ತಂದೆ-ತಾಯಿ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ

Team Udayavani, Feb 5, 2018, 3:17 PM IST

vij-5.jpg

ಸಿಂದಗಿ: ಜಗತ್ತಿನಲ್ಲಿ ಮಾನವನಿಗಿರುವ ಎಲ್ಲ ಋಣಗಳ ಪೈಕಿ ತಂದೆ-ತಾಯಿ ಋಣವು ಅತ್ಯಂತ ಮಹತ್ವದ್ದಾಗಿದೆ ಎಂದು ಸಿಂದಗಿ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕ, ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಬಿ.ಎನ್‌. ಪಾಟೀಲ ಇಬ್ರಾಹಿಂಪುರ ಹೇಳಿದರು.

ತಾಲೂಕಿನ ಬೋರಗಿ-ಪುರದಾಳ ಗ್ರಾಮದ ವಿಶ್ವರಾಧ್ಯಮಠದಲ್ಲಿ ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳ 50ನೇ ಜನ್ಮದಿನ ಸವಿ ನೆನಪಿಗಾಗಿ ಹಮ್ಮಿಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ತಾಯಿಯ ಋಣ ವಿಷಯ ಕುರಿತು ಉಪನ್ಯಾಸ ನೀಡಿದರು. 

ತಾಯಿಯನ್ನು ದೇವರೆಂದು ತಿಳಿದವರಿಗೆ ಸಕಲ ಕಾರ್ಯಗಳು ಸಿದ್ಧಿಸುತ್ತವೆ. ಆದ್ದರಿಂದ ತಾಯಿಯ ಪ್ರೇಮವನ್ನು ಸಂಪಾದಿಸಿ ಜೀವನದಲ್ಲಿ ಸುಖ ಕಂಡುಕೊಳ್ಳಬೇಕು. ಜಗತ್ತಿನ ಮೊದಲನೇ ದೇವತೆ ತಾಯಿ. ಮಗುವನ್ನು ಹೆತ್ತು-ಹೊತ್ತು, ಲಾಲಿಸಿ-ಪಾಲಿಸಿ, ನಡೆ-ನುಡಿ  ಕಲಿಸಿ ನಮ್ಮೇಲ್ಲರಿಗೆ ವ್ಯವಾಹರಿಕ ಸಂಸ್ಕಾರ ನೀಡಿ ಬೆಳೆಸಿದ ಜನನಿ ಎಂದರು.

ಪ್ರಸ್ತುತ ದಿನದಲ್ಲಿ ತಾಯಿ- ಮಗುವಿನ ಮಾನಸಿಕ ಸಂಬಂಧ ಶಿಥಿಲಗೊಳ್ಳುತ್ತಿರುವುದು ವಿಷಾದಕರ ಸಂಗತಿ. ಹೆತ್ತವರ ಮತ್ತು ಮಕ್ಕಳ ನಡುವಿನ ಸಂಬಂಧ ಇಲ್ಲದಿದ್ದಲ್ಲಿ ನಮ್ಮ ಜೀವನ ಯಾಂತ್ರಿಕವಾಗುತ್ತಿದೆ. ಇಂದು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾವಂತ ಕುಂಟುಂಬಗಳಲ್ಲಿ ವೃದ್ಧ ತಂದೆ-ತಾಯಿ ಏಕಾಂತ ಜೀವನ ನಡೆಸುತ್ತಿದ್ದಾರೆ. ಇಂದು ಹೆತ್ತವರ ಮತ್ತು ಮಕ್ಕಳ ಮಾನಸಿಕ ಸಂಬಂಧ ಹೆಚ್ಚಾಗಬೇಕು. ಆಗ ಜೀವನ ಸ್ವರ್ಗ ಸುಖವಾಗುವುದು ಎಂದರು.

ಸಮ್ಮುಖ ವಹಿಸಿದ್ದ ಕಲಬುರಗಿ ಜಿಲ್ಲೆಯ, ಅಫಜಲಪುರ ತಾಲೂಕಿನ ಬ್ಯಾಡಗಿಹಾಳ ಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಮಹಿಳೆಯರು ತಾವು ಮಾಡುವ ಕಾಯಕ ಸತ್ಯ ಶುದ್ಧತೆಯಿಂದ ಕೋಡಿರಬೇಕು. ದುಡ್ಡಿನ ಆಸೆಗಾಗಿ ಎಂತೆಂತಹುದೋ ಕೆಲಸ ಮಾಡದರೇ ಪ್ರಯೋಜನವಿಲ್ಲ. ಕಾಯಕದಿಂದ ನಮಗೆ ಒಳಿತಾಗುವುದರ ಜೊತೆಗೆ ಸಮಾಜಕ್ಕೂ ಒಳಿತಾಗಬೇಕು. ಆದ್ದರಿಂದ ಸಾಮಾನ್ಯ ಮಹಿಳೆಯರು ಕೂಡಾ ಶರಣರ ಮಾರ್ಗಕ್ಕೆ ಬರಬೇಕು ಎಂದರು. 

ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳ 50ನೇ ಜನ್ಮದಿನ ಸವಿನೆನಪಿಗಾಗಿ 50 ದಿನ ವಿವಿಧ ಕಾರ್ಯಕ್ರಮ
ಜರಗುತ್ತವೆ. ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು ಆಶೀರ್ವಚನ ನೀಡುವರು. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವರಾಧ್ಯರ ಹಾಗೂ ಭೀಮಾಶಂಕರ ಮಹಾರಾಜರ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಮನುಷ್ಯ ತನ್ನ ಮರಣಕ್ಕಿಂತ ಮುಂಚೆ ಈ ಲೋಕದಲ್ಲಿ ಏನನ್ನು ಬಿತ್ತುತ್ತಾನೋ ಅವನ ಮರಣದ ನಂತರ ಪರಲೋಕ ಜೀವನದಲ್ಲಿ ಅದರ ಬೆಳೆ ಕೊಯ್ಯುವನು. ಮನುಷ್ಯರ ಬಗ್ಗೆ ಕರಣುವಿಲ್ಲದವನ ಮೇಲೆ ದೇವರು ಕೂಡಾ ಕರುಣೆ ತೋರುವುದಿಲ್ಲ. ಈ
ಜಗತ್ತಿನಲ್ಲಿ ಮಾನವನಿಗಿರುವ ಎಲ್ಲ ಋಣಗಳ ಪೈಕಿ ತಂದೆ-ತಾಯಿ ಋಣವು ಅತ್ಯಂತ ಮಹತ್ವದ್ದಾಗಿದೆ. ವೃದ್ಧ ತಂದೆ-ತಾಯಿಗಳನ್ನು ನಾವು ನಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು ಎಂದರು. 

ಮಕ್ಕಳ ಸಾಹಿತಿ ಶಿವಕುಮಾರ ಶಿವಸಿಂಪಿಗೇರ ಮಾತನಾಡಿದರು. ಸಂಗೀತಗಾರರಾದ ತಿಪ್ಪಣ್ಣ ಹೂಗಾರ, ಈರಣ್ಣ ಬಡಿಗೇರ ಸಂಗೀತ ಸೇವೆ ಸಲ್ಲಿಸಿದರು. ಕೆಂಚಪ್ಪ ಸಾಹುಕಾರ, ಡಾ| ನಾನಾಗೌಡ ಪುರದಾಳ, ಡಾ|ಶಿವು ಚಾವರ, ಮುದಕಪ್ಪ ಕೊಟಾರಗಸ್ತಿ, ಸಿದ್ದಯ್ಯಸ್ವಾಮಿ ಪುರದಾಳ, ಚಿದಾನಂದ ಡಂಬಳ, ಹನುಮಂತ ಬಿದರಕುಂದಿ, ಈರನಗೌಡ ಪಾಟೀಲ, ಶಿವಲಿಂಗ ಡಂಬಳ, ವಿಶ್ವದಳದ ಕಾರ್ಯಕರ್ತರು ಹಾಗೂ ಭಕ್ತರು ಇದ್ದರು. 

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.