ಪಕ್ಷದ ಘನತೆಗೆ ಧಕ್ಕೆ ತರುತ್ತಿರುವ ಯತ್ನಾಳರನ್ನು ಉಚ್ಛಾಟನೆ ಮಾಡಿ: ಭೀಮಾಶಂಕರ ಆಗ್ರಹ
Team Udayavani, May 7, 2022, 12:41 PM IST
ವಿಜಯಪುರ; ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಬಿಜೆಪಿ ಪಕ್ಷಕ್ಕೆ ಎಂದೂ ಒಳಿತಿಲ್ಲ. ಕೂಡಲೇ ಬಿಜೆಪಿ ಪಕ್ಷದಿಂದ ಯತ್ನಾಳ ಅವರನ್ನು ಉಚ್ಛಾಟಿಸಬೇಕು ಎಂದು ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಸಚಿವ ಸ್ಥಾನಕ್ಕಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲು ಬೇಡಿಕೆ ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸದಲ್ಲಿ ತೊಡಗಿರುವ ಅವರನ್ನು ಬಿಜೆಪಿ ಹೊರ ಹಾಕುವಂತೆ ಆಗ್ರಹಿಸಿದರು.
ನಿತ್ಯವೂ ವಿವಾದಾತ್ಮಕ ಹೇಳಿಕೆ ಮೂಲಕ ಮಾಧ್ಯಮಗಳಲ್ಲಿ ನಿರೂಪಕರು ಕಾಣದಿರಬಹುದು, ಆದರೆ ಯತ್ನಾಳ ಹೇಳಿಕೆಗಳು ಪಕ್ಷದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತುದ್ದು ಕೂಡಲೇ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಭೀಮಾಶಂಕರ ಆಗ್ರಹಿಸಿದರು.
ಪಂಚಮಸಾಲಿ ಸಮಾಜದ ಹೆಸರಿನಲ್ಲಿ ಸಚಿವರಾಗಲು ಸಮಾಜವನ್ನು ದುರ್ಬಳಕೆ ಮಾಡಿಕೊಂಡು, ಬ್ಲಾಕ್ ಮೇಲ್ ಮಾಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.
ಯತ್ನಾಳ ಅವರನ್ನು ಪಕ್ಷ ಈ ಹಿಂದೆ ಉಚ್ಚಾಟನೆ ಮಾಡಿದ್ದಾಗ ಅವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ವಿರೋಧಿಸಿದ್ದೆವು. ಆದರೂ ಪಕ್ಷದ ನಾಯಕರು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷ ಇದೀಗ ಮುಜುಗರ ಅನುಭವಿಸುವ ದುಸ್ಥಿತಿ ನಿರ್ಮಾಣ ಆಗಿದೆ ಎಂದು ಹೇಳಿದರು.
ಇದನ್ನೂ ಓದಿ:ಸಿಎಂಗೆ ರಾಜಕೀಯ ಬದ್ಧತೆಯಿದ್ದರೆ ಪಕ್ಷದ ಗೌರವ ಉಳಿಸಿಕೊಳ್ಳಲಿ: ಡಿಕೆ ಶಿವಕುಮಾರ್
ವಾಜಪೇಯಿ ಸಂಪುಟದಲ್ಲಿ ಸಚಿವನಾಗಿದ್ದೆ ಎಂದು ರಾಜಕೀಯ ಮುತ್ಸದ್ದಿ ನಾಯಕನ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿರುವ ಯತ್ನಾಳ ಅವರಿಗೆ ವಾಜಪೇಯಿ ಅವರ ಹೆಸರು ಹೇಳುವ ನೈತಿಕತೆ ಇಲ್ಲ. ಈ ಹಿಂದೆ ಕಾಂಗ್ರೆಸ್ ಸೇರಲು ಹೊರಟಿದ್ದ ಯತ್ನಾಳ, ಬಿಜೆಪಿ ಅಧಿಕೃತ ಅಭ್ಯರ್ಥಿ ಜಿ.ಎಸ್. ನ್ಯಾಮಗೌಡ ವಿರುದ್ಧ ಸ್ಪರ್ಧೆ ಮಾಡಿ ಸೋಲಿಸಿದರು. ನಿಮಗೆ ಟಿಕೆಟ್ ನೀಡಿದರೆ ಮಾತ್ರ ಪಕ್ಷ, ಇಲ್ಲದಿದ್ದರೆ ನಾಯಕರ ನಿಂದನೆ ಎಂಬ ವರ್ತನೆ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ಇದೇ ಯತ್ನಾಳ ಈ ಹಿಂದೆ ಬಸವಜಯ ಮೃತ್ಯುಂಜಯ ಶ್ರೀಗಳ ವಿರುದ್ಧವೂ ಮಾತನಾಡಿದ್ದರು. ಈಗ ಪಂಚಮಸಾಲಿ ಸಮಾಜದ ಪ್ರಶ್ನಾತೀತ ನಾಯಕ ಎಂಬಂತೆ ಬಿಂಬಿಸಿಕೊಳ್ಳಲು ಮುಂದಾಗಿದ್ದಾರೆ ಎಂದರು.
ಕಳೆದ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಯಡಿಯೂರಪ್ಪ ಪರ ಮಾತನಾಡಿದ್ದ ಯತ್ನಾಳ, ನಂತರ ಅವರನ್ನೇ ನಿಂದಿಸಲು ಆರಂಭಿಸಿದ್ದರು. ಸಮಾಜದ ಹೆಸರು ಹೇಳಿಕೊಂಡು ಸಚಿವರಾಗಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.