ಕೊರೊನಾ ನಿಯಂತ್ರಣದಲ್ಲಿ ವಿಫಲ: ಪಾಟೀಲ

Team Udayavani, May 12, 2021, 11:16 AM IST

jjjjjjjjjjjjjjjjjjjjjjjjjjj

ವಿಜಯಪುರ: ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಇಡಿ ರಾಜ್ಯದಲ್ಲೇ ಮೊದಲ ಬಾರಿಗೆ 700 ಬೆಡ್‌ಗಳ ಆಸ್ಪತ್ರೆ ಆರಂಭಿಸಿದ ಬಿಎಲ್‌ಡಿಇ ಸಂಸ್ಥೆಯ ಆಸ್ಪತ್ರೆಗೆ ಸರ್ಕಾರ ಅಗತ್ಯ ಆಕ್ಸಿಜನ್‌ ಕೂಡಾ ಪೂರೈಸುತ್ತಿಲ್ಲ ಎಂದು ಮಾಜಿ ಸಚಿವ, ಬಬಲೇಶ್ವರದ ಶಾಸಕ ಡಾ|ಎಂ.ಬಿ. ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ರೆಮ್‌ಡೆಸಿವಿಯರ್‌ ಔಷಧ ಹಂಚಿಕೆಯಾಗಿಲ್ಲ. ಆಕ್ಸಿಜನ್‌ ವಿಷಯದಲ್ಲೂ ಇದೇ ಸಮಸ್ಯೆ ಆಗಿದೆ. ಸುಪ್ರೀಂಕೋರ್ಟ್‌ ಉಪಕಾರದಿಂದ ನಮಗೆ ಆಕ್ಸಿಜನ್‌ ಸಿಗುತ್ತಿದೆ ಎಂದರು. ಈವರೆಗೆ ಕೇಂದ್ರ ಟಾಸ್ಕ್ ಫೋರ್ಸ್‌ ಸಭೆ ನಡೆಸಿ ಕೊರೊನಾ ನಿಯಂತ್ರಣ ಬಗ್ಗೆ ಗಂಭೀರ ಪ್ರಯತ್ನ ಮಾಡಿಲ್ಲ. ಕೊರೊನಾ ಎದುರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈಗ ಲಕ್ಷಾಂತರ ಜನ ಸಾಯುತ್ತಿದ್ದಾರೆ. ಇದಕ್ಕೆ ಹೊಣೆ ಯಾರು? ರಾಜ್ಯ ಸರಕಾರ ಮೂರನೇ ಅಲೆ ಕುರಿತು ಮಾತನಾಡುತ್ತಿದೆ. ಆದರೆ ಎರಡನೇ ಅಲೆ ತಡೆಯಲು ಆಗುತ್ತಿಲ್ಲ.ಕೇವಲ ಸುಳ್ಳು ಭರವಸೆ ನೀಡುತ್ತಿದೆ ಎಂದು ಟೀಕಿಸಿದರು.

ಉಸ್ತುವಾರಿ ಸಚಿವೆ ಹೆಣ್ಣು ಮಗಳಿದ್ದಾಳೆ. ಯಕ್ಸಂಬಾದಿಂದ ಬಂದು ಹೋದರೆ ಸಮಸ್ಯೆ ಬಗೆಹರಿಯಲ್ಲ. ಜಿಲ್ಲೆಯಲ್ಲಿ ಡೆತ್‌ ರೇಟ್‌ ಕಡಿಮೆ ಹೇಳುತ್ತಿದ್ದಾರೆ. ಸಾವಿಗಿಂತ ಕಡಿಮೆ ತೋರಿಸುತ್ತಿದ್ದಾರೆ. ಸಾವಿನ ಸತ್ಯ ಸಂಖ್ಯೆ ಹೇಳಿದರೆ ಸರಕಾರಕ್ಕೆ ಸಾವಿನ ಕೆಟ್ಟ ಹೆಸರು ಬರದಿರುವಂತೆ ಮಾಡುತ್ತಿದ್ದಾರೆ ಎಂದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಹಾಗೂ ಹಲವು ಬಡ ಜನರಿಗೆ ಅನುಕೂಲವಾಗಿರುವ ಇಂದಿರಾ ಕ್ಯಾಂಟೀನ್‌ ಪಾರ್ಸಲ್‌ನಿಂದ ಬದುಕುತ್ತಿದ್ದರು. ಅದನ್ನು ಬಂದ್‌ ಮಾಡಿ ವ್ಯವಸ್ಥೆ ಹದಗೆಡಿಸಿದ್ದಾರೆ. ಅನ್ನಭಾಗ್ಯ ತಡೆಯುವ ಹುನ್ನಾರ ನಡೆಸಿದ್ದಾರೆ.

ಬಿಪಿಎಲ್‌ ಕಾರ್ಡುದಾರರಿಗೆ ಕನಿಷ್ಠ ಆಂಧ್ರಪ್ರದೇಶ, ತಮಿಳುನಾಡು ಮಾದರಿಯಲ್ಲಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ನೋಟ್‌ ಪ್ರಿಂಟ್‌ ಮಾಡೋ ವಿಚಾರದಲ್ಲಿ ಹೇಳಿಕೆ ಸಚಿವ ನೀಡಿದ್ದ ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪಾಟೀಲ, ನೋಟ್‌ ಪ್ರಿಂಟ್‌ ಮಷೀನ್‌ ಇರಲಿಕ್ಕಿಲ್ಲ. ಆದರೆ, ನೋಟ್‌ ಎಣಿಸೊ ಮಷಿನ್‌ ಇರಬಹುದು . ಈಶ್ವರಪ್ಪ ನಿಮ್ಮ ಮಾತಿಗೆ ಲಗಾಮು ಇಲ್ಲ.ಉಡಾಫೆ ಮಾತನಾಡಿ ಜೀವ ತೆಗೆಯಬೇಡಿ ಎಂದರು.

200 ಆಕ್ಸಿಜನ್‌ ಬೆಡ್‌ ನಿರ್ಮಾಣ: ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಈಗಿರುವ 500 ಬೆಡ್‌ಗಳ ಜೊತೆ ಇನ್ನೂ 200 ಆಕ್ಸಿಜನ್‌ ಬೆಡ್‌ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು, ಸರ್ಕಾರ ಅಗತ್ಯ ಆಕ್ಸಿಜನ್‌ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಈಗಾಗಲೇ 300 ಆಕ್ಸಿಜನ್‌ ಬೆಡ್‌ಗಳಿವೆ. ಮತ್ತೆ 200 ಹೊಸ ಆಕ್ಸಿಜನ್‌ ಬೆಡ್‌ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಆಸ್ಪತ್ರೆಗೆ ಬೇಕಾಗುವಷ್ಟು ಆಕ್ಸಿಜನ್‌ ಸರ್ಕಾರ ಕೊಡುತ್ತಿಲ್ಲ. ಆಕ್ಸಿಜನ್‌ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ಹೇಗೆ ಎಂದು ಪ್ರಶ್ನಿಸಿದರು.

ಜಿಲ್ಲೆಯ ಜನತೆಯ ಉಪಕಾರ ನಮ್ಮ ಕುಟುಂಬದ ಮೇಲಿದೆ. ಅದನ್ನು ತೀರಿಸುವ ಕೆಲಸ ಮಾಡುತ್ತಿದ್ದೇವೆ. 200 ಹೆಚ್ಚುವರಿ ಬೆಡ್‌ ನಿರ್ಮಾಣಕ್ಕೆ ಮುಂದಾಗಿದ್ದು, ಕೊವಿಡ್‌ಗಾಗಿ 700 ಬೆಡ್‌ ನಿರ್ಮಾಣ ಮಾಡಿದ ಆಸ್ಪತ್ರೆ, ಅದು ಇಡಿ ರಾಜ್ಯದಲ್ಲೇ ಬಿಡಿಎಲ್‌ಇ ಆಸ್ಪತ್ರೆ ಮಾತ್ರ. ಅಗತ್ಯ ಆಕ್ಸಿಜನ್‌ ನೀಡಿದರೆ ಇನ್ನೂ ಹೆಚ್ಚಿನ ಸೇವೆ ನೀಡಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.