ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ
ಬಿಜೆಪಿ ಅಧಿಕಾರದಲ್ಲಿದ್ದಾಗ ಮೀಸಲು ಘೋಷಿಸಿದೆ: ಪಂಚಮಸಾಲಿ ಹೋರಾಟಕ್ಕೆ ಹೋಗಲ್ಲ
Team Udayavani, Sep 12, 2023, 6:34 PM IST
ವಿಜಯಪುರ: ಸಿದ್ಧರಾಮಯ್ಯರನ್ನು ಜೀವಂತವಾಗಿಯೇ ಬಿಜೆಪಿ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ. ಬಿಜೆಪಿ ಸೇರಲು ಅಂಗಲಾಚಿದರೂ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧವಿಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರು ಸತ್ತ ಮೇಲೆ ಬಿಜೆಪಿ ಸೇರಲು ಅವಕಾಶವೇ ಇಲ್ಲ ವಿಜಯಪುರ ನಗರದ ಕ್ಷೇತ್ರದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದಾರೆ.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮೀಸಲು ಘೋಷಿಸಿದೆ. ಹೀಗಾಗಿ ಇದೀಗ ಮತ್ತೆ ಆರಂಭವಾಗಿರುವ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳುವ ಅಗತ್ಯವಿಲ್ಲ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳ ಶಿಷ್ಯರೇ ಅಧಿಕಾರದಲ್ಲಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲಿ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಪಂಚಮಸಲಿ ಸಮುದಾಯ ಸೇರಿದಂತೆ ಎಲ್ಲ ಹಿಂದುಳಿದ ವರ್ಗಗಳಿಗೆ ರಾಜ್ಯಪಾಲರ ಸುಗ್ರೀವಾಜ್ಞೆ ಮೂಲಕ ಮೀಸಲಾಗಿ ಘೋಷಿಸಿದೆ. ಹೀಗಾಗಿ ಪದೇ ಪದೇ ಹೋರಾಟದಲ್ಲಿ ಪಾಲ್ಗೊಳ್ಳುವುದು ಅರ್ಥವಿಲ್ಲ ಎಂದರು.
ಬಸವ ಜಯಮೃತ್ಯುಂಜಯ ಶ್ರೀಗಳ ಶಿಷ್ಯರೇ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರದಲ್ಲಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಲಕ್ಷ್ಮೀ ಹೆಬ್ಬಾಳಕರ, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ ಶಾಸಕ-ಸಚಿವರಿದ್ದು, ಅವರದೇ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ಹೀಗಾಗಿ ನಮ್ಮ ಸರ್ಕಾರ ಎಲ್ಲ ಸಮಾಜಕ್ಕೆ ಘೋಷಿತ ಮೀಸಲಾತಿಯನ್ನು ಜಾರಿಗೆ ತರಬೇಕಷ್ಟೇ ಎಂದರು.
ಜಾತಿ ನಿಂದನೆ ಪ್ರಕರಣ ದಾಖಲಾಗಿರುವ ಹೀಗಾಗಿ ಕೂಡಲೇ ದಲಿತರ ಮೇಲೆ ದೌರ್ಜನ್ಯ ಎಸಗಿದ ಸಚಿವರನ್ನು ರಾಜೀನಾಮೆ ಪಡೆಯಬೇಕು, ಇಲ್ಲವೇ ವಜಾ ಮಾಡಬೇಕು. ಹಿನ್ನೆಲೆಯಲ್ಲಿ ಸಚಿವರಾಗಿ ಸಂವಿಧಾನ ವಿರೋಧಿ ಮನೋಭಾವದಿಂದ ದಲಿತರ ಮೇಲೆ ಜಾತಿ ನಿಂದನೆ ಮಾಡುವ ಮಟ್ಟಕ್ಕೆ ಹೋಗಿದ್ದು, ದಲಿತರ ಮೇಲೆ ಈ ಸರ್ಕಾರಕ್ಕೆ ಇರುವ ಗೌರವ ಏನು ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದರು.
ದೇಶ ವಿರೋಧಿ ಎಲ್‍ಟಿಟಿಇ ಪರ ಕೆಲಸ ಮಾಡಿದ ಕರುಣಾನಿಧಿ ತಳಿಯೇ ದೇಶದಲ್ಲಿ ಕೆಟ್ಟ ತಳಿ. ಜನರಲ್ಲಿ ವಿಷ ತುಂಬಿಸಿಯೇ ದ್ರಾವಿಡ ಪಕ್ಷದವರು ಧರ್ಮಕ್ಕೂ ನಿಷ್ಟರಲ್ಲ, ದೇಶಕ್ಕೂ ನಿಷ್ಟರಲ್ಲ ಎಂದು ಜರಿದ ಶಾಸಕ ಯತ್ನಾಳ, ಕರ್ನಾಟಕ, ಆಂಧ್ರ ಹಾಗೂ ತಮಿಳುನಾಡಿನಲ್ಲಿ ಪ್ರಕಾಶ ರೈ ಎಂಬ ವ್ಯಕ್ತಿಯೊಬ್ಬ ಅದೇ ರೀತಿ ವರ್ತಿಸುತ್ತಿದ್ದಾನೆ ಎಂದು ಟೀಕಾ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.