಲ್.ಡಿ. ನೀರು ಮಾತ್ರ ಲಭ್ಯವಾಗುತ್ತಿದೆ. ಹೀಗಾಗಿ ತಿಡಗುಂದಿ ಅಕ್ವಾಡೆಕ್ಟ್ ಮೂಲಕ ಭೂತನಾಳ ಕೆರೆಗೆ ನೀರು ತುಂಬಿಸುವ ಕೆಲಸ ನಡೆದಿದ್ದು, ಅರಕೇರಿ ಶಾಖಾ ಕಾಲುವೆ ಮೂಲಕವೂ ಸದರಿ ಕೆರೆಗೆ ನೀರು ತುಂಬಿಸುವ ಚಿಂತನೆ ನಡೆದಿದೆ ಎಂದರು.
ಇದಲ್ಲದೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಜಿಲ್ಲೆಯಲ್ಲಿ 9 ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ 1000 ಕಿ.ಮೀ. ಮುಖ್ಯ ಕಾಲುವೆಗಳ ನಿರ್ಮಾಣ ಮಾಡಿದ್ದು, ಇದರಿಂದ ಜಿಲ್ಲೆಯಲ್ಲಿ ನೂರಾರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಂಡು ಅಂತರ್ಜಲ ಮಟ್ಟ ಏರಿಕೆಯಾಗಿದೆ ಎಂದರು.
ಇದರ ಪರಿಣಾಮವಾಗಿ ಈ ಹಿಂದೆ ಬೇಸಿಗೆ ಸಂದರ್ಭದಲ್ಲಿ ಇಂಡಿ, ಚಡಚಣ ಭಾಗದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ 700 ಟ್ಯಾಂಕರ್ ಬೇಕಿದ್ದ ಸ್ಥಿತಿಯನ್ನು 35 ಟ್ಯಾಂಕರ್ ಗೆ ತಗ್ಗಿಸಲಾಗಿದೆ. ಇಂಡಿ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ 6 ತಿಂಗಳಲ್ಲಿ ಸದರಿ ಯೋಜನೆ ಪೂರ್ಣಗೊಂಡರೆ ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಬರವೇ ಇರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.