ಬೀಜ-ಗೊಬ್ಬರ ದಾಸ್ತಾನಿಗೆ ಅನ್ನದಾತರ ಮನವಿ
Team Udayavani, May 11, 2022, 3:11 PM IST
ವಿಜಯಪುರ: ಮುಂಗಾರು ಹಂಗಾಮಿನ ಬಿತ್ತನೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಸರಬರಾಜು ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ಉತ್ತರ ಪ್ರಾಂತದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎಂ.ಕೊಕರೆ, ಈಗಾಗಲೇ ಮಳೆಗಾಳ ಪ್ರಾರಂಭವಾಗಿ ಮುಂಗಾರು ಚುರುಕುಗೊಂಡಿದೆ. ಜೂನ್ ಮೊದಲದ ವಾರದಲ್ಲಿ ಮುಂಗಾರು ಬಿತ್ತನೆ ಆರಂಭಗೊಳ್ಳಲಿದೆ. ಕಾರಣ ಸಕಾಲದಲ್ಲಿ ರೈತರಿಗೆ ಗುಣಮಟ್ಟದ ಹಾಗೂ ರೋಗನಿರೋಧಕ ಶಕ್ತಿಯುಳ್ಳ ಬೀಜ ವಿತರಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಹೆಸರು, ಉದ್ದು, ಮೆಕ್ಕೆಜೋಳ, ಶೇಂಗಾ, ತೊಗರಿ, ಹತ್ತಿ ಬೀಜದ ಅಗತ್ಯ ಹೆಚ್ಚಾಗಿರುತ್ತದೆ. ಕಾರಣ ಸರ್ಕಾರ ಹಾಗೂ ಜಿಲ್ಲಾಡಳಿತ ರೈತ ಸಂಪರ್ಕ ಕೇಂದ್ರಗಳಲಿ ತ್ವರಿತವಾಗಿ ಜಿಲ್ಲೆಯ ರೈತರಿಗೆ ಅಗತ್ಯವಾಗಿರುವ ಬೀಜ-ಗೊಬ್ಬರವನ್ನು ದಾಸ್ತಾನು ಮಾಡಿಕೊಳ್ಳಬೇಕು. ತ್ವರಿತವಾಗಿ ವಿತರಣೆಗೂ ಕ್ರಮ ಕೈಗೊಂಡು ರೈತರಿಗೆ ಮುಂಗಾರು ಬಿತ್ತನೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಲ್ಲದೇ ಮುಂಗಾರು ಹಂಗಾಮಿನಲ್ಲಿ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ರಸಗೊಬ್ಬರ ಮಾರಾಟದ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಯಲು ಈಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ರೈತರಿಗೆ ಯಾವ ಬೀಜ-ಗೊಬ್ಬರದ ಸಮಸ್ಯೆ ಆಗದಂತೆ ಕೃಷಿ ಇಲಾಖೆ ಗಮನ ಹರಿಸಬೇಕು. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಕರ್ನಾಟಕ ಉತ್ತರ ಪ್ರಾಂತ ರಾಜ್ಯ ಉಪಾಧ್ಯಕ್ಷ ಗುರುನಾಥ ಬಗಲಿ, ಎಂ.ಆರ್.ಮುಲ್ಲಾ ಜಿಲ್ಲಾ ಕಾರ್ಯದರ್ಶಿ, ಎ.ಎಂ.ಪಾಟೀಲ, ಎಸ್. ಎಂ.ಬಿರಾದಾರ, ಕಾಮಣ್ಣ ಬಗಲಿ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.